ಬೆಂಗಳೂರು: ಕರ್ನಾಟಕ ಪ್ರದೇಶ ಆರ್ಯ ಈಡಿಗರ ಸಂಘದಿಂದ ಡಿಸೆಂಬರ್ 10 ರಂದು ಅಮೃತ ಮಹೋತ್ಸವ ಹಾಗೂ ಜಾಗೃತ ಸಮಾವೇಶ ಯಾರ ವಿರುದ್ಧವೂ ಮಾಡಿಲ್ಲ ಎಂದು ಸಂಘದ ಅಧ್ಯಕ್ಷ ಡಾಕ್ಟರ್ ತಿಮ್ಮೇಗೌಡ ಅವರು ಸ್ಪಷ್ಟಪಡಿಸಿದ್ದರು.
ಬೆಂಗಳೂರಿನ ಪ್ರೆಸ್ ಕ್ಲಬ್ ನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಬೆಂಗಳೂರಿನ ಅರಮನೆ ಮೈದಾನದಲ್ಲಿ ನಡೆದ ಸಮಾವೇಶದಲ್ಲಿ ಯಾವುದೇ ಸಂಘಟಕರ ಸ್ವಾರ್ಥ ಈ ಒಂದು ಸಮಾವೇಶದಲ್ಲಿ ಅಡಗಿಲ್ಲ, ಈಡಿಗ, ಬಿಲ್ಲವ, ನಾಮಧಾರಿ, ನಾಡಾರ್ ಸೇರಿದಂತೆ 26 ಹೆಚ್ಚು ಸಮುದಾಯದ ಮುಖಂಡರು ಸಚಿವರು, ಶಾಸಕರು, ಸ್ವಾಮೀಜಿಗಳು ಸೇರಿದಂತೆ ಎಲ್ಲರೂ ಸಹ ಒಂದೇ ವೇದಿಕೆಯಲ್ಲಿ ಇರುವುದನ್ನು ನೋಡಬಹುದಾಗಿದೆ ಎಂದರು.
ಸಂಘದ ಮುಖ್ಯ ಉದ್ದೇಶ ಸಮುದಾಯವನ್ನು ಒಂದುಗೂಡಿಸುವುದು, ಸಮುದಾಯದ ಜನರನ್ನು ಒಂದುಗೂಡಿಸುವುದು ಹಾಗೂ ಮುಖ್ಯವಾಹಿನಿಗೆ ತರುವುದೇ ನಮ್ಮ ಮುಖ್ಯ ಉದ್ದೇಶವಾಗಿದೆ, ಸರ್ಕಾರದಿಂದ ಸಿಗುವ ಅನುದಾನವನ್ನು ಬಳಸಿಕೊಂಡು ಆರ್ಥಿಕವಾಗಿ ಶೈಕ್ಷಣಿಕವಾಗಿ ರಾಜಕೀಯವಾಗಿ ಮುಂದೆ ಬರಲು ಶ್ರಮಿಸುತ್ತಿದೆ ಎಂದು ತಿಳಿಸಿದರು. ಇದರಲ್ಲಿ ಯಾವುದೇ ರೀತಿಯ ಸ್ವಾರ್ಥ ಅಡಗಿಲ್ಲ ಎಂದು ಇದೇ ವೇಳೆ ಸ್ಪಷ್ಟನೆಯನ್ನು ನೀಡಿದರು.
ಅದೇ ಈಡಿಗರ ಸಂಘದ ಅಮೃತ ಮಹೋತ್ಸವ ಹಾಗೂ ಜಾಗೃತಿ ಸಮಾವೇಶ ಯಶಸ್ವಿಯಾಗಿದ್ದು ಸರ್ಕಾರಕ್ಕೆ ತಮ್ಮ ಸಮಸ್ಯೆಗಳನ್ನು ಮನವರಿಕೆ ಮಾಡಿ ಕೊಟ್ಟಿದ್ದೇವೆ ಸರ್ಕಾರದಿಂದ 500 ಕೋಟಿ ಅನುದಾನ ನೀಡುವಂತೆ ಸರ್ಕಾರಕ್ಕೆ ಒತ್ತಾಯ ಮಾಡಿದ್ದೇವೆ ಎಂದು ಇದೇ ವೇಳೆ ತಿಳಿಸಿದರು. ಪತ್ರಿಕ ಗೋಷ್ಟಿಯಲ್ಲಿ ಸಂಘದ ಪ್ರಧಾನ ಕಾರ್ಯದರ್ಶಿ ಹೆಚ್ ಟಿ ಮೋಹನ್ ದಾಸ್, ಸೇರಿದಂತೆ ಸಂಘದ ಪದಾಧಿಕಾರಿಗಳು ಇದೆ ವೇಳೆ ಉಪಸ್ಥಿರಿದ್ದರು.