ಬೆಂಗಳೂರು: ಜಿಲ್ಲೆಯ ಇಂಡಿ ತಾಲ್ಲೂಕಿನ ಲಚ್ಯಾಣ ಗ್ರಾಮದಲ್ಲಿ ಮಗುವೊಂದು ಪಾಳು ಕೊಳವೆ ಬಾವಿಗೆ ಬಿದ್ದಿರುವುದಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಎಂ ಬಿ ಪಾಟೀಲ ದಿಗ್ಭ್ರಮೆ ವ್ಯಕ್ತಪಡಿಸಿದ್ದಾರೆ. ಜತೆಗೆ ಮಗುವನ್ನು ರಕ್ಷಿಸಲು ಕ್ಷಿಪ್ರ ಗತಿಯಲ್ಲಿ ಕಾರ್ಯಾಚರಣೆ ನಡೆಸುವಂತೆ ಜಿಲ್ಲಾಡಳಿತಕ್ಕೆ ಸೂಚಿಸಿದ್ದು ಆ ಬಗ್ಗೆ ಕ್ಷಣಕ್ಷಣಕ್ಕೂ ಮಾಹಿತಿ ಪಡೆಯುತ್ತಿದ್ದಾರೆ.
ಘಟನೆಯ ಬಗ್ಗೆ ತಿಳಿಯುತ್ತಿದ್ದಂತೆಯೇ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳನ್ನು ದೂರವಾಣಿ ಮೂಲಕ ಸಂಪರ್ಕಿಸಿದ ಸಚಿವರು, ಸೂಕ್ತ ನಿರ್ದೇಶನ ನೀಡಿದರು.
ಮಗುವನ್ನು ರಕ್ಷಿಸಲು ನಿಗಾ ವಹಿಸಿ ಕಲಸ ಮಾಡಲು ಅವರು ಸೂಚಿಸಿದ್ದು, ಜಿಲ್ಲಾಡಳಿತದೊಂದಿಗೆ ನಿರಂತರ ಸಂಪರ್ಕದಲ್ಲಿದ್ದಾರೆ.