ಬೆಂಗಳೂರು: ಚಾಮರಾಜನಗರದ `ಲೋಕಸಭಾ ಕ್ಷೇತ್ರಕ್ಕೆ ಕಾಂಗ್ರೆಸ್ ಪಕ್ಷದ ಪ್ರಬಲ ಟಿಕೆಟ್ ಆಕಾಂಕ್ಷಿಯಾದ ಕಾಂಗ್ರೆಸ್ ಪಕ್ಷದ ಯುವ ನಾಯಕರಾದ ನಟರಾಜ್ ಡಿ.ಎನ್ ರವರಿಗೆ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯನವರು, ಉಪಮುಖ್ಯಮಂತ್ರಿಗಳು ಮತ್ತು ಪ್ರದೇಶ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರಾದ ಡಿ.ಕೆ ಶಿವಕುಮಾರ್ ರವರು ಚಾಮರಾಜನಗರದ ಲೋಕಸಭಾ ಕ್ಷೇತ್ರಕ್ಕೆ ಟಿಕೆಟ್ ನೀಡಬೇಕೆಂದು ಕರ್ನಾಟಕ ರಾಜ್ಯ ಶಿಕ್ಷಣ ವೇದಿಕೆ ಅಧ್ಯಕ್ಷ ಗಂಗಾಧರ ಮೂರ್ತಿ ತಿಳಿಸಿದರು.
ಪ್ರೆಸ್ ಕ್ಲಬ್ ನಲ್ಲಿ ಪತ್ರಿಕಾಗೋಷ್ಟಿ ನಡೆಸಿ ಮಾತನಾಡಿದ ಅವರು, ನಟರಾಜ್ ಡಿ.ಎನ್ ರವರು ಚಾಮರಾಜನಗರ ಜಿಲ್ಲೆಯ ಸಂತಮಾರನಹಳ್ಳಿ ಹೋಬಳಿಯವರು, ಡಿಗ್ರೀ ಪದವಿ ದರ, ರಾಜ್ಯ ಬಿ.ಎಡ್ ಪದವೀಧರ ವೇದಿಕೆಯನ್ನು ಹುಟ್ಟು ಹಾಕುವ ಮೂಲಕ ವೇದಿಕದ ರಾಜ್ಯಾಧ್ಯಕ್ಷರಾಗಿ ಹಲವಾರು ವಿದ್ಯಾರ್ಥಿ ಹೋರಾಟಗಳ ಮೂಲಕ ಸರ್ಕಾರದ ಗಮನವನ್ನು ಸೆಳೆಯುತ್ತಾ ಬಿ.ಎಡ್ ಪದವೀಧ ಅಶೋತ್ತರಗಳಿಗೆ ಮತ್ತು ಸಮಸ್ಯೆಗಳಿಗೆ ಸದಾ ಸ್ಪಂದಿಸುತ್ತಾ ಬಂದಿದ್ದಾರೆ.
ಕಾಂಗ್ರೆಸ್ ನಲ್ಲಿ ಸಕ್ರಿಯ ರಾಜಕಾರಣ ಮಾಡಿಕೊಂಡು ಬರುತ್ತಿದ್ದಾರೆ, ರಾಹುಲ್ ಗಾಂಧಿ ನಡೆಸಿದ್ದ ಭಾರತ್ ಜೋಡೋ ಯಾತ್ರೆ, ಪ್ರಜಾಧ್ವನಿ, ಮೇಖೆದಾಟು ಯೋಜನೆಯ ಪ್ರತಿಭಟನೆಯಲ್ಲಿ ನಿರಂತರವಾಗಿ ತೊಡಗಿಕೊಂಡು ಸಮಾಜಮುಖಿ ಕಾರ್ಯದಲ್ಲಿ ತೊಡಗಿದ್ದಾರೆ. ಸರ್ಕಾರದ ಹಂತಗಳಲ್ಲಿ ಹಲವಾರು ನೇಮಕಾತಿ ವಿಷಯ ಕುರಿತಂತೆ ಬೆಂಗಳೂರು ಮತ್ತು ವಿವಿಧ ಜಿಲ್ಲೆಗಳಲ್ಲಿ ತನ್ನದೇ ಆದ ವೇದಿಕೆಯ ಹೋರಾಟಗಳನ್ನು ರೂಪಿಸುವ ಮೂಲಕ ಸರ್ಕಾರ ಮತ್ತು ಶಿಕ್ಷಣ ಇಲಾಖೆಯ ಗಮನವನ್ನು ಸೆಳೆದಿದ್ದಾರೆ ಎಂದರು.
2006ರಲ್ಲಿ ನಟರಾಜ್ ಡಿ.ಎನ್ ರವರಿಗೆ ಬೆಂಗಳೂರು ಪದವೀಧರ ಕ್ಷೇತ್ರದ ಟಿಕೆಟ್ ನೀಡಿ ಮೊದಲ ಬಾರಿ ಚುನಾವಣಾ ಕಣಕ್ಕೆ ಇಳಿಸುವ ಮೂಲಕ ರಾಜಕೀಯ ಪ್ರವೇಶಕ್ಕೆ ಮುನ್ನುಡಿ ಬರೆದಿದ್ದಾರೆ.ಸತೀಶ್ ಜಾರಕಿಹೊಳಿಯವರು ಮತ್ತು ಅಂಬೇಡ್ಕರ್ ವಾದಿಗಳಾದ ಎಚ್. ಸಿ ಮಾದೇವಪ್ಪ ಚಾಮರಾಜನಗರದ ಅಭಿವೃದ್ಧಿಯ ಹರಿಕಾರರಾದ ದಿ. ಎಚ್ ಸಿ ಮಹದೇವ ಪ್ರಸಾದ್ ಮತ್ತು ದಿ. ಧ್ರುವನಾರಾಯಣ್ ರವರ ಮಾರ್ಗದರ್ಶನದಲ್ಲಿ ತತ್ವ ಸಿದ್ಧಾಂತಗಳನ್ನು ಮೈಗೂಡಿಸಿಕೊಂಡು ಸಕ್ರಿಯ ರಾಜಕಾರಣದಲ್ಲಿ ಸುಮಾರು ವರ್ಷ ಅನುಭವವಿದೆ.
ಪಕ್ಷದಲ್ಲಿ ಯಾವುದೇ ಸ್ಥಾನಮಾನ ಇಲ್ಲದಿದ್ದರೂ ಸಹಾ ಕಾಂಗ್ರೆಸ್ ಪಕ್ಷಕ್ಕೆ ಶಿಸ್ತು ಬದ್ದ ಕಾರ್ಯಕರ್ತನಾಗಿ ತಮ್ಮನ್ನು ಗುರುತಿಸಿಕೊಂಡಿದ್ದಾರೆ. 2009 ಉಪ ಚುನಾವಣೆ, 2013 ಮತ್ತು 18ರ ವಿಧಾನಸಭಾ ಚುನಾವಣೆಯಲ್ಲಿ ಕೊಳ್ಳೇಗಾಲ ವಿಧಾನಸಭಾ ಕ್ಷೇತ್ರಕ್ಕೆ ಪ್ರಬಲ ಆಕಾಂಕ್ಷಿಯಾಗಿದ್ದರು. ಆಗ ಟಿಕೆಟ್ ನೀಡಿರಲಿಲ್ಲ ,ಆದರೂ ಸಹಾ ಟಿಕೆಟ್ ಕೊಟ್ಟವರ ಪರವಾಗಿ,ಗೆಲುವಿಗಾಗಿ ದುಡಿದಿದ್ದಾರೆ. ಕಳೆದ ಚುನಾವಣೆಯಲ್ಲಿ ಕೃಷ್ಣ ಮೂರ್ತಿ ಪರವಾಗಿ ನಿಂತು ಗೆಲುವಿಗೆ ಕೆಲಸ ಮಾಡಿದ್ದಾರೆ. ಹೀಗೆ 20 ವರ್ಷಗಳ ಕಾಲ ಸುದೀರ್ಘ ರಾಜಕೀಯ ಜೀವನವನ್ನು ಕಳೆದಿದ್ದಾರೆ.
ನಿಷ್ಠಾವಂತ ಯುವ ಕಾಂಗ್ರೆಸ್ ನಾಯಕರಾದ ನಟರಾಜ್ ಡಿ ಎನ್ ರವರಿಗೆ ಚಾಮರಾಜನಗರ ಲೋಕಸಭಾ ಮೀಸಲು ಕ್ಷೇತ್ರಕ್ಕೆ ಟಿಕೆಟ್ ನೀಡುವ ಮೂಲಕ ಒಬ್ಬ ಯುವ ದಲಿತ ಮುಖಂಡನನ್ನು ಲೋಕಸಭೆಗೆ ಕಲಿಸಿಕೊಡಬೇಕು. ರೈತರ, ದೀನ ದಲಿತರ ಬಗ್ಗೆ ನಟರಾಜ್ ಅವರಿಗೆ ಎಲ್ಲಿಲ್ಲದ ಪ್ರೀತಿ ಅಪಾರವಾಗಿದೆ. ಟಿಕೆಟ್ ನೀಡುವ ಬಗ್ಗೆ ರಾಜ್ಯದ ನಾಯಕರಿಗೆ ಈಗಾಗಲೇ ಮನವಿ ಮಾಡಿಕೊಳ್ಳಲಾಗಿದೆ, ಅದೇ ರೀತಿ ಕೇಂದ್ರದ ನಾಯಕರಿಗೂ 2 ಭಾರಿ ಮನವಿ ಸಲ್ಲಿಸಲಾಗಿದೆ ಎಂದು ಇದೇ ವೇಳೆ ತಿಳಿಸಿದರು.
ಪತ್ರಿಕಾಗೋಷ್ಠಿಯಲ್ಲಿ ವೇದಿಕೆಯ ಗೌರವ ಅಧ್ಯಕ್ಷರಾದ ನವರತ್ನ ಕುಮಾರ್, ಪ್ರಸಾದ್, ದರ್ಶನ್, ಸೇರಿದಂತೆ ನಟರಾಜ್ ಬೆಂಬಲಿಗರು ಉಪಸ್ಥಿತರಿದ್ದರು.