ಬೆಂಗಳೂರು: ಸಾರ್ವಜನಿಕರ ಹಿತದೃಷ್ಟಿಯಿಂದ ಜಲಮಂಡಳಿ ವತಿಯಿಂದ ಬೇಸಿಗೆ ಮುಗಿಯುವವರೆಗೂ ಮುಂದಿನ ಎರಡು (ಏಪ್ರಿಲ್, ಮೇ) ತಿಂಗಳುಗಳ ಕಾಲ ಸಾರ್ವಜನಿಕರ ಸಮಸ್ಯೆಗಳನ್ನು ಆಲಿಸುವ ಸಲುವಾಗಿ ಪ್ರತಿ ಶುಕ್ರವಾರ ಬೆಳಗ್ಗೆ 9:30 ರಿಂದ 10:30 ರವರೆಗೆ ನೇರ ಫೋನ್ ಇನ್ ಕಾರ್ಯಕ್ರಮವನ್ನು ಆಯೋಜಿಸಲಾಗುವುದು ಎಂದು ಜಲಮಂಡಳಿ ಅಧ್ಯಕ್ಷ ಡಾ.ವಿ.ರಾಮ್ ಪ್ರಸಾತ್ ಮನೋಹರ್ ತಿಳಿಸಿದ್ದಾರೆ.
ಈ ಫೋನ್ ಇನ್ ಕಾರ್ಯಕ್ರಮದ ಮುಖಾಂತರ ಬೆಂಗಳೂರು ನಗರದ ನಾಗರಿಕರು ತಮ್ಮ ಮನೆಯ ಹಾಗೂ ಸುತ್ತಮುತ್ತಲಿನ ಪ್ರದೇಶದಲ್ಲಿನ ನೀರಿನ ಹಾಗೂ ಒಳಚರಂಡಿ ಸಮಸ್ಯೆಗಳ ಬಗ್ಗೆ ಮಂಡಳಿಯ ಅಧ್ಯಕ್ಷರು ಹಾಗೂ ಹಿರಿಯ ಅಧಿಕಾರಿಗಳೊಂದಿಗೆ ನೇರವಾಗಿ ಮಾತನಾಡಿ ಸಮಸ್ಯೆಗಳನ್ನು ಬಗೆಹರಿಸಿಕೊಳ್ಳುವ ಅವಕಾಶವನ್ನು ಈ ಕಾರ್ಯಕ್ರಮದ ಮೂಲಕ ನೀಡಲಾಗುತ್ತಿದೆ ಎಂದು ಅವರು ತಿಳಿಸಿದ್ದಾರೆ.
ಬೆಂಗಳೂರು ನಾಗರಿಕರು ಈ ಕಾರ್ಯಕ್ರಮದ ಸದುಪಯೋಗಪಡಿಸಿಕೊಳ್ಳಬೇಕೆಂದು ಜಲಮಂಡಳಿ ಪ್ರಕಟಣೆಯಲ್ಲಿ ತಿಳಿಸಿದೆ.