ಕಲ್ಬುರ್ಗಿ: ಪೂಜ್ಯ ಜಗದ್ಗುರುಗಳಾದ ಡಾ. ಸಾರಂಗಧರ ದೇಶಿಕೇಂದ್ರ ಮಹಾಸ್ವಾಮಿಗಳು, ಪೂಜ್ಯ ಶ್ರೀ ಶ್ರೀ ಶಿವರಾಯ ಒಡೆಯರ್, ಅವರು ಸೇರಿದಂತೆ ಗುರು-ಹಿರಿಯರ ಘನ ಉಪಸ್ಥಿತಿಯಲ್ಲಿ ತ್ಯಾಗವೀರ ಸಿರಸಂಗಿ ಶ್ರೀ ಲಿಂಗರಾಜ ದೇಸಾಯಿ ಅವರ 163ನೇ ಜಯಂತಿ ಉತ್ಸವ ಇಂದು ಇಲ್ಲಿ ಅದ್ಧೂರಿಯಾಗಿ ನಡೆಯಿತು.
ಸಚಿವರಾದ ಎಂ.ಬಿ.ಪಾಟೀಲ, ಈಶ್ವರ್ ಖಂಡ್ರೆ, ಶರಣಬಸಪ್ಪ ದರ್ಶನಾಪೂರ, ಶಾಸಕರಾದ ಅಲ್ಲಮಪ್ರಭು ಪಾಟೀಲ, ಎಂ.ವೈ ಪಾಟೀಲ, ಡಾ. ಅಜಯ್ ಸಿಂಗ್ ಸೇರಿದಂತೆ ಸಮಾಜದ ಬಂಧುಗಳು, ಸಾರ್ವಜನಿಕರು ಹಾಜರಿದ್ದರು.
ಸಿರಸಂಗಿ ಲಿಂಗರಾಜರು ಲಿಂಗಾಯತ ಸಮಾಜದ ಸಾಮಾಜಿಕ, ಧಾರ್ಮಿಕ ಮತ್ತು ಶೈಕ್ಷಣಿಕ ಅಭಿವೃದ್ಧಿಗಾಗಿ ಪೂಜ್ಯ ಹಾನಗಲ್ಲ ಕುಮಾರಸ್ವಾಮಿಗಳ ಮಾರ್ಗದರ್ಶನದಲ್ಲಿ ಅಖಿಲ ಭಾರತ ವೀರಶೈವ ಮಹಾಸಭೆಯನ್ನು ಸ್ಥಾಪಿಸಿ, ಸಮಾಜದ ಅಭಿವೃದ್ಧಿಗೆ ಶ್ರಮಿಸಿದ್ದು ಸೇರಿದಂತೆ ಶಿಕ್ಷಣ, ನೀರಾವರಿ ಹಾಗೂ ಕೃಷಿ ಕ್ಷೇತ್ರಗಳಿಗೆ ಅವರು ನೀಡಿದ ಕೊಡುಗೆಗಳನ್ನು ಭಕ್ತಿಯಿಂದ ಎಲ್ಲರೂ ಸ್ಮರಿಸಿದರು.