ಬೆಂಗಳೂರು: ರಾಜ್ಯ ಸರ್ಕಾರ ವಿಶ್ವ ಗುರು ಬಸವಣ್ಣನವರನ್ನು ಸಾಂಸ್ಕೃತಿಕ ನಾಯಕ ಎಂದು ಘೋಷಿಸಿ, ರಾಜ್ಯದ ಎಲ್ಲಾ ಸರ್ಕಾರಿ ಕಛೇರಿಗಳಲ್ಲಿ ಬಸವಣ್ಣನವರ ಭಾವಚಿತ್ರವನ್ನು ಅನಾವರಣಗೊಳಿಸಲು ಆದೇಶ ನೀಡಿದ ಹಿನ್ನೆಲೆ ಬಿಎಂಟಿಸಿ ಕಚೇರಿಯಲ್ಲಿ ಬಸವಣ್ಣನ ಭಾವಚಿತ್ರಕ್ಕೆ ಸಾರಿಗೆ ಸಚಿವ ನಮಿಸಿದರು.
ಬಸವಣ್ಣರನ್ನು ಸಾಂಸ್ಕೃತಿಕ ನಾಯಕ ಎಂದು ಸರ್ಕಾರಿ ಕಚೇರಿಗಳಲ್ಲಿ ಬರೆಯಬೇಕೆಂದು ಘೋಷಿಸಿರುವ ಹಿನ್ನೆಲೆ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯ ಕೇಂದ್ರ ಕಛೇರಿಯಲ್ಲಿ ಗಣ್ಯರು ಬಸವಣ್ಣನವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿದರು.
ಸರಳ ಕಾರ್ಯಕ್ರಮದಲ್ಲಿ ಸಾರಿಗೆ ಮತ್ತು ಮುಜರಾಯಿ ಸಚಿವರಾದ ರಾಮಲಿಂಗಾರೆಡ್ಡಿರವರು ಹಾಗೂ ವ್ಯವಸ್ಥಾಪಕ ನಿರ್ದೇಶಕರಾದ ರಾಮಚಂದ್ರನ್. ಆರ್. ರವರು ವಿಶ್ವಗುರು ಬಸವಣ್ಣನವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿದರು. ಈ ಸಂದರ್ಭದಲ್ಲಿ ಎಲ್ಲಾ ಇಲಾಖ ಮುಖ್ಯಸ್ಥರು, ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಹಾಜರಿದ್ದರು.