ಚಿಕ್ಕಬಳ್ಳಾಪುರ: ಯುವ ಕಾಂಗ್ರೆಸ್ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹಾಗೂ ಏಐಸಿಸಿ ಸದಸ್ಯ ಎಂ.ಎಸ್. ರಕ್ಷಾ ರಾಮಯ್ಯ ಅವರು ಆದಿಚುಂಚನಗಿರಿ ಮಠದ ಡಾ. ನಿರ್ಮಲಾನಂದ ಸ್ವಾಮೀಜಿ ಅವರನ್ನು ಭೇಟಿಯಾಗಿ ಆಶೀರ್ವಾದ ಪಡೆದರು.
ಚಿಕ್ಕಬಳ್ಳಾಪುರದ ಚುಂಚನಗಿರಿ ಮಠದಲ್ಲಿ ನಡೆದ ಕಡಲೆಕಾಯಿ ಪರಿಷೆಯಲ್ಲಿ ರಕ್ಷಾ ರಾಮಯ್ಯ ಭಾಗವಹಿಸಿ ಜನ ಸಾಮಾನ್ಯರ ಜೊತೆ ಸಮಾಲೋಚನೆ ನಡೆಸಿದರು.
ನಂತರ ಮಾತನಾಡಿದ ರಕ್ಷಾ ರಾಮಯ್ಯ, ಆದಿಚುಂಚನಗಿರಿ ಮಠದೊಂದಿಗೆ ನಮ್ಮ ಕುಟುಂಬ ಅವಿನಾಭಾವ ಸಂಬಂಧ ಹೊಂದಿದೆ. ಡಾ. ನಿರ್ಮಲಾನಂದ ಸ್ವಾಮೀಜಿ ಅವರು ಆಧ್ಯಾತ್ಮಿಕ ಚಟುವಟಿಕೆ ಜೊತೆಗೆ ಮಾಹಿತಿ ತಂತ್ರಜ್ಞಾನ ಕ್ಷೇತ್ರದ ಬಗ್ಗೆಯೂ ಆಳವಾದ ಜ್ಞಾನ ಹೊಂದಿದ್ದಾರೆ ಎಂದರು.