ಬೆಂಗಳೂರು:ಮುಂಬರುವ ಐಪಿಎಲ್(IPL) ಕ್ರಿಕೆಟ್ ಪಂದ್ಯಾವಳಿಗಳಿಗೆ ಅನುಕೂಲವಾಗುವಂತೆ ಸಂಸ್ಕರಿಸಿದ ನೀರನ್ನು ಚಿನ್ನಸ್ವಾಮಿ ಕ್ರೀಡಾಂಗಣಕ್ಕೆ ಒದಗಿಸಲು ಕೋರಿ KSCA BWSSB ಗೆ ಮನವಿ ಮಾಡಿತು.
ಆಡಳಿತ ಮಂಡಳಿಯ ಪದಾಧಿಕಾರಿಗಳು ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಯ ಅಧ್ಯಕ್ಷರಾದ ಡಾ.ವಿ. ರಾಮ್ ಪ್ರಸಾತ್ ಮನೋಹರ್ ಅವರನ್ನು ಭೇಟಿ ಮಾಡಿ ಮನವಿ ಮಾಡಿದರು.
ಪಂದ್ಯಾವಳಿಗಳ ಸಂದರ್ಭದಲ್ಲಿ ಪ್ರತಿನಿತ್ಯ ಸುಮಾರು 75,000 ಲೀಟರ್ಗಳಷ್ಟು ನೀರಿನ ಅವಶ್ಯಕತೆ ಇದೆ. ಇದಕ್ಕಾಗಿ ಕಬ್ಬನ್ ಪಾರ್ಕ್ ತ್ಯಾಜ್ಯ ನೀರು ಸಂಸ್ಕರಣ ಘಟಕದಿಂದ ಅಗತ್ಯ ನೀರನ್ನು ದೊರಕಿಸಿ ಕೊಡುವಂತೆ KSCA ಪದಾಧಿಕಾರಿಗಳು ಮನವಿ ಮಾಡಿದರು.
ಇದಕ್ಕೆ ಸಕಾರಾತ್ಮಕವಾಗಿ ಸ್ಪಂದಿಸಿದ ಜಲಮಂಡಳಿ ಅಧ್ಯಕ್ಷರಾದ ರಾಮ್ ಪ್ರಸಾತ್ ಮನೋಹರ್ ಅವರು ಸಂಸ್ಕರಿಸಿದ ನೀರನ್ನು ಬಳಸಲು ಉತ್ತೇಜನ ನೀಡುವ ದೃಷ್ಟಿಯಿಂದ ಹಾಗು ಇದರಿಂದ ಕಾವೇರಿ ಅಥವಾ ಕೊಳವೆ ಬಾವಿಯ ನೀರು ದುರ್ಬಳಕೆ ಆಗದೆ ಇರುವುದರಿಂದ ಸದರಿ ಚಟುವಟಿಕೆಯನ್ನು ಅನುವು ಮಾಡವುದು ಎಂದು ತಿಳಿಸಿದರು.