ಬೆಂಗಳೂರು: ಬೆಂಗಳೂರು ಜಿಲ್ಲಾ ಭಗೀರಥ ಉಪ್ಪಾರ ಸಂಘದ ವತಿಯಿಂದ ಕುಲ ಪುರುಷ ಭಗೀರಥ ಮಹರ್ಷಿಯವರನ್ನು ಸ್ಮರಿಸಿ ಪೂಜ್ಯ ಕುಲಗುರುಗಳ ಆಶೀರ್ವಾದದೊಂದಿಗೆ ಶ್ರೀ ರಾಮ ಮಂದಿರ ಲೋಕಾರ್ಪಣ ಕಾರ್ಯಕ್ರಮವನ್ನು ಆಚರಿಸಲಾಯಿತು.
ಭಗೀರಥ ಧಾರ್ಮಿಕ ಪೀಠ ಕತ್ರಗುಪ್ಪೆ, ಬೆಂಗಳೂರು ಆವರಣದಲ್ಲಿ ಸರಳವಾಗಿ ಶ್ರದ್ಧಾ ಭಕ್ತಿಯೊಂದಿಗೆ ಆಚರಿಸಲಾಯಿತು, ಅಯೋಧ್ಯೆಯಲ್ಲಿ ಶ್ರೀರಾಮ ಪ್ರಾಣ ಪ್ರತಿಷ್ಟಾಪನೆ ಕಾರ್ಯ ಅದ್ದೂರಿಯಾಗಿ ನೆರವೇರಿಸಲಾಯಿತು. ಹೀಗಾಗಿ ಸಂಘದ ಆವರಣದಲ್ಲಿ ಶ್ರೀರಾಮನ ಭಾವಚಿತ್ರಕ್ಕೆ ವಿಶೇಷ ಪೂಜೆ ಸಲ್ಲಿಸುವ ಮೂಲಕ ಭಕ್ತಿ ಭಾವವನ್ನು ಸಲ್ಲಿಸಿದರು.
ಬೆಂಗಳೂರು ಜಿಲ್ಲಾ ಭಗೀರಥ ಉಪ್ಪಾರ ಸಂಘದ ಅಧ್ಯಕ್ಷರಾದ ಸುನಿಲ್ ಕುಮಾರ್ ಉಪ್ಪಾರ್, ಪ್ರಧಾನ ಕಾರ್ಯದರ್ಶಿಗಳು ಬೋಜರಾಜ್ ಸಿ ವೈ, ಸಂಘದ ಕಾರ್ಯಾಧ್ಯಕ್ಷರಾದ ಎಂಎನ್ ಲೋಕೇಶ್ ಸೇರಿದಂತೆ ಸಂಘದ ಪದಾಧಿಕಾರಿಗಳು ಉಪ್ಪಾರ ಕುಲಬಾಂಧವರಿಗೂ ಹೃತ್ಪೂರ್ವಕ ಧನ್ಯವಾದಗಳು, ಇನ್ನು ಇದೇ ವೇಳೆ ನೆರೆದಿದ್ದವರಿಗೇ, ಸಾರ್ವಜನಿಕರಿಗೆ ಸಿಹಿ ಹಂಚಿ ಸಂಭ್ರಮ ವ್ಯಕ್ತಪಡಿಸಿದರು.