ಬೆಂಗಳೂರು: ಕರ್ನಾಟಕ ಪ್ರವಾಸೋದ್ಯಮ ವ್ಯಾಪಾರ (ಸೌಲಭ್ಯ ಮತ್ತು ನಿಯಂತ್ರಣ) (ತಿದ್ದುಪಡಿ) ವಿಧೇಯಕ 2025 ವಿಧಾನ ಪರಿಷತ್ತಿನಲ್ಲಿ ಅಂಗೀಕಾರವಾಯಿತು.
ವಿಧಾನ ಸಭೆಯಿಂದ ಅಂಗೀಕೃತ ರೂಪದಲ್ಲಿರುವ 2025ನೇ ಸಾಲಿನ “ಕರ್ನಾಟಕ ಪ್ರವಾಸೋದ್ಯಮ ವ್ಯಾಪಾರ (ಸೌಲಭ್ಯ ಮತ್ತು ನಿಯಂತ್ರಣ) (ತಿದ್ದುಪಡಿ) ವಿಧೇಯಕ”ವನ್ನು ಮಾನ್ಯ ಕಾನೂನು, ನ್ಯಾಯ, ಮಾನವ ಹಕ್ಕುಗಳು ಮತ್ತು ಸಂಸದೀಯ ವ್ಯವಹಾರಗಳು ಮತ್ತು ಶಾಸನ ರಚನೆ ಹಾಗೂ ಪ್ರವಾಸೋದ್ಯಮ ಇಲಾಖೆ ಸಚಿವರಾದ ಹೆಚ್.ಕೆ. ಪಾಟೀಲ ಅವರು ವಿಧಾನ ಪರಿಷತ್ತಿನಲ್ಲಿ ಅಂಗೀಕಾರ ಮಾಡುವಂತೆ ಪರ್ಯಾಲೋಚನೆಗೆ ಮಂಡಿಸಿದರು.
ಕರ್ನಾಟಕ ಪ್ರವಾಸೋದ್ಯ ವ್ಯಾಪಾರ (ಸೌಲ್ಯಭ್ಯ ಮತ್ತು ನಿಯಂತ್ರಣ) ಅಧಿನಿಯಮ 2015 (ಕರ್ನಾಟಕ ಅಧಿನಿಯಮ ಸಂ 21, 2015) ನ್ನು ಮತ್ತುಷ್ಟು ತಿದ್ದುಪಡಿ ಮಾಡುವುದು ಅವಶ್ಯಕವೆಂದು ಪರಿಗಣಿಸಿ ಸಂಬಂಧಪಟ್ಟ ಜಿಲ್ಲೆಯ ವ್ಯಾಪ್ತಿಯಲ್ಲಿ ಪ್ರವಾಸೋದ್ಯಮ ವ್ಯಾಪರದ ಸೌಲಭ್ಯ ನಿಯಂತ್ರಿಸುವುದು ಮತ್ತು ಪ್ರಚಾರಕ್ಕೆ ಸಂಬಂಧಿಸಿದ ಪ್ರಸ್ತಾಪವನ್ನು ಪರಿಶೀಲಿಸಲು ಮತ್ತು ಸಲ್ಲಿಸಲು ಜಿಲ್ಲಾ ಮಟ್ಟದ ಮೇಲ್ವಿಚಾರಣಾ ಸಮಿತಿ ರಚಿಸುವ ಸಂಬಂಧ ತಿದ್ದುಪಡಿ ತರಲಾಗಿದ್ದು, ಈ ವಿಧೇಯಕಕ್ಕೆ ಅಂಗೀಕಾರ ನೀಡುವಂತೆ ಕೋರಿದರು.
ಸದನದಲ್ಲಿ ಪರಿಷತ್ ಸದಸ್ಯರುಗಳಾದ ಕೆ.ಎಸ್. ನವೀನ್, ಐವಾನ್ ಡಿಸೋಜಾ, ಪಿ.ಹೆಚ್. ಪೂಜಾರ್, ಡಿ.ಎಸ್. ಅರುಣ್, ಶ್ರೀಮತಿ ಹೇಮಲತ ನಾಯಕ್, ಹೆಚ್. ವಿಶ್ವನಾಥ್ ಅವರ ಸ್ಪಷ್ಟನೆಗಳಿಗೆ ಉತ್ತರ ನೀಡಿದ ಸಚಿವರು ವಿಧೇಯಕವನ್ನು ಅಂಗೀಕಾರಕ್ಕಾಗಿ ಮಂಡಿಸಿದರು. ನಂತರ ಮಾನ್ಯ ಸಭಾಪತಿಗಳಿಂದ ಕರ್ನಾಟಕ ಪ್ರವಾಸೋದ್ಯ ವ್ಯಾಪಾರ (ಸೌಲ್ಯಭ್ಯ ಮತ್ತು ನಿಯಂತ್ರಣ) (ತಿದ್ದುಪಡಿ) ವಿಧೇಯಕ 2025ಕ್ಕೆ ಅಂಗೀಕಾರ ದೊರೆಯಿತು.