ಬೆಂಗಳೂರು:ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿರುವ ವಲಯವಾರು ಪಬ್, ಬಾರ್ & ರೆಸ್ಟೋರೆಂಟ್ ಗಳಿಗೆ ಸಂಬಂಧಿಸಿದಂತೆ ಪಾಲಿಕೆಯ 8 ವಲಯಗಳಲ್ಲಿ ಆರೋಗ್ಯಾಧಿಕಾರಿಗಳ ನೇತೃತ್ವದಲ್ಲಿ ದಿನಾಂಕ: 28-10-2023 ರಂದು ತಪಾಸಣೆ ನಡೆಸಲಾಗಿದೆ.
ನ್ಯೂನ್ಯತೆಗಳು ಕಂಡುಬಂದಿರುವಂತಹ ಉದ್ದಿಮೆಗಳಿಗೆ ನೋಟಿಸ್ ಜಾರಿಮಾಡಲಾಗಿದೆ. ಜೊತೆಗೆ ಪರವಾನಿಗೆ ನಿಯಮಾವಳಿ ಪಾಲಿಸದ ಉದ್ದಿಮೆಗಳನ್ನು ಸ್ಥಳದಲ್ಲೇ ಮುಚ್ಚಿಸಲಾಗಿರುತ್ತದೆ.
ಪಾಲಿಕೆ ವ್ಯಾಪ್ತಿಯಲ್ಲಿ ಇಂದು 26 ಉದ್ದಿಮೆಗಳನ್ನು ಪರಿಶೀಲಿಸಲಾಗಿದೆ. ಅದರಲ್ಲಿ 07 ಉದ್ದಿಮೆಗಳಿಗೆ ನೋಟಿಸ್ ಜಾರಿಗೊಳಿಸಿ 01 ಉದ್ದಿಮೆಯನ್ನು ಮುಚ್ಚಲಾಗಿರುತ್ತದೆ.