ನೆಲಮಂಗಲ/ ಬೆಂಗಳೂರು: ಸ್ಯಾಂಡಲ್ ವುಡ್ ನ ಹಿರಿಯ ನಟಿ ಲೀಲಾವತಿ ಅವರು ವಯೋಸಹಜ ಅನಾರೋಗ್ಯದಿಂದ ಶುಕ್ರವಾರ ಆಸ್ಪತ್ರೆಯಲ್ಲಿ ವಿಧಿವಶರಾಗಿದ್ದಾರೆ.
ಕಳೆದ 1 ವರ್ಷದಿಂದ ಹಾಸಿಗೆ ಹಿಡಿದಿದ್ದ ಲೀಲಾವತಿ ಅವರು ಅನಾರೋಗ್ಯದಿಂದ ಬಳಲುತ್ತಿದ್ದರು, ಶುಕ್ರವಾರ ಸಂಜೆ 5 ಗಂಟೆಯಲ್ಲಿ ಉಸಿರಾಟದ ತೊಂದರೆ ಕಾಣಿಸಿಕೊಂಡ ಹಿನ್ನೆಲೆ ಸಮೀಪದ ಖಾಸಗಿ ಆಸ್ಪತ್ರೆಗೆ ದಾಖಲಿಸುವ ಹೊತ್ತಿಗೆ ಲೀಲಾವತಿ ಅವರು ಇಹಲೋಕ ತ್ಯಜಿಸಿದ್ದರು, ಬೆಂಗಳೂರು ಗ್ರಾಮಾಂತರ ಜಿಲ್ಲೆ ನೆಲಮಂಗಲ ತಾಲ್ಲೂಕಿನ ಸೊಲದೇವನಹಳ್ಳಿ ಗ್ರಾಮದ ತೋಟದ ಮನೆಯಲ್ಲಿ ದೈವಾದೀನರಾಗಿದ್ದಾರೆ ಅವರಿಗೆ 85 ವರ್ಷ, ಲೀಲಾವತಿ ಅವರು ಕನ್ನಡ, ತೆಲುಗು, ಮಲೆಯಾಳಿ ಸೇರಿದಂತೆ ಅನೇಕ ಭಾಷೆಗಳಲ್ಲಿ ನಟಿಸಿದ ಲೀಲಾವತಿ ಅಮ್ಮ ಬಹುಭಾಷಾ ತಾರೆಯಾಗಿ ಚಿತ್ರರಂಗದಲ್ಲಿ ಮಿಂಚಿದ್ದರು, 600ಕ್ಕಿಂತ ಹೆಚ್ಚು ಚಲನಚಿತ್ರಗಳಲ್ಲಿ ನಟಿಸಿ ಹೆಗ್ಗಳಿಕೆಯನ್ನು ಮೆರೆದಿದ್ದರು. ಅವರ ನಿಧನ ಸುದ್ದಿ ಸ್ಯಾಂಡಲ್ ವುಡ್ ನಲ್ಲಿ ಅರಗಿಸಿಕೊಳ್ಳಲು ಸಾಧ್ಯವಾಗುತ್ತಿಲ್ಲ.
ವರನಟ ಡಾ. ರಾಜ್ ಕುಮಾರ್ ಅವರ ಕಾಲದಿಂದಲೂ ಸಹ ಅಮೋಘವಾದ ಪಾತ್ರ್ಗಗಳಲ್ಲಿ ನಟಿಸಿ ಜನಾನುರಾಗಿ ಯಾಗಿದ್ದರು, ಕನ್ನಡದಲ್ಲಿಯೇ 400ಕ್ಕೊ ಹೆಚ್ಚು ಸಿನಿಮಾದಲ್ಲಿ ಅಭಿನಯಿಸಿದ್ದಾರೆ.
1939 ರಲ್ಲಿ ಲೀಲಾವತಿ ಅವರು ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿಯಲ್ಲಿ ಜನಿಸಿದ್ದರು.ಕನ್ನಡದ ಹಿರಿಯ ನಟಿ ಲೀಲಾವತಿ ಅವರು 1949ರಲ್ಲಿ ಶಂಕರ್ ನಾಗ್ ಅಭಿನಯದ ನಾಗಕನ್ನಿಕೆ ಸಿನಿಮಾದಲ್ಲಿ ಸಖಿಯ ಪಾತ್ರದ ಮೂಲಕ ಚಂದನವನ ಪ್ರವೇಶಿಸಿದ್ದರು. ಸುಬ್ಬಯ್ಯ ನಾಯ್ಡು ಅವರ ಸಂಸ್ಥೆಯಲ್ಲಿ ರಂಗಭೂಮಿ ಕಲಾವಿದೆಯಾಗಿದ್ದ ಲೀಲಾವತಿ ಅವರು, ಕಯಾದುವಿನ ಸಖಿಯಾಗಿ ಅಭಿನಯಿಸಿದ್ದರು. ಮಹಾಲಿಂಗ ಭಾಗವತರ ನಾಟಕ ಸಂಸ್ಥೆಯನ್ನು ಸೇರಿ ಹಲವಾರು ನಾಟಕಗಳಲ್ಲಿ ಅಭಿನಯಿಸಿದರು. ಸುಬ್ಬಯ್ಯ ನಾಯ್ಡು ಅವರ ‘ಭಕ್ತ ಪ್ರಹ್ಲಾದ’ದಲ್ಲಿ ಕೂಡ ಅಭಿನಯಿಸಿದರು. ಹಲವಾರು ಚಿತ್ರಗಳಲ್ಲಿ ಚಿಕ್ಕ ಪಾತ್ರಗಳಲ್ಲಿ ಅಭಿನಯಿಸಿದ್ದರು.
ಲೀಲಾವತಿ ಅಭಿನಯಿಸಿದ ಸಿನಿಮಾಗಳು
ಭಕ್ತ ಪ್ರಹ್ಲಾದ, ಮಾಂಗಲ್ಯ ಯೋಗ, ರಾಜ ಮಲಯ ಸಿಂಹ, ಅಬ್ಬಾ ಆ ಹುಡುಗಿ, ಧರ್ಮ ವಿಜಯ, ದಶವತಾರ, ರಣಧೀರ ಕಂಠೀರವ, ರಾಣಿ ಹೊನ್ನಮ್ಮ, ಕೈವಾರ ಮಹಾತ್ಮೆ, ಕಣ್ತೆರೆದು ನೋಡು, ಕಿತ್ತೂರು ಚೆನ್ನಮ್ಮ, ಗಾಳಿ ಗೋಪುರ, ಕರುಣೆಯೇ ಕುಟುಂಬದ ಕಣ್ಣು, ಭೂದಾನ,ಭಕ್ತ ಕುಂಬಾರ, ವೀರ ಕೇಸರಿ, ಭಾಗ್ಯದೇವತೆ, ಸೋತು ಗೆದ್ದವಳು, ನಂದಾದೀಪ, ವಿಧಿ ವಿಲಾಸ, ಸಂತ ತುಕಾರಾಂ, ರಣಧೀರ ಕಂಠೀರವ ಮುಂತಾದ ಚಿತ್ರಗಳಲ್ಲಿ ನಟಿಸಿದ್ದಾರೆ.
ನರೇಂದ್ರ ಮೋದಿ ಸಂತಾಪ
ಕನ್ನಡ ಚಿತ್ರರಂಗದ ಹೆಸರಾಂತ ನಟಿ ಲೀಲಾವತಿ ಅವರ ನಿಧನದ ಸುದ್ದಿ ಕೇಳಿ ದುಃಖವಾಯಿತು. ಸಿನಿಮಾದ ನೈಜ ಪ್ರತೀಕವಾದ ಅವರು ಹಲವಾರು ಚಲನಚಿತ್ರಗಳಲ್ಲಿ ತಮ್ಮ ಬಹುಮುಖ ನಟನೆಯೊಂದಿಗೆ ಬೆಳ್ಳಿ ಪರದೆಯನ್ನು ಅಲಂಕರಿಸಿದವರು. ಅವರ ವೈವಿಧ್ಯಮಯ ಪಾತ್ರಗಳು ಮತ್ತು ಅದ್ಭುತ ಪ್ರತಿಭೆಯನ್ನು ಸದಾ ಸ್ಮರಿಸಲಾಗುತ್ತದೆ ಮತ್ತು ಪ್ರಶಂಸಿಸಲಾಗುತ್ತದೆ. ಅವರ ಕುಟುಂಬ ಮತ್ತು ಅಭಿಮಾನಿಗಳಿಗೆ ನನ್ನ ಸಂತಾಪಗಳು. ಓಂ ಶಾಂತಿ
ಕುಮಾರ ಸ್ವಾಮಿ ಸಂತಾಪ
ಕನ್ನಡ ಚಿತ್ರರಂಗದ ಶ್ರೇಷ್ಠ ನಟಿಯರಲ್ಲಿ ಒಬ್ಬರು, ಬಹುಭಾಷಾ ಕಲಾವಿದರಾದ ಲೀಲಾವತಿ ಅವರ ನಿಧನದ ವಾರ್ತೆ ಕೇಳಿ ಬಹಳ ನೋವುಂಟಾಯಿತು. ನಾಯಕಿಯಾಗಿ ಮಾತ್ರವಲ್ಲದೆ, ಪೋಷಕ ಪಾತ್ರಗಳಿಗೂ ಜೀವ ತುಂಬಿ ಬೆಳ್ಳಿತೆರೆಯ ಮೇಲೆ ಅವುಗಳ ಹೆಜ್ಜೆಗುರುತುಗಳು ಮೂಡುವಂತೆ ಮಾಡಿದವರು ಅವರು. ಅಮ್ಮ, ಅಕ್ಕ, ಅತ್ತೆ ಸೇರಿ ಅನೇಕ ಪಾತ್ರಗಳಲ್ಲಿ ಪರಕಾಯ ಪ್ರವೇಶ ಮಾಡಿ ನಟಿಸುತ್ತಿದ್ದರು.
ಕಿಚ್ಚಾ ಸುದೀಪ ಟ್ವೀಟ್
ಮೇರು ನಟಿ ಲೀಲಾವತಿ ಅವರು ಇಹಲೋಕ ತ್ಯಜಿಸಿದ್ದಾರೆ. ಬಹು ಭಾಷಾ ತಾರೆಯಾಗಿದ್ದ ಅವರ ಕಲಾಸೇವೆ ಅನನ್ಯ. ಲೀಲಾವತಿ ಅಮ್ಮನ ನಿಧನಕ್ಕೆ ಕಂಬನಿ ಮಿಡಿಯುತ್ತೇನೆ. ಅವರ ಆತ್ಮಕ್ಕೆ ಶಾಂತಿ ಕೋರುತ್ತೇನೆ ಎಂದರು.
ಆರ್ ಅಶೋಕ್ ಸಂತಾಪ
ಕನ್ನಡ ಹೆಸರಾಂತ ನಟಿ ಲೀಲಾವತಿ ಅವರು ಅನಾರೋಗ್ಯದಿಂದ ವಿಧಿವಶರಾದ ಗಿರುವುದು ಕನ್ನಡ ಚಿತ್ರರಂಗಕ್ಕೆ ತುಂಬಲಾರದ ನಷ್ಟವಾಗಿದೆ, ನೂರಾರು ಚಿತ್ರಗಳಲ್ಲಿ ಅಭಿನಯಿಸಿ ಅಭಿನೆತ್ರಿಯಾಗಿದ್ದರು, ಸರ್ಕಾರದ ಗೌರವದೊಂದಿಗೆ ಅಂತ್ಯಕ್ರಿಯೆ ಆಗಬೇಕು ಎಂದು ಸರ್ಕಾರದ ಜೊತೆ, ಕಾರ್ಯದರ್ಶಿಗಳಾದ ಜೊತೆ ಮಾತನಾಡುತ್ತೇನೆ ಎಂದು ವಿಪಕ್ಷ ನಾಯಕ ಆರ್ ಅಶೋಕ್ ಲೀಲಾವತಿ ಅವರ ಬಗ್ಗೆ ಮೆಲುಕು ಹಾಕಿದರು.
ತೋಟದ ಮನೆಯಲ್ಲಿ ಅಂತ್ಯಕ್ರಿಯೆ
ಹಿರಿಯ ನಟಿ ಲೀಲಾವತಿ ಅವರ ಅಂತಿಮ ಸಂಸ್ಕಾರವನ್ನು (Cremation) ಅವರ ನೆಚ್ಚಿನ ತೋಟದಲ್ಲಿ ಮಾಡುವ ಕುರಿತು ನಿರ್ಧಾರ ತೆಗೆದುಕೊಳ್ಳಲಾಗಿದೆ. ನೆಲಮಂಗಲ ಸಮೀಪದ ಸೋಲದೇವನಹಳ್ಳಿ (Soladevanahalli) ತೋಟದಲ್ಲಿ ಲೀಲಾವತಿ ಅವರ ಅಂತಿಮ ಸಂಸ್ಕಾರ ಮಾಡಲು ತೀರ್ಮಾನ ತೆಗೆದುಕೊಳ್ಳಲಾಗಿದೆ.
ಶನಿವಾರ ಬೆಳಿಗ್ಗೆಯಿಂದ 2 ಗಂಟೆ ವರೆಗೆ ನೆಲಮಂಗಲದ ಅಂಬೇಡ್ಕರ್ ಮೈದಾನದಲ್ಲಿ ಸಾರ್ವಜನಿಕರ ದರ್ಶಕ್ಕೆ ವ್ಯವಸ್ಥೆ ಮಾಡಲಾಗಿದೆ. ವಿಐಪಿ, ವಿವಿಐಪಿ, ಸಾರ್ವಜನಿಕರಿಗೆ ಪ್ರತ್ಯೇಕ ವ್ಯವಸ್ಥೆ ಕಲ್ಪಿಸಲಾಗಿದೆ. ಮಧ್ಯಾನದ ನಂತರ ಕಲಾವಿದರ ಒತ್ತಾಯದ ಮೇರೆಗೆ ರವೀಂದ್ರ ಕಲಾಕ್ಷೇತ್ರದಲ್ಲಿ ಸಾರ್ವಜನಿಕರಿಗೆ ಅಂತಿಮ ದರ್ಶನಕ್ಕೆ ವ್ಯವಸ್ಥೆ ಕಲ್ಪಿಸಲಾಗಿದೆ. ಸಂಜೆ ಅವರ ತೋಟದ ಮನೆಯಲ್ಲಿ ಮಣ್ಣು ಮಾಡಲು ಸಿದ್ಧತೆ ಮಾಡಿಕೊಳ್ಳುತ್ತಿದ್ದಾರೆ.