ಬೆಂಗಳೂರು: ಬೊಮ್ಮನಹಳ್ಳಿ ವಿಧಾನಸಭಾ ಕ್ಷೇತ್ರದ ಅರಕೆರೆ ವಾರ್ಡ್ 193ರಲ್ಲಿರುವ ಇಂದಿರಾ ಕ್ಯಾಂಟಿನ್ ಆವರಣದಲ್ಲಿ ಉಕ್ಕಿನ ಮಹಿಳೆ ಇಂದಿರಾ ಗಾಂಧಿ ಅವರ ಹುಟ್ಟುಹಬ್ಬವನ್ನು ಸರಳವಾಗಿ ಕ್ಷೇತ್ರದ ಮಹಿಳಾ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷೆ ಉಮಾ ಶ್ರೀನಿವಾಸ್ ರೆಡ್ಡಿ ನೇತೃತ್ವದಲ್ಲಿ ಆಚರಿಸಲಾಯಿತು.
ದೇಶ ಖಂಡ ಅಪ್ರತಿಮ ನಾಯಕಿ, ಉಕ್ಕಿನ ಮಹಿಳೆ ಇಂದಿರಾಗಾಂಧಿ ಅವರ 106ನೇ ಹುಟ್ಟುಹಬ್ಬದ ಹಿನ್ನಲೆ ರಾಜ್ಯದಲ್ಲಿ ವಿಶೇಷವಾಗಿ ಅವರನ್ನು ನೆನೆಯುವ ಸಲುವಾಗಿ, ಅವರು ಮಾಡಿರುವ ಕೆಲಸ ಕಾರ್ಯಗಳನ್ನು ಮತ್ತೊಬ್ಬರು ತಮ್ಮ ಬದುಕಿನಲ್ಲಿ ಅಳವಡಿಸಿಕೊಂಡು ಪ್ರೇರಣೆಯಾಗುವ ನಿಟ್ಟಿನಲ್ಲಿ ಬದುಕಿದ್ದಾರೆ.
ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಮಾತನಾಡಿದ ಕ್ಷೇತ್ರದ ಬ್ಲಾಕ್ ಕಾಂಗ್ರೆಸ್ ಮುಖಂಡ ರವೀಂದ್ರ, ಇಂದಿರಾ ಗಾಂಧಿ ಅವರು ದೇಶದ ಮೊದಲ ಪ್ರಧಾನ ಮಂತ್ರಿ, ದೇಶ, ರಾಜ್ಯಕ್ಕೆ ಕೊಟ್ಟ ಅವರ ಕೊಡುಗೆ ಅಪಾರವಾಗಿದೆ. ದೇಶದ ಮೊದಲ ಮಹಿಳಾ ಪ್ರಧಾನಮಂತ್ರಿಯಾಗಿದ್ದರು, ಮಹಿಳೆಯರ ಬಗ್ಗೆ ಇರುವ ಮಹತ್ವವನ್ನು ಸಾರಿದರು.ರೈತರು. ಬಡವರು,ಕಾರ್ಮಿಕರ ಬಗ್ಗೆ ಅವರಿಗೆ ಇದ್ದ ಕಾಳಜಿ ಎಲ್ಲರೂ ಸಹಾ ಈ ಸಂದರ್ಭದಲ್ಲಿ ನೆನೆಯಬೇಕಾಗಿದೆ ಎಂದು ಹೇಳಿ ಮತ್ತೊಮ್ಮೆ ಇಂದಿರಾ ಗಾಂಧಿ ಅವರ ಬರ್ತಡೇಗೆ ಶುಭಾಷಯಕೋರಿದರು.
ನಂತರ ಬೊಮ್ಮನಹಳ್ಳಿ ಮಹಿಳಾ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷೆ ಉಮಾ ಶ್ರೀನಿವಾಸ್ ರೆಡ್ಡಿ ಮಾತನಾಡಿ, ಇಂದಿರಾ ಗಾಂಧಿ ಅವರು ಮಹಿಳೆಯರ ಬೆಲೆ ಏನೆಂಬುದರ ಬಗ್ಗೆ ಎಲ್ಲರಿಗೂ ಮನವರಿಕೆ ಮಾಡಿಕೊಟ್ಟಿದ್ದಾರೆ. ಬಡವರಿಗೆ ಮನೆಗಳನ್ನು ಕೊಟ್ಟಿದ್ದಾರೆ. ಕಾರ್ಮಿಕರು ಯಾವ ರೀತಿ ಜೀವನ ಮಾಡಬೇಕೆಂಬುದನ್ನು ಹೇಳಿಕೊಟ್ಟಿದ್ದಾರೆ. ನಾವು ಬದುಕಿರುವ ತನಕ ಅವರನ್ನು ನೆನೆಸಿಕೊಳ್ಳಬೇಕು ಎಂದರು. ಅಲ್ಲದೆ ಇದೀಗ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಆಡಳಿತದಲ್ಲಿದ್ದ 5 ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತಂದು ಎಲ್ಲರಿಗೂ ಅನುಕೂಲ ಮಾಡಿಕೊಟ್ಟಿದೆ. ಸಮಾಜದ ಕಟ್ಟಕಡೆಯ ವರ್ಗಕ್ಕೂ ಯೋಜನೆ ಮುಟ್ಟುತ್ತಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಇದೇ ವೇಳೆ ಕಾರ್ಯಕ್ರಮದಲ್ಲಿ ಇಂದಿರಾ ಗಾಂಧಿ ಅವರ ಬರ್ತಡೆ ಹಿನ್ನೆಲೆ ಕ್ಯಾಂಟೀನ್ ಮುಂದೆ ಕೇಕ್ ಕತ್ತರಿಸುವ ಮೂಲಕ ವಿಶೇಷವಾಗಿ ಅವರ ಹುಟ್ಟುಹಬ್ಬವನ್ನು ಆಚರಿಸಿದರು.
ಕಾರ್ಯಕ್ರಮದಲ್ಲಿ ಕಾಂಗ್ರೆಸ್ ಮುಖಂಡರಾದ ಶ್ರೀನಿವಾಸ್ ರೆಡ್ಡಿ, ಪಲ್ಲವಿ,ಸುಜಾತ, ಅಮರೇಶ್, ಬಿಬಿಎಂಪಿ ಪೌರ ಕಾರ್ಮಿಕರು, ಮಾರ್ಷಲ್ ಗಳು ಉಪಸ್ಥಿತರಿದ್ದರು.