ಬೆಂಗಳೂರು: ಬಿಬಿಎಂಪಿ ವ್ಯಾಪ್ತಿಯಲ್ಲಿ ಸಾಂಕ್ರಾಮಿಕ ರೋಗಗಳ ಹರಡುವಿಕೆ ತಡೆಗಟ್ಟುವ ಕುರಿತು ಆರೋಗ್ಯ ವಿಭಾಗದ ವಿಶೇಷ ಆಯುಕ್ತರಾದ ಸುರೋಳ್ಕರ್ ವಿಕಾಸ್ ಕಿಶೋರ್ ರವರು ಜಲಮಂಡಳಿ ಅಧ್ಯಕ್ಷರಿಗೆ ಪತ್ರ ಬರೆದಿದ್ದಾರೆ.
ಪ್ರಸ್ತುತ ಬೇಸಿಗೆ ಕಾಲದಲ್ಲಿ ಸಾಂಕ್ರಾಮಿಕ ರೋಗಗಳು ಉಲ್ಬಣಗೊಳ್ಳದಂತೆ ನಿಯಂತ್ರಿಸಲು ಜಲಮಂಡಳಿ ಇಲಾಖೆಯ ಸಹಕಾರ ಅತ್ಯಗತ್ಯವಾಗಿದ್ದು, ಈ ಹಿನ್ನೆಲೆಯಲ್ಲಿ ತಮ್ಮ ಇಲಾಖೆಯ ಅಧೀನದಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಅಧಿಕಾರಿ/ಸಿಬ್ಬಂದಿಗಳಿಗೆ ಈ ಕೆಳಕಂಡಂತೆ ಸೂಚನೆ ನೀಡಲು ತಮ್ಮಲ್ಲಿ ಕೋರಲಾಗಿದೆ.
* ತಮ್ಮ ವ್ಯಾಪ್ತಿಗೆ ಬರುವ ನೀರಿನ ಶುದ್ದೀಕರಣ ಘಟಕಗಳು ಮತ್ತು ಕೊನೆಯ ಹಂತದ ವಿತರಣ ನೀರಿನ ಮಾದರಿಗಳಲ್ಲಿ ಕ್ಲೋರಿನೇಷನ್ ಮಟ್ಟ ನಿಯಮಾನುಸಾರ ಇರುವ ಬಗ್ಗೆ ಖಾತ್ರಿ ಪಡಿಸಿಕೊಳ್ಳಲು ಸಂಬಂಧಪಟ್ಟ ಅಧಿಕಾರಿಗಳಿಗೆ ನಿರ್ದೇಶನ ನೀಡುವಂತೆ ಕೋರಿದೆ.
* ಸಾಂಕ್ರಾಮಿಕ ರೋಗಗಳು ವರದಿಯಾದ ಪ್ರದೇಶಗಳಲ್ಲಿ Manhole ಗಳು ಮತ್ತು ಕೊಳಚೆ ನೀರಿನಿಂದ ಮಾದರಿಗಳನ್ನು ಸಂಗ್ರಹಿಸಲು ಆರೋಗ್ಯ ಇಲಾಖೆಯ ಸಿಬ್ಬಂದಿಗಳಿಗೆ ಅಗತ್ಯ ಸಹಕಾರ ನೀಡುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ನಿರ್ದೇಶನ ನೀಡುವಂತೆ ಕೋರಿದೆ.
* ಯಾವುದಾದರೂ ನೀರಿನ ಕೊಳವೆಗಳು ಸೋರಿಕೆ ಇದ್ದಲ್ಲಿ ಪರಿಶೀಲಿಸಿ ಸೂಕ್ತ ಕ್ರಮ ಕೈಗೊಳ್ಳುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ನಿರ್ದೇಶನ ನೀಡುವಂತೆ ಕೋರಿದೆ.
* ಮೇಲ್ಕಂಡ ಎಲ್ಲಾ ವಿಷಯಗಳಿಗೆ ತೆಗೆದುಕೊಂಡ ಕ್ರಮಗಳ ಬಗ್ಗೆ ಕಾರ್ಯಕ್ರಮ ಅಧಿಕಾರಿಗಳು(ಐ.ಹೆಚ್.ಐ.ಪಿ) ಬಿಬಿಎಂಪಿ ಇ-ಮೇಲ್ [email protected] ಗೆ ಕಳುಹಿಸಲು ಸಂಬಂಧಪಟ್ಟ ಅಧಿಕಾರಿಗಳಿಗೆ ನಿರ್ದೇಶನ ನೀಡುವಂತೆ ಈ ಪತ್ರದ ಮೂಲಕ ಕೋರಲಾಗಿದೆ.