ಬೆಂಗಳೂರು : 15ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವವು ಫೆಬ್ರವರಿ 29 ರಿಂದ ಮಾರ್ಚ್ 7 2024 ವರೆಗೆ ಬೆಂಗಳೂರಿನಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಕಾರ್ಯದರ್ಶಿಗಳು ಹಾಗೂ ಚಿತ್ರೋತ್ಸವದ ಕೋರ್ ಸಮಿತಿಯ ಅಧ್ಯಕ್ಷರಾದ ಡಾ.ತ್ರಿಲೋಕಚಂದ್ರ ಕೆ.ವಿ ಅವರು ತಿಳಿಸಿದರು.
ಇಂದು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಮಹಾತ್ಮಾಗಾಂಧಿ ಮಾಧ್ಯಮ ಕೇಂದ್ರದಲ್ಲಿ ಹಮ್ಮಿಕೊಂಡಿದ್ದ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಸಿದ್ಧತೆ ಕುರಿತು ಹಮ್ಮಿಕೊಂಡಿದ್ದ ಪತ್ರಿಕಾ ಗೋಷ್ಠಿಯಲ್ಲಿ ಅವರು ಮಾತನಾಡಿದರು.
ಚಲನಚಿತ್ರೋತ್ಸವದ ಉದ್ಘಾಟನಾ ಸಮಾರಂಭವನ್ನು ಫೆಬ್ರವರಿ 29 ರಂದು ವಿಧಾನಸೌಧದ ಮುಂಭಾಗದ ಭವ್ಯ ಮೆಟ್ಟಿಲುಗಳ ಮೇಲೆ ನಡೆಯಲಿದ್ದು, ಸಮಾರೋಪ ಸಮಾರಂಭವು ಮಾರ್ಚ್ 7ರಂದು ಬ್ಯಾಂಕ್ವೆಟ್ ಹಾಲ್ನಲ್ಲಿ ನಡೆಯಲಿದೆ ಎಂದರು.
ಚಲನಚಿತ್ರ ಸಂಘಟನೆಗಳ ಅಂತಾರಾಷ್ಟ್ರೀಯ ಮಹಾ ಒಕ್ಕೂಟ (FIAPF) ಮಾನ್ಯತೆ ಪಡೆದ ಈ ಚಲನಚಿತ್ರೋತ್ಸವದಲ್ಲಿ ರಾಷ್ಟ್ರೀಯ ಚಲನಚಿತ್ರ ಪ್ರತಿನಿಧಿಗಳು, ಚಲನಚಿತ್ರ ನಿರ್ಮಾಪಕರು, ಕಲಾವಿದರು. ನಿರ್ದೇಶಕರು, ತಂತ್ರಜ್ಞರು ಮತ್ತಿತರರು ಭಾಗವಹಿಸಲಿದ್ದಾರೆ. ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಅವರು ಚಿತ್ರೋತ್ಸವಕ್ಕೆ ಚಾಲನೆ ನೀಡಲಿದ್ದಾರೆ ಎಂದರು.
ಸಮಾರೋಪ ಸಮಾರಂಭ ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ನಲ್ಲಿ ನಡೆಯಲಿದ್ದು ಕರ್ನಾಟಕದ ಗೌರವಾನ್ವಿತ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಅವರು ಏಷಿಯನ್ ಭಾರತೀಯ ಹಾಗೂ ಕನ್ನಡ ಚಲನಚಿತ್ರ ಸ್ಪರ್ಧೆಗಳ ವಿಜೇತರಿಗೆ ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ ಎಂದರು.
ಸುಮಾರು 50ಕ್ಕೂ ಹೆಚ್ಚು ದೇಶಗಳಿಂದ 200ಕ್ಕೂ ಹೆಚ್ಚು ಗುಣಮಟ್ಟದ ಚಿತ್ರಗಳು, ಪ್ರದರ್ಶನಗೊಳ್ಳಲಿದ್ದು, ಏμÁ್ಯ ಚಲನಚಿತ್ರ ವಿಭಾಗ, ಭಾರತೀಯ ಚಲನಚಿತ್ರಗಳ ವಿಭಾಗ (ಚಿತ್ರಭಾರತಿ), ಕನ್ನಡ ಚಲನಚಿತ್ರಗಳ ವಿಭಾಗ, ಸಮಕಾಲೀನ ವಿಶ್ವ ಸಿನಿಮಾ, ಕನ್ನಡ ಜನಪ್ರಿಯ ಮನರಂಜನಾ ಚಿತ್ರಗಳು, ಅಂತಾರಾಷ್ಟ್ರೀಯ ಚಲನಚಿತ್ರ ವಿಮರ್ಶಕರ ಒಕ್ಕೂಟದ ಆಯ್ಕೆಯ ಚಿತ್ರಗಳು, ಜೀವನ ಚರಿತ್ರೆ, ದೇಶ ಕೇಂದ್ರಿತ ಸಿನಿಮಾ, ದೇಶದಲ್ಲಿ ಹೆಚ್ಚು ಪರಿಚಿತವಲ್ಲದ ಉಪಭಾμÉಗಳಲ್ಲಿ ತಯಾರಾದ ಚಿತ್ರಗಳ ವಿಶೇಷ ಚಿತ್ರಗಳು ಸೇರಿವೆ. ವಿಶ್ವದ ಪ್ರತಿಷ್ಠಿತ ಅಂತಾರಾಷ್ಟ್ರೀಯ ಚಿತ್ರೋತ್ಸವಗಳಲ್ಲಿ ಪ್ರದರ್ಶನ ಕಂಡ ಚಿತ್ರಗಳು ಸಮಕಾಲೀನ ವಿಶ್ವ ಸಿನಿಮಾ ವಿಭಾಗಗಳಲ್ಲಿ ಪ್ರದರ್ಶನ ಕಾಣಲಿವೆ ಎಂದರು.
ಬೆಂಗಳೂರಿನ ರಾಜಾಜಿನಗರದಲ್ಲಿರುವ ಒರಿಯಾನ್ ಮಾಲ್ನ ಪಿವಿಆರ್ ಸಿನಿಮಾದ 11 ಪರದೆಗಳು, ಚಾಮರಾಜ ಪೇಟೆಯಲ್ಲಿರುವ ರಾಜ್ಕುಮಾರ್ ಕಲಾಭವನ, ಬನಶಂಕರಿ ಎರಡನೇ ಹಂತದಲ್ಲಿರುವ ಸುಚಿತ್ರಾ ಚಿತ್ರ ಸಮಾಜದಲ್ಲಿ ಪ್ರತಿನಿಧಿಗಳಿಗೆ ಮಾರ್ಚ್ 1 ರಿಂದ ಚಲನಚಿತ್ರ ಪ್ರದರ್ಶನ ಆರಂಭವಾಗಲಿದೆ ಎಂದರು.
ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಆಯುಕ್ತರಾದ ಹೇಮಂತ ಎಂ ನಿಂಬಾಳ್ಕರ್ ಅವರು ಮಾತನಾಡಿ, ಮುಖ್ಯಮಂತ್ರಿಗಳು ಈ ಚಲನಚಿತ್ರೋತ್ವವವು ವಿಶೇಷವಾಗಿದ್ದು, ಮನುಷ್ಯನ ಘನತೆ, ಗೌರವ ಸಾಮಾಜಿಕ ನ್ಯಾಯ ಇಂತಹ ವಿಷಯಗಳಿರುವ ಸಿನಿಮಾಗಳನ್ನು ಚಲನಚಿತ್ರ ಉತ್ಸವಕ್ಕೆ ತರಬೇಕೆಂದು ತಿಳಿಸಿದ್ದಾರೆ. ಆ ನಿಟ್ಟಿನಲ್ಲಿ ಜನಗತ್ತಿನಲ್ಲಿ ಏನೇನು ನಡೆಯುತ್ತಿದೆ, ತಾತ್ವಿಕ, ವೈಚಾರಿಕತೆಯಿಂದ ಕೂಡಿರುವಂತಹ ಚಿತ್ರ ತರುವ ಪ್ರಯತ್ನ ಮಾಡಲಾಗುತ್ತಿದೆ. ಬೆಂಗಳೂರು ಚಲನಚಿತ್ರೋತ್ಸವದ ವೈಶಿಷ್ಟ್ಯವೇನು, ಮನುಷ್ಯನ ಜೀವನದಲ್ಲಿ ಬರುವಂತಹ ಜಲ್ವಂತ ಸಮಸ್ಯೆಗಳಿರುವ ರಾಷ್ಟ್ರೀಯ, ಅಂತರಾಷ್ಟ್ರೀಯ ಚಲನಚಿತ್ರಗಳನ್ನು ಕರ್ನಾಟಕದ ಜನರಿಗೆ ತೋರಿಸುವ ಪ್ರಯತ್ನ ಮಾಡಲಾಗುವುದು ಎಂದರು.
ಚಿತ್ರಗಳ ವಿವರಗಳನ್ನು
www.biftes.org ಯಲ್ಲಿ ನೋಡಬಹುದು. ಚಿತ್ರೋತ್ಸವದಲ್ಲಿ ಜಾಲತಾಣದಲ್ಲಿ ಪ್ರತಿನಿಧಿಗಳ ನೋಂದಣಿ ಕಾರ್ಯ ಫೆಬ್ರವರಿ 15 ರಿಂದ ಆರಂಭವಾಗಲಿದೆ. ಆಸಕ್ತರು ಚಿತ್ರೋತ್ಸವದ ಜಾಲತಾಣದಲ್ಲಿ ಪ್ರತಿನಿಧಿ ಶುಲ್ಕ ಪಾವತಿಸಿ ನೋಂದಾಯಿಸಿಕೊಳ್ಳಬಹುದು.
ಚಿತ್ರೋತ್ಸವದ ಪ್ರತಿನಿಧಿ ಪಾಸ್ ಸಾರ್ವಜನಿಕರಿಗೆ 800/- ರೂ.ಗಳು, ಚಿತ್ರೋದ್ಯಮದ ಸದಸ್ಯರು, ಚಿತ್ರ ಸಮಾಜಗಳ ಸದಸ್ಯರು, ಹಿರಿಯ ನಾಗರಿಕರಿಗೆ ಹಾಗೂ ವಿದ್ಯಾರ್ಥಿಗಳಿಗೆ 400/- ರೂಗಳಾಗಿದ್ದು, ಪ್ರತಿನಿಧಿಗಳ ನೊಂದಣಿ ನೆರವಿಗಾಗಿ ದೂರವಾಣಿ ಸಂಖ್ಯೆ 080-23493410 ಹಾಗೂ ಇ-ಮೇಲ್
[email protected] ಗೆ ಸಂಪರ್ಕಿಸಬಹುದು.
ಪತ್ರಿಕಾ ಗೋಷ್ಠಿಯಲ್ಲಿ ಚಿತ್ರೋತ್ಸವದ ಕಲಾತ್ಮಕ ನಿರ್ದೇಶಕರಾದ ಎನ್.ವಿದ್ಯಾಶಂಕರ್, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ನಿರ್ದೇಶಕರಾದ ಜಂಟಿ ನಿರ್ದೇಶಕರು ಹಾಗೂ ಚಿತ್ರೋತ್ಸವ ಸಮಿತಿಯ ಸದಸ್ಯರಾದ ಮಂಜುನಾಥ ಡೊಳ್ಳಿನ, ಕರ್ನಾಟಕ ಚಲನಚಿತ್ರ ಅಕಾಡೆಮಿಯ ರಿಜಿಸ್ಟ್ರಾರ್ ಹಾಗೂ ಸದಸ್ಯ ಕಾರ್ಯದರ್ಶಿಗಳಾದ ಹಿಮಂತರಾಜು.ಜಿ ಸೇರಿದಂತೆ ಇತರರು ಉಪಸ್ಥಿತರಿದ್ದರು