ಚಿಕ್ಕಬಳ್ಳಾಪುರ; ಯುವ ಕಾಂಗ್ರೆಸ್ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಎಂ.ಎಸ್. ರಕ್ಷಾ ರಾಮಯ್ಯ ಚಿಕ್ಕಬಳ್ಳಾಪುರ ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ವಿವಿಧ ಪ್ರದೇಶಗಳಲ್ಲಿಂದು ಮಿಂಚಿನ ಸಂಚಾರ ನಡೆಸಿದರು. ವಿವಿಧ ಧಾರ್ಮಿಕ ಮತ್ತು ಕ್ರೀಡಾ ಚಟುವಟಿಕೆಗಳಲ್ಲಿ ಭಾಗಿಯಾದರು.
ಗುಡಿಬಂಡೆ ತಾಲ್ಲೂಕಿನ ಯೆಲೊಡು ಆದಿನಾರಾಯಣ ಸ್ವಾಮಿ ಜಾತ್ರಾ ಮಹೋತ್ಸವದಲ್ಲಿ ಭಾಗಿಯಾಗಿ ದೇವರ ದರ್ಶನ ಪಡೆದರು. ಗುಡಿ ಬಂಡೆ ತಾಲ್ಲೂಕಿನ ಕಾಂಗ್ರೆಸ್ ಮುಖಂಡರು ಮತ್ತು ವಿವಿಧ ಕ್ಷೇತ್ರಗಳ ಗಣ್ಯರೊಂದಿಗೆ ಸಮಾಲೋಚನೆ ನಡೆಸಿದರು. ಗುಡಿ ಬಂಡೆ ತಾಲ್ಲೂಕಿನ ಸಮಸ್ಯೆಗಳಿಗೆ ಧ್ವನಿಯಾಗಿ ಬಗೆಹರಿಸುವುದಾಗಿ ಎಂ.ಎಸ್. ರಕ್ಷಾ ರಾಮಯ್ಯ ಭರವಸೆ ನೀಡಿದರು.
ಮಧ್ಯಾಹ್ನ 1 ಗಂಟೆಗೆ ಚಿಕ್ಕ ಬಳ್ಳಾಪುರದ ಸರ್ ಎಂ.ವಿ. ಕ್ರೀಡಾಂಗಣದಲ್ಲಿ ಆಯೋಜಿಸಿದ್ದ ಕ್ರಿಕೆಟ್ ಟೂರ್ನಿಯಲ್ಲಿ ಭಾಗವಹಿಸಿದರು. ಕ್ರೀಡಾಪಟುಗಳೊಂದಿಗೆ ಚರ್ಚೆ ನಡೆಸಿದ ಅವರು, ಕ್ರೀಡೆ ಮನೋವಿಕಾಸಕ್ಕೆ ಪೂರಕ. ಕ್ರೀಡಾ ಚಟುವಟಿಕೆಗಳಿಗೆ ಸಾಧ್ಯವಿರುವ ಎಲ್ಲಾ ರೀತಿಯ ಸಹಕಾರ ನೀಡಲಾಗುವುದು ಎಂದರು.
ತರುವಾಯ ಮಧ್ಯಾಹ್ನ 2 ಗಂಟೆಗೆ ದೇವನಹಳ್ಳಿಯ ವೇಣು ಗೋಪಾಲ ಸ್ವಾಮಿ ಬ್ರಹ್ಮ ರಥೋತ್ಸವದಲ್ಲಿ ಭಾಗಿಯದ ಎಂ.ಎಸ್. ರಕ್ಷಾ ರಾಮಯ್ಯ, ದೇವರ ದರ್ಶನ ಪಡೆದರು.
ದೇವನಹಳ್ಳಿಯ ಅಂಬೇಡ್ಕರ್ ಭವನದಲ್ಲಿ ಆಯೋಜಿಸಿದ್ದ ಬಾಡಿ ಬಿಲ್ಡಿಂಗ್ ಸ್ಪರ್ಧೆಯಲ್ಲಿ ಭಾಗಿಯಾದರು. ಈ ಸಂದರ್ಭದಲ್ಲಿ ಮಾತನಾಡಿದ ರಕ್ಷಾ ರಾಮಯ್ಯ, ಸದೃಢ ದೇಹವಿದ್ದರೆ ಸದೃಢ ಮನಸ್ಸಿರುತ್ತದೆ. ಕ್ರೀಡೆ, ವ್ಯಾಯಾಮ, ಕಸರತ್ತು ನಡೆಸುವ ಮೂಲಕ ದೇಹವನ್ನು ದಂಡಿಸಬೇಕು. ಇದರಿಂದ ಜೀವನ ಪರ್ಯಂತ ದೈಹಿಕವಾಗಿ ಚಟುವಟಿಕೆಯಿಂದ ಇರಲು ಸಾಧ್ಯ ಎಂದು ಹೇಳಿದರು.
ದೊಡ್ಡಬಳ್ಳಾಪುರ ಪಟ್ಟಣದಲ್ಲಿ ಆಯೋಜಿಸಿದ್ದ ಕಬ್ಬಡಿ ಪಂದ್ಯಾವಳಿಯಲ್ಲಿ ಭಾಗವಹಿಸಿ ಕ್ರೀಡಾಪಟುಗಳಿಗೆ ಶುಭ ಕೋರಿದರು. ಕಬ್ಬಡಿ ಮೂಲತಃ ನಮ್ಮ ಗ್ರಾಮೀಣ ಕ್ರೀಡೆಯಾಗಿದ್ದು, ಇಂದು ಕಬ್ಬಡ್ಡಿ ಅಂತರರಾಷ್ಟ್ರೀಯ ಮಟ್ಟದಲ್ಲಿ ಜನಪ್ರಿಯತೆ ಪಡೆದುಕೊಂಡಿದೆ ಎಂದರು.