ಬೆಂಗಳೂರು: ವಿಧಾನ ಪರಿಷತ್ʼಗೆ ನಡೆಯಲಿರುವ ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪ ಚುನಾವಣೆಯ ಜೆಡಿಎಸ್-ಬಿಜೆಪಿ ಮೈತ್ರಿ (NDA) ಅಭ್ಯರ್ಥಿಯಾದ ಎ.ಪಿ.ರಂಗನಾಥ್ ಅವರು ಚುನಾವಣಾಧಿಕಾರಿಗಳು ಹಾಗೂ ಪ್ರಾದೇಶಿಕ ಆಯುಕ್ತರ ಕಚೇರಿಯಲ್ಲಿ ನಾಮಪತ್ರ ಸಲ್ಲಿಸಿದರು.
ಮಾಜಿ ಮುಖ್ಯಮಂತ್ರಿಗಳು ಹಾಗೂ ಜೆಡಿಎಸ್ ರಾಜ್ಯಾಧ್ಯಕ್ಷರಾದ ಹೆಚ್.ಡಿ.ಕುಮಾರಸ್ವಾಮಿ ಅವರು, ಬಿಜೆಪಿ ಹಿರಿಯ ನಾಯಕರು ಹಾಗೂ ಮಾಜಿ ಉಪ ಮುಖ್ಯಮಂತ್ರಿಗಳಾದ ಡಾ.ಸಿಎನ್.ಅಶ್ವತ್ಥನಾರಾಯಣ ಅವರು, JDS ಕೋರ್ ಕಮಿಟಿ ಅಧ್ಯಕ್ಷರಾದ ಜಿ.ಟಿ.ದೇವೇಗೌಡರು, ವಿಧಾನ ಪರಿಷತ್ ಸದಸ್ಯರಾದ ಟಿ.ಎ.ಶರವಣ, ಮಾಜಿ ಸದಸ್ಯರಾದ ಚೌಡರೆಡ್ಡಿ ತೂಪಲ್ಲಿ, ಜೆಡಿಎಸ್ ನಗರ ಘಟಕದ ಅಧ್ಯಕ್ಷರಾದ ಹೆಚ್.ಎಂ.ರಮೇಶ್ ಗೌಡರು ಮಾಜಿ ಮುಖ್ಯಮಂತ್ರಿ ಅವರ ಜತೆಯಲ್ಲಿ ಇದ್ದರು.