ಬೆಂಗಳೂರು/ನವದೆಹಲಿ : ಮಿಸ್ ಯೂನಿವರ್ಸ್ ಕರ್ನಾಟಕ ಸ್ಪರ್ಧೆಯಲ್ಲಿ ವಿಜೇತರಾಗಿರುವ ಚಿಕ್ಕಮಗಳೂರಿನ ವಂಶಿ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ಆಶೀರ್ವಾದವನ್ನು ಪಡೆದರು.
ಆಗಸ್ಟ್ 17ರಂದು ಜೈಪುರದಲ್ಲಿ ನಡೆಯಲಿರುವ ಮಿಸ್ ಯೂನಿವರ್ಸ್ ಇಂಡಿಯಾ ಸ್ಪರ್ಧೆಯಲ್ಲಿ ಭಾಗವಹಿಸಲಿರುವ ವಂಶಿ ಅವರಿಗೆ ಮುಖ್ಯಮಂತ್ರಿಗಳು ಶುಭ ಕೋರಿದರು.
ನಾಮ ದೇಹದಲ್ಲಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಕಚೇರಿಗೆ ತೆರಳಿ ಸಿಎಂ ಸಿದ್ದರಾಮಯ್ಯ ಅವರಿಂದ ಆಶೀರ್ವಾದವನ್ನು ಪಡೆದರು, ಈ ಸಂದರ್ಭದಲ್ಲಿ ವಂಶಿ ಅವರನ್ನು ಭೇಟಿಯಾಗಿ, ಮುಂಬರುವ ರಾಷ್ಟ್ರಮಟ್ಟದ ಸ್ಪರ್ಧೆಗೆ ಶುಭ ಕೋರಿದ್ದಾರೆ. ಕರ್ನಾಟಕದಿಂದ ಆಯ್ಕೆಯಾಗಿರುವ ವಂಶಿ, ರಾಷ್ಟ್ರೀಯ ಮಟ್ಟದಲ್ಲಿ ಉತ್ತಮ ಪ್ರದರ್ಶನ ನೀಡುವ ಮೂಲಕ ರಾಜ್ಯಕ್ಕೆ ಕೀರ್ತಿ ತರಲಿ ಎಂದು ಹಾರೈಸಿದರು.
ಮಿಸ್ ಯೂನಿವರ್ಸ್ ಇಂಡಿಯಾ ಸ್ಪರ್ಧೆ ಕುರಿತು ಮಾಹಿತಿ
ಮಿಸ್ ಯೂನಿವರ್ಸ್ ಇಂಡಿಯಾ ಸ್ಪರ್ಧೆಯು ದೇಶದ ಪ್ರಮುಖ ಸೌಂದರ್ಯ ಸ್ಪರ್ಧೆಗಳಲ್ಲಿ ಒಂದಾಗಿದೆ. 2024ರಿಂದ ಗ್ಲಾಮನಂದ್ ಗ್ರೂಪ್ ಈ ಸ್ಪರ್ಧೆಯ ಆಯೋಜನೆಯ ಹಕ್ಕನ್ನು ಪಡೆದುಕೊಂಡಿದೆ. ಸಾಮಾನ್ಯವಾಗಿ, ಈ ಸ್ಪರ್ಧೆಯ ಅಂತಿಮ ಸುತ್ತುಗಳು ಪ್ರತಿ ವರ್ಷ ಜುಲೈ ಅಥವಾ ಸೆಪ್ಟೆಂಬರ್ನಲ್ಲಿ ನಡೆಯುತ್ತವೆ. ವಿಜೇತರು ನಂತರ ವಿಶ್ವಮಟ್ಟದ ಮಿಸ್ ಯೂನಿವರ್ಸ್ ಸ್ಪರ್ಧೆಯಲ್ಲಿ ಭಾರತವನ್ನು ಪ್ರತಿನಿಧಿಸುತ್ತಾರೆ.
ವಂಶಿ ಅವರು ತಮ್ಮ ಸಾಧನೆಯ ಮೂಲಕ ಚಿಕ್ಕಮಗಳೂರಿಗೆ ಮಾತ್ರವಲ್ಲದೆ, ಇಡೀ ಕರ್ನಾಟಕಕ್ಕೆ ಹೆಮ್ಮೆ ತಂದಿದ್ದಾರೆ. ಈಗ ಅವರು ರಾಷ್ಟ್ರೀಯ ಮಟ್ಟದಲ್ಲಿ ಸ್ಪರ್ಧಿಸಲು ಸಜ್ಜಾಗಿದ್ದು, ರಾಜ್ಯದ ಜನತೆ ಅವರ ಯಶಸ್ಸಿಗಾಗಿ ಕಾತರದಿಂದ ಕಾಯುತ್ತಿದ್ದಾರೆ. ಈ ವೇಳೆ ನಗರಾಭಿವೃದ್ಧಿ ಸಚಿವ ಭೈರತಿ ಸುರೇಶ್ ಉಪಸ್ಥಿತರಿದ್ದರು.