ಬೆಂಗಳೂರು: ಬಿಬಿಎಂಪಿ ಕೇಂದ್ರ ಕಛೇರಿ ಅವರಣದಲ್ಲಿ ಪಾಲಿಕೆ ನೌಕರರ ಕನ್ನಡ ಸಂಘದ ವತಿಯಿಂದ 68ನೇ ಕರ್ನಾಟಕ ರಾಜ್ಯೋತ್ಸವ ಹಾಗೂ ವಿವಿಧ ಕ್ಷೇತ್ರದಲ್ಲಿ ಸಾಧನೆ ಮಾಡಿದ ಸಾಧಕ/ಸಾಧಕಿಯರಿಗೆ ಕರ್ನಾಟಕ ರತ್ನ ಡಾ. ಪುನೀತ್ ರಾಜ್ ಕುಮಾರ್ ಪ್ರಶಸ್ತಿ ಪ್ರಧಾನ ಸಮಾರಂಭಕ್ಕೆ ಆಡಳಿತಗಾರರಾದ ರಾಕೇಶ್ ಸಿಂಗ್ ಮುಖ್ಯ ಆಯುಕ್ತರಾದ ತುಷಾರ್ ಗಿರಿನಾಥ್ ರವರು ಚಾಲನೆ ನೀಡಿದರು.
ವಿವಿಧ ಕ್ಷೇತ್ರದಲ್ಲಿ ಸಾಧನೆ ಮಾಡಿರುವವರಿಗೆ ಡಾ.ಪುನೀತ್ ರಾಜ್ ಕುಮಾರ್ ಪ್ರಶಸ್ತಿ ಪ್ರಧಾನ:
ಕರ್ನಾಟಕ ವಿಕಾಸ ವೇದಿಕೆ ಅಧ್ಯಕ್ಷರಾದ ಪಾಲನೇತ್ರ, ಕನ್ನಡ ಚಳುವಳಿ ಕೇಂದ್ರ ಸಮಿತಿ ಅಧ್ಯಕ್ಷರಾದ ಗುರುದತ್ತ, ಚಲನಚಿತ್ರರಂಗದ ಸುಂದರ್ ರಾಜ್, ಶಿವಕುಮಾರ್, ರಿಷಿಗೌಡ, ಪ್ರೇಮಗೌಡ, ಕು.ರಕ್ಷಾ ಅಪೂರ್ವ, ಪ್ರತಿಭಾ, ಶ್ರೀಮತಿ ರಕ್ಷಾ, ರವರು ಮತ್ತು ಪತ್ರಿಕಾರಂಗದಲ್ಲಿ ರಕ್ಷಾ , ಮಾಲತೇಶ್, ವಸಂತ್ ಕುಮಾರ್, ಸ್ಮಿತಾ ರಂಗನಾಥ್, ಶೀತಲ್ ಶೆಟ್ಟಿ, ಮಂಜುನಾಥ್, ಅಲ್ಲಾವುದ್ದಿನ್, ಪುರುಷೋತ್ತಮ್, ಕೊಂಡಯ್ಯ,ಪುಟ್ಟರಾಜು, ಪಿ.ಆರ್.ಓ ಸುಚಿತ್ರಾ ಮತ್ತು ಡೊಳ್ಳು ಕುಣಿತ ಕಲಾವಿದ ಡೊಳ್ಳು ಚಂದ್ರು, ಯೋಗ ಕ್ರೀಡಾ ಸಂಘದ ಅಧ್ಯಕ್ಷ ಕೃಷ್ಣಮೂರ್ತಿ ಹಾಗೂ ಬಿಬಿಎಂಪಿ ಕಾರ್ಯನಿರ್ವಹಿಸುತ್ತಿರುವ 20 ಅಧಿಕಾರಿ/ನೌಕರರಿಗೆ ಡಾ. ಪುನೀತ್ ರಾಜ್ ಕುಮಾರ್ ಪ್ರಶಸ್ತಿ ನೀಡಿ ಗೌರವಿಸಲಾಯಿತು.
ಖ್ಯಾತ ಹಿನ್ನಲೆ ಗಾಯಕಿ ಅನುರಾಧ ಭಟ್ ರವರಿಂದ ಸಂಗೀತ ಸಂಜೆ ಮತ್ತು ಎಂ.ಎಸ್.ಮೂಸಿಕಲ್ಸ್ ಇವೆಂಟ್ಸ್ ಮತ್ತು ಶಿವಂ ನೃತ್ಯ ಶಾಲೆ ಸಾಂಸ್ಕೃತಿಕ ಕಾರ್ಯಕ್ರಮ ಆಯೋಜಿಸಲಾಗಿತ್ತು.
ಇದೇ ವೇಳೆ ನೇಪಾಳದಲ್ಲಿ ಅಂತರಾಷ್ಟ್ರೀಯ ಕರ್ನಾಟಕ ರಾಜ್ಯೋತ್ಸವ ಲೋಗೋ(ಲಾಂಛನ) ಬಿಡುಗಡೆ ಮಾಡಲಾಯಿತು.
ಸಮಾರಂಭದಲ್ಲಿ ಖ್ಯಾತ ನಟ ರಮೇಶ್ ಅರವಿಂದ್, ಚಲನಚಿತ್ರ ನಟಿಯರಾದ ಭವ್ಯ, ಮಾಜಿ ಮಹಾಪೌರರಾದ ಜೆ.ಹುಚ್ಚಪ್ಪ, ವಿಶೇಷ ಆಯುಕ್ತರುಗಳು, ಪ್ರಧಾನ ಅಭಿಯಂತರರು, ಜಂಟಿ ಆಯುಕ್ತರು, ಪಾಲಿಕೆ ಕನ್ನಡ ಸಂಘದ ಅಧ್ಯಕ್ಷರಾದ ಸಾಯಿಶಂಕರ್, ಪ್ರಧಾನ ಕಾರ್ಯದರ್ಶಿ ಎ.ಅಮೃತ್ ರಾಜ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.