ಬೆಂಗಳೂರು:ಬೆಂಗಳೂರಿನ ಖಾಸಗಿ ಹೊಟೇಲ್ ರೆಯಾಡಿಸನ್ನಲ್ಲಿ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಅಧ್ಯಕ್ಷತೆಯಲ್ಲಿ ಹಾಗು ಸಹಕಾರ ಸಚಿವ ಕೆ.ಎನ್.ರಾಜಣ್ಣ ಅವರ ನೇತೃತ್ವದಲ್ಲಿ ನಡೆದ ತುಮಕೂರು ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಆಯ್ಕೆ ಸಂಬಂಧ ಸಭೆ ನಡೆಸಲಾಯಿತು.
ಸಹಕಾರಿ ಸಚಿವರಾದ ಕೆ.ಎನ್.ರಾಜಣ್ಣ ಅವರು ಏರ್ಪಡಿಸಿದ್ದ ಔತಣಕೂಟದಲ್ಲಿ ಗೃಹಸಚಿವರಾದ ಡಾ.ಜಿ.ಪರಮೇಶ್ವರ್,ದೆಹಲಿಯ ವಿಶೇಷ ಪ್ರತಿನಿಧಿ ಹಾಗೂ ಶಿರಾ ಶಾಸಕರಾದ ಟಿ.ಬಿ.ಜಯಚಂದ್ರ,ಗುಬ್ಬಿಯ ಎಸ್.ಆರ್.ಶ್ರೀನಿವಾಸ್, ತಿಪಟೂರಿನ ಷಡಕ್ಷರಿ, ಪಾವಗಡ ಶಾಸಕರಾದ ವಿ.ವೆಂಕಟೇಶ್,ಕುಣಿಗಲ್ನ ಹೆಚ್.ಡಿ.ರಂಗನಾಥ್, ಮಾಜಿ ಸಚಿವರಾದ ವೆಂಕಟರವಣಪ್ಪ, ಮಾಜಿ ಶಾಸಕರಾದ ಡಿ.ಸಿ.ಗೌರಿಶಂಕರ್,ಹೆಚ್.ನಿಂಗಪ್ಪ, ಡಾ.ರಫೀಕ್ ಅಹಮದ್,ಬಿ.ಎಂ.ಎಲ್.ಕಾಂತರಾಜು,ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಇಕ್ಬಾಲ್ ಅಹಮದ, ತುಮಕೂರು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಚಂದ್ರಶೇಖರಗೌಡ ಸೇರಿದಂತೆ ಹಲವು ಮುಖಂಡರು 2024ರ ಲೋಕಸಭಾ ಚುನಾವಣೆಯ ತುಮಕೂರು ಲೋಕಸಭಾ ಕ್ಷೇತ್ರದ ಅಭ್ಯರ್ಥಿಯ ಆಯ್ಕೆ ಕುರಿತಂತೆ ಚರ್ಚೆ ನಡೆಸಿದರು.
ಅಂತಿಮವಾಗಿ ತುಮಕೂರು ಲೋಕಸಭಾ ಕ್ಷೇತ್ರದ ಅಭ್ಯರ್ಥಿಯ ಆಯ್ಕೆಯ ಸಂಪೂರ್ಣ ಜವಾಬ್ದಾರಿಯನ್ನು ಗೃಹ ಹಾಗೂ ತುಮಕೂರು ಜಿಲ್ಲಾ ಉಸ್ತುವಾರಿ ಸಚಿವರಾದ ಡಾ.ಜಿ.ಪರಮೇಶ್ವರ್ ಹಾಗೂ ಸಹಕಾರಿ ಸಚಿವರಾದ ಕೆ.ಎನ್.ರಾಜಣ್ಣ ಅವರಿಗೆ ನೀಡಿದ್ದು, ಅವರು ಆಯ್ಕೆ ಮಾಡುವ ಅಭ್ಯರ್ಥಿಯ ಗೆಲುವಿಗೆ ಶ್ರಮಿಸುವುದಾಗಿ ಸಭೆಯಲ್ಲಿದ್ದ ಎಲ್ಲರೂ ಒಪ್ಪಿಗೆ ಸೂಚಿಸಿದರು.
ಸಹಕಾರ ಸಚಿವರದ ಕೆ.ಎನ್.ರಾಜಣ್ಣ ಅವರು ಏರ್ಪಡಿಸಿದ್ದ ಔತಣಕೂಟದ ವೇಳೆ ನಿಕಟಪೂರ್ವ ಶಾಸಕರಾದ ಡಿ.ಸಿ.ಗೌರಿಶಂಕರ್ ಅವರು ಗೃಹ ಹಾಗೂ ಜಿಲ್ಲಾ ಉಸ್ತುವಾರಿ ಸಚಿರಾದ ಡಾ.ಜಿ.ಪರಮೇಶ್ವರ್, ಸಹಕಾರ ಸಚಿವರಾದ ಕೆ.ಎನ್.ರಾಜಣ್ಣ,ಮಾಜಿ ಸಚಿವರುಗಳಾದ ವೆಂಕಟರವಣಪ್ಪ, ಟಿ.ಜಿ.ಜಯಚಂದ್ರ, ಎಸ್.ಆರ್.ಶ್ರೀನಿವಾಸ್,ಶಾಸಕರಾದ ಡಾ.ಹೆಚ್.ಡಿ.ರಂಗನಾಥ್,ಕೆ.ಷಡಕ್ಷರಿ ಹಾಗೂ ಮಾಜಿ ಶಾಸಕರುಗಳಿಗೆ ಅತ್ಮೀಯವಾಗಿ ಅಭಿನಂದಿಸಿದರು.