ದಾವಣಗೆರೆ( ಚನ್ನಗಿರಿ) : ಪಟ್ಟಣದ ಸರಕಾರಿ ಪದವಿ ಕಾಲೇಜಿನ ಓ ಸಹನಾ ಸ್ಥಳೀಯ ಕಾಲೇಜಿನಲ್ಲಿ ನಡೆದ ರಾಜ್ಯಮಟ್ಟದ ಖೋಖೋ ಕ್ರೀಡಾಕೂಟದಲ್ಲಿ ಭಾಗವಹಿಸಿ ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
ಈ ಕಾಲೇಜಿನಿಂದ ರಾಜ್ಯಮಟ್ಟದ ಕ್ರೀಡಾಕೂಟದಲ್ಲಿ ವಿವಿಧ ಸ್ಪರ್ಧೆಗಳಲ್ಲಿ 12 ಜನ ವಿದ್ಯಾರ್ಥಿಗಳು ಭಾಗವಹಿಸಿದ್ದು, ಓ ಸಹನಾ ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
ಇತಿಹಾಸದಲ್ಲಿಯೇ ಪ್ರಥಮ ಬಾರಿಗೆ ನಮ್ಮ ಕಾಲೇಜಿನಿಂದ ರಾಷ್ಟ್ರಮಟ್ಟಕ್ಕೆ ಆಯ್ಕೆ ಆಗಿರುವುದು ಹೆಮ್ಮೆಯ ಸಂಗತಿ,ಹಳ್ಳಿಯಿಂದ ಕಾಲೇಜಿಗೆ ಬಂದು ವಿದ್ಯಾಬ್ಯಾಸ ಮಾಡುವುದರ ಜೊತೆಜೊತೆಗೆ ಕ್ರೀಡೆಯಲ್ಲಿ ತೊಡಗಿಸಿಕೊಂಡು ನಮ್ಮ ಕಾಲೇಜು, ಪಟ್ಟಣ, ತಾಲೂಕಿಗೆ ಹೆಸರು ಪಡೆದಿದ್ದಾರೆ ಎಂದು ಕಾಲೇಜಿನ ಪ್ರಾಂಶುಪಾಲರು ತಿಳಿಸಿದ್ದಾರೆ.