ಬೆಂಗಳೂರು : ಭೋವಿ ಸಮಾಜ ಆರ್ಥಿಕ, ಶೈಕ್ಷಣಿಕ, ಸಾಮಾಜಿಕ, ರಾಜಕೀಯವಾಗಿ ಮುಂದೆ ಬಂದು ಎಲ್ಲಾ ಸಮಾಜದ ತರ ಪ್ರಭಲರಾಗಬೇಕು ಎಂದು ಅಖಿಲ ಕರ್ನಾಟಕ ಭೋವಿ ಮಹಾಸಭಾದ ಅಧ್ಯಕ್ಷರಾದ ಹೆಚ್ ಮಂಜಪ್ಪ ತಿಳಿಸಿದರು.
ಕಾರ್ಯಕ್ರಮವನ್ನು ಭೋವಿ ಸಮಾಜದ ಜಗದ್ಗುರು ಶ್ರೀ ಶ್ರೀ ಇಮ್ಮಡಿ ಸಿದ್ದರಾಮೇಶ್ವರ ಮಹಾಸ್ವಾಮಿಗಳು ದಿವ್ಯ ಸಾನಿಧ್ಯ ವಹಿಸಿದ್ದರು, ನಗರದ ರವೀಂದ್ರ ಕಲಾಕ್ಷೇತ್ರದಲ್ಲಿ ಭೋವಿ ಸಮಾಜದ ಸಮಾಗಮ ಕನ್ನಡ ರಾಜ್ಯೋತ್ಸವ ಆಚರಣೆ, ವಿವಿಧ ಕ್ಷೇತ್ರದಲ್ಲಿ ಸಾಧನೆ ಮಾಡಿದ ಗಣ್ಯರಿಗೆ ಸನ್ಮಾನ ಸಮಾರಂಭದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಭೋವಿ ಸಮಾಜದವರು ಎಲ್ಲಾ ಕ್ಷೇತ್ರದಲ್ಲಿ ಹಿಂದುಳಿದಿದ್ದಾರೆ, ಇತರೆ ಸಮಾಜದ ರೀತಿಯಲ್ಲಿ ಮುಂದೆ ಬರು ಅಧ್ಯಕ್ಷರು ಕರೆ ನೀಡಿದರು.
ಭೋವಿ ಸಮಾಜದ ಜನಸಂಖ್ಯೆಗೆ ಅನುಗುಣವಾಗಿ ಅಭಿವೃದ್ದಿ ನಿಗಮದಲ್ಲಿ ಕಡು ಬಡವರಿಗೆ ಸೌಲಭ್ಯ ನೀಡಲು ರಾಜಕೀಯ ಪ್ರತಿನಿಧಿಗಳಲ್ಲಿ ಮನವಿ ಮಾಡಿದರು. ಭೋವಿ ಸಮಾಜದ ಕುಲ ಕಸುಭುಗಳಾದ ಕಲ್ಲು ಬಂಡೆ ಕೂರೆ ಕೆಲಸ, ಅವುಗಳನ್ನು ಮೀಸಲಿಟ್ಟು ಕೊಡಬೇಕು, ಗಣಿ ಮತ್ತು ಭೂ ವಿಜ್ಞಾನ ಇಲಾಖೆಗಳಿಗೆ ಸಮರ್ಪಕವಾಗಿ ಜಾರಿಗೆ ಮಾಡಬೇಕು, ಭೋವಿ ಅಭಿವೃದ್ದಿ ನಿಗಮಕ್ಕೆ ಸರ್ಕಾರ ಹೆಚ್ಚಿನ ಅನುದಾನ ನೀಡಬೇಕು ಎಂದು ವಿವಿಧ ಸಂಸ್ಯೆಗಳ ಬಗ್ಗೆ ಸಚಿವರಿಗೆ ಮನವಿ ಮಾಡಿದರು.
ಮಹಾಸಭಾದ ರಾಜ್ಯ ಕಾರ್ಯಾಧ್ಯಕ್ಷರಾದ ಹುಲಪ್ಪ ಹಳ್ಳುರು ಮಾತನಾಡಿ, ಜಿಲ್ಲಾ ಮಟ್ಟದಲ್ಲಿ ಸಮಾಜವನ್ನು ಒಗ್ಗೂಡಿಸುವ, ಸಮಾಜದ ಜನರನ್ನು ಒಂದೆಡೆ ಸೇರಿಸುವ ನಿಟ್ಟಿನಲ್ಲಿ ಜಿಲ್ಲಾ ಮಟ್ಟದಲ್ಲಿ ಕಾರ್ಯಕ್ರಮಗಳನ್ನು ಮಾಡಲಾಗುತ್ತದೆ. ಭೋವಿ ಸಮಾಜದ ಮಕ್ಕಳು ಶೈಕ್ಷಣಿಕವಾಗಿ ಮುಂದೆ ಬರಲು ಪ್ರೋತ್ಸಾಹ ಧನ ನೀಡಲಾಗುತ್ತದೆ, ನಮ್ಮ ಸಮಾಜ ಬೇರೆ ಸಮುದಾಯಗಳ ರೀತಿ ಪ್ರಭಾಕರ್ ರೀತಿಯಲ್ಲಿ ಬೆಳೆಯಬೇಕು ಎಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ಸಮಾಜದವರು ವಿವಿಧ ಕ್ಷೇತ್ರದಲ್ಲಿ ಸಾಧನೆ ಮಾಡಿದ ಸಾಧಕರನ್ನು ಗುರುತಿಸಿ ಸನ್ಮಾನ ಮಾಡಲಾಯಿತು. ಈ ವೇಳೆ ಮಹಾಸಭಾ ಮಾಜಿ ಅಧ್ಯಕ್ಷರಾದ ಜಿವಿ ಸೀತಾರಾಮ್, ಎಚ್ ನಟೇಶ್ ಡಿಸಿ ಮೋಹನ್, ಪದ್ಮ, ಡಾ. ಚಿನ್ನಸ್ವಾಮಿ, ರವಿ ಪೂಜಾರಿ, ಬಸವರಾಜು ಅರ್ಜುನ್ ಹಂಚಿನ ಮನಿ, ಓ ಸಿ ಸಿ ಐ ರಾಷ್ಟ್ರೀಯ ಕಾರ್ಯಾಧ್ಯಕ್ಷ ಡಾ. ರವಿ ಮಾಕಳಿ, ಸಮಾಜದ ರಾಜ್ಯ ಸಮಿತಿ ಸದಸ್ಯರು ಹಾಗೂ ಬೆಂಗಳೂರು ನಗರ ಸಮಿತಿ ಸದಸ್ಯರು ಜಿಲ್ಲಾ ಸಮಿತಿಯ ಸದಸ್ಯರು ಇದೆ ವೇಳೆ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.