ಬೆಂಗಳೂರು: ಹಿರಿಯ ವಕೀಲರಾದ ಸದಾಶಿವ ರೆಡ್ಡಿ ಅವರ ಕಚೇರಿಯಲ್ಲಿ ಅವರ ಮೇಲೆ ನಡೆದ ಭೀಕರ ಹಲ್ಲೆ ಮತ್ತು ದಾಳಿಯನ್ನು ಕರ್ನಾಟಕ ರಾಜ್ಯ ವಕೀಲರ ಪರಿಷತ್ತು ತೀರ್ವವಾಗಿ ಖಂಡಿಸುತ್ತದೆ ಎಂದು ಕರ್ನಾಟಕ ರಾಜ್ಯ ವಕೀಲರ ಪರಿಷತ್ತಿನ ಅಧ್ಯಕ್ಷರಾದ ವಿಟ್ಟಲಕೋಡ ಎಸ್ ಅವರು ತಿಳಿಸಿದರು.
ಬೆಂಗಳೂರಿನ ಪ್ರೆಸ್ ಕ್ಲಬ್ ನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಏಪ್ರಿಲ್ 16 ರಂದು ನಡೆದ ವಕೀಲ ಸದಾಶಿವ ರೆಡ್ಡಿ ಅವರ ಮೇಲೆನ ಹಲ್ಲೆಯು ವಿಷಾದನೀಯ, ನ್ಯಾಯಾಲಯದಲ್ಲಿ ನ್ಯಾಯವನ್ನು ಕೊಡಿಸುವ ನ್ಯಾಯವಾದಿಗಳಿಗೆ ಸಮಾಜದಲ್ಲಿ ರಕ್ಷಣೆ ಇಲ್ಲದಂತಾಗಿದೆ, ಈ ಸಂಬಂಧ ರಾಜ್ಯ ವಕೀಲರ ಪರಿಷತ್ತಿನಲ್ಲಿ ತುರ್ತು ಸಭೆಯನ್ನು ಸಹ ಕರೆದು ದುರ್ಘಟನೆ ಬಗ್ಗೆ ದೀರ್ಘವಾಗಿ ಚರ್ಚೆಯನ್ನು ಮಾಡಲಾಯಿತು.
ವಕೀಲ ಸದಾಶಿವ ರೆಡ್ಡಿ ಅವರ ಮೇಲೆ ನಡೆದ ಹಳೆಯ ಬಗ್ಗೆ ಸರ್ಕಾರ ಗಂಭೀರವಾಗಿ ಪರಿಗಣಿಸಿ ಯಾವ ಕಾರಣಕ್ಕೆ ವಕೀಲರ ಮೇಲೆ ಹಲ್ಲೆ ನಡೆಸಲಾಯಿತು. ಇದರ ಹಿನ್ನೆಲೆ ಏನು ಹಾಗೂ ಪ್ರಕರಣದ ಹಿಂದೆ ಯಾರ ಕೈವಾಡವಿದೆ ಎಂಬುದನ್ನು ಸರ್ಕಾರ ಸಂಬಂಧಪಟ್ಟ ಇಲಾಖೆಗೆ ತನಿಖೆಗೆ ಸೂಕ್ತ ನಿರ್ದೇಶನವನ್ನು ನೀಡಬೇಕು ಎಂದು ಸರ್ಕಾರಕ್ಕೆ ಮನವಿ ಮಾಡಿಕೊಂಡರು.
ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಪ್ರಥಮ ವರ್ತಮಾನದ ವರದಿ ಜಾರಿಯಾಗಿದ್ದು, ಪ್ರಕರಣದಲ್ಲಿ ಭಾಗಿಯಾಗಿರುವ ಆರೋಪಿಗಳ ವಿರುದ್ಧ ಸಂಬಂಧಪಟ್ಟ ಪೊಲೀಸ್ ಇಲಾಖೆ ಕಠಿಣ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಮನವಿ ಮಾಡಿದರು. ಅಲ್ಲದೆ ನ್ಯಾಯಾಂಗ ತನಿಖೆಗೆ ಆಗ್ರಹಿಸಿದರು. ಘಟನೆಗೆ ಸಂಬಂಧಿಸಿದಂತೆ ಸಮಗ್ರ ಹಾಗೂ ಸೂಕ್ತ ಹಾಗೂ ನಿಷ್ಪಕ್ಷಪಾತವಾದಂತಹ ತನಿಖೆ ನಡೆಸಬೇಕೆಂದು ಸರ್ಕಾರಕ್ಕೆ ಮನವಿ ಮಾಡಿದರು.
ಸದಾಶಿವ ರೆಡ್ಡಿ ಅವರ ಮೇಲೆ ನಡೆದ ದಾಳಿಯಲ್ಲಿ ಇಬ್ಬರು ಅಪರಿಚಿತ ವ್ಯಕ್ತಿಗಳಿಗೂ ಸದಾಶಿವ ರೆಡ್ಡಿ ಅವರಿಗೆ ಯಾವುದೇ ರೀತಿಯಾದಂತಹ ಸಂಬಂಧ ಇಲ್ಲ ಇಬ್ಬರ ನಡುವೆ ಯಾವುದೇ ಕಕ್ಷಿದಾರ ಹಾಗೂ ವಕೀಲರ ಸಂಬಂಧ ಹಾಗೂ ಇನ್ನಿತರ ವ್ಯವಹಾರಗಳು ಸಹ ಇಲ್ಲಿಯವರೆಗೂ ನಡೆದಿರುವುದಿಲ್ಲ, ಆದರೆ ಘಟನೆ ಹಿಡಿಯುವಾಗ ಮತ್ತೊಬ್ಬ ಅಪರಿಚಿತ ವ್ಯಕ್ತಿಯು ಘಟನೆಯ ವಿಡಿಯೋ ರೆಕಾರ್ಡ್ ಮಾಡಿರುವುದಾಗಿ ಕಂಡು ಬಂದಿದೆ ಅಮಾನವ ಕೃತ್ಯ ಜರುಗಿಸಲು ಯಾವುದೇ ಕಾರಣದ ಕೈ ಕೆಲಸ ಮಾಡುತ್ತಿರುವುದು ಮೇಲ್ನೋಟಕ್ಕೆ ಕಂಡುಬರುತ್ತದೆ ಎಂದು ಆರೋಪಿಸಿದರು.
ಹಿರಿಯ ವಕೀಲ ಸದಾಶಿವ ರೆಡ್ಡಿ ಅವರ ಮೇಲೆ ಹಲ್ಲೆ ನಡೆದಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯದಲ್ಲಿರುವ ಎಲ್ಲಾ ವಕೀಲರ ಸಂಘಟನೆಗಳು ಹಾಗೂ ವಕೀಲರ ಪರಿಷತ್ತಿನವರು ಘಟನೆಯನ್ನು ಖಂಡಿಸಿದ್ದಾರೆ. ಅಲ್ಲದೆ ಮುಂದಿನ ದಿನಗಳಲ್ಲಿ ಸರ್ಕಾರ ಈ ಸಂಬಂಧ ತನಿಖೆ ಸರಿಯಾಗಿ ನಡೆಸದೆ ಇದ್ದಲ್ಲಿ ರಾಜ್ಯದಾದ್ಯಂತ ಉಗ್ರ ಹೋರಾಟ ನಡೆಸಲಾಗುತ್ತದೆ ಎಂದು ಸರ್ಕಾರಕ್ಕೆ ಹಾಗೂ ಸಂಬಂಧ ಪಟ್ಟ ಇಲಾಖೆಗೆ ಸಂದೇಶವನ್ನು ನೀಡಿದ್ದಾರೆ.
ಪತ್ರಿಕಾಗೋಷ್ಠಯಲ್ಲಿ ಕರ್ನಾಟಕ ರಾಜ್ಯ ವಕೀಲರ ಪರಿಷತ್ತಿನ ಪದಾಧಿಕಾರಿಗಳು, ಉಪಾಧ್ಯಕ್ಷರು ಹಾಗೂ ಹಿರಿಯ ವಕೀಲರು ಇದೇ ವೇಳೆ ಉಪಸ್ತರಿದ್ದರು.