ಬೆಂಗಳೂರು : ಜಾತ್ಯಾತೀತ ಜನತಾದಳ ಪಕ್ಷದ ರಾಜ್ಯ ಕಚೇರಿ ಜೆಪಿ ಭವನದಲ್ಲಿ 78ನೇ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮ ನಡೆಯಿತು.
ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷರಾದ ನಿಖಿಲ್ ಕುಮಾರಸ್ವಾಮಿ ಅವರು ಧ್ವಜರೋಹಣ ನೆರೆವೇರಿಸಿದರು. ಇದೇ ವೇಳೆ ಮಕ್ಕಳಿಗೆ ಸಿಹಿ ಹಂಚುವ ಮೂಲಕ ಸ್ವಾತಂತ್ರ್ಯ ದಿನಾಚರಣೆಯಲ್ಲಿ ಪಾಲ್ಗೊಂಡಿದ್ದರು.
ನಂತರ ಮಾಧ್ಯಮಗಳ ಜೊತೆ ಮಾತನಾಡಿದ ಅವರು; ಎಲ್ಲರಿಗೂ ಸ್ವಾತಂತ್ರ್ಯದಿನದ ಶುಭಾಶಯ ತಿಳಿಸಿದರಲ್ಲದೆ, 78 ವರ್ಷಗಳನ್ನು ಈಗಾಗಲೇ ಪೂರೈಸಿದ್ದೆವೆ. 200 ವರ್ಷ ಬ್ರಿಟೀಷರು ನಮ್ಮ ದೇಶವನ್ನ ಆಳ್ವಿಕೆ ಮಾಡಿದರು. ಅವರಿಂದ ವಿಮುಕ್ತಿ ಪಡೆಯಲು ಸಾಕಷ್ಟು ಮಹಾನ್ ವ್ಯಕ್ತಿಗಳು, ಸೇನಾನಿಗಳು, ಸಾಮಾನ್ಯ ಜನರು ಪ್ರಾಣವನ್ನು ತ್ಯಾಗ ಮಾಡಿರುವ ಇತಿಹಾಸ ನಮ್ಮ ಕಣ್ಮುಂದೆ ಇದೆ. ಆ ಎಲ್ಲಾ ಮಹನೀಯರ ಹೋರಾಟದ ಪ್ರತಿಫಲವೇ ಈ ಸ್ವಾತಂತ್ರ್ಯ ಎಂದರು.
ಇದೇ ಸಂದರ್ಭದಲ್ಲಿ ಮಾಜಿ ಸಚಿವರಾದ ಲೀಲಾದೇವಿ ಆರ್ ಪ್ರಸಾದ್, ವಿಧಾನ ಪರಿಷತ್ ಸದಸ್ಯರಾದ ಕೆ.ಎ.ತಿಪ್ಪೇಸ್ವಾಮಿ, ಟಿ.ಎ.ಶರವಣ, ಅವರು ಬೆಂಗಳೂರು ಜೆಡಿಎಸ್ ಘಟಕದ ಅಧ್ಯಕ್ಷ ಹೆಚ್.ಎಂ.ರಮೇಶ್ ಗೌಡ, ಪಕ್ಷದ ರಾಜ್ಯ ಉಪಾಧ್ಯಕ್ಷರಾದ ಆರ್.ಪ್ರಕಾಶ್ ಅವರು ಸೇರಿದಂತೆ ಅನೇಕ ಮುಖಂಡರು ಉಪಸ್ಥಿತರಿದ್ದರು.