ಬೆಂಗಳೂರು: ಜಮ್ಮು ಕಾಶ್ಮೀರದ ಪಹಲ್ ಗಾಮ್ ನಲ್ಲಿ ಪ್ರವಾಸಿಗರ ಮೇಲೆ ಭಯೋತ್ಪಾದಕರು ನಡೆಸಿದ ಅತ್ಯಾಕಾಂಡ ಖಂಡಿಸಿ ಬಿ.ಬಿ.ಎಂ.ಪಿ ಅಧಿಕಾರಿ ಮತ್ತು ನೌಕರರ ಸಂಘದ ವತಿಯಿಂದ ಶ್ರದ್ಧಾಂಜಲಿಯನ್ನು ಸಲ್ಲಿಸಲಾಯಿತು.
ಬೆಂಗಳೂರಿನ ಬಿಬಿಎಂಪಿ ಕೇಂದ್ರ ಕಚೇರಿಯ ಮುಂದೆ ಬಿಬಿಎಂಪಿ ಅಧಿಕಾರಿ ಹಾಗೂ ನೌಕರರ ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷರಾದ ಅಮೃತ್ ರಾಜ್ ನೇತೃತ್ವದಲ್ಲಿ ಅತ್ಯತಂಡದಲ್ಲಿ ಮಡಿದವರಿಗೆ ಶ್ರದ್ಧಾಂಜಲಿಯನ್ನು ಸಲ್ಲಿಸಲಾಯಿತು.
ಭಯೋತ್ಪಾದನೆ ಖಂಡಿಸಿ, ಟೆರರಿಸಂ ಹೇಡಿಗಳಿಗೆ ಧಿಕ್ಕಾರ ಮೊಳಗಿಸಲಾಯಿತು , ಕಾಶ್ಮೀರದಲ್ಲಿ ಮಡಿದ ಭಾರತಾಂಬೆಯ ಪುತ್ರರಿಗೆ ಹಾಗೂ ವೀರ ಮರಣ ಹೊಂದಿದ ಕನ್ನಡ ಧೀರರಿಗೆ ಮೊಂಬತ್ತಿ ಬೆಳಗುವ ಮೂಲಕ ಭಾವಪೂರ್ಣ ಶ್ರದ್ಧಾಂಜಲಿ ಅರ್ಪಿಸಲಾಯಿತು.
ಈ ವೇಳೆ ನೌಕರರ ಸಂಘದ ಅಧ್ಯಕ್ಷರು ಉಪಾಧ್ಯಕ್ಷರು ಪದಾಧಿಕಾರಿಗಳು ಹಾಗೂ ಬಿಬಿಎಂಪಿ ಸಿಬ್ಬಂದಿ ವರ್ಗದವರು ಇದೇ ವೇಳೆ ಉಪಸ್ಥಿತರಿದ್ದರು.