ಬೆಂಗಳೂರು: ವಿಶ್ವಕರ್ಮ ಸಮಾಜ ರಾಜಕೀಯ, ಆರ್ಥಿಕ ಶೈಕ್ಷಣಿಕವಾಗಿ ಹಿಂದುಳಿದ ಕಾರಣ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ನಮ್ಮ ಸಮಾಜವನ್ನು ಮುಖ್ಯ ವಾಹಿನಿಗೆ ತರುವ ನಿಟ್ಟಿನಲ್ಲಿ ಸಮಾಜಕ್ಕೆ ಬೆಂಬಲ ನೀಡುತ್ತಾರೆಂಬ ನಂಬಿಕೆಯಿಂದ ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಗೆ ಬೆಂಬಲ ವ್ಯಕ್ತಪಡಿಸಲಾಗುತ್ತದೆ ಎಂದು ಅಖಿಲ ಭಾರತ ವಿಶ್ವಕರ್ಮ ಮಹಾ ಸಂಘದ ರಾಷ್ಟ್ರೀಯ ಅಧ್ಯಕ್ಷ ಡಾ. ಜಯಂತಿ ಅವರು ತಿಳಿಸಿದರು.
ಬೆಂಗಳೂರಿನ ಪುಸ್ತಕದಲ್ಲಿ ಪತ್ನಿಯ ವಾಚ್ ನಡೆಸಿದ ಜಯಂತ್ ಅವರು, ವಿಶ್ವಕರು ಸಮಾಜವು ರಾಜಕೀಯವಾಗಿ ಶೈಕ್ಷಣಿಕವಾಗಿ ಹಾಗೂ ಆರ್ಥಿಕವಾಗಿ ಬಹಳ ಹಿಂದುಗಳು ಎಂದು ದೇಶದಲ್ಲಿ ಸಾಕಷ್ಟು ಜನಸಂಖ್ಯೆಯನ್ನು ಹೊಂದಿದೆ ಆದರೆ ಯಾವ ಸರ್ಕಾರಗಳು ಸಹ ಸಮುದಾಯಕ್ಕೆ ಅನುಕೂಲವನ್ನು ಮಾಡಿಕೊಟ್ಟಿಲ್ಲ ಹೀಗಾಗಿ ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ಮೇಲೆ ನಂಬಿಕೆ ಇಟ್ಟಿದ್ದೇವೆ ಹೀಗಾಗಿ ಬಿಜೆಪಿ ಪಕ್ಷವನ್ನು ಬೆಂಬಲಿಸುತ್ತಿದ್ದೇವೆ ಎಂದರು.
ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ವಿಶ್ವಕರ್ಮ ಸಮ್ಮಾನ್ ಯೋಜನೆಯನ್ನು ಕೊಡುವ ಮುಖಾಂತರ ನಮ್ಮ ಸಮಾಜಕ್ಕೆ ಮನ್ನಣೆ ನೀಡುವ ಮೂಲಕ ನಮ್ಮ ಸಮಾಜದ ಕಾಯಕವನ್ನು ಎತ್ತಿ ಹಿಡಿದಿದ್ದಾರೆಂದು ಶ್ಲಾಘಿಸಿದರು. ಅಯೋಧ್ಯಾ ಶ್ರೀರಾಮ ವಿಗ್ರಹವನ್ನು ಕೆತ್ತನೆ ಮಾಡಲು ನಮ್ಮ ಸಮಾಜದ ಶಕ್ತಿ ಅರುಣ್ ಹೇಗಿರಲಿ ಅವಕಾಶ ನೀಡುವ ಮುಖಾಂತರ ನಮ್ಮ ಸಮಾಜದ ಕೀರ್ತಿಯನ್ನು ರಾಜ್ಯ ಹಾಗೂ ರಾಷ್ಟ್ರ ವಿಶ್ವ ಮಟ್ಟದಲ್ಲಿ ತೋರಿಸಿದ್ದಾರೆ.
ವಿಶ್ವಕರ್ಮ ಸಮಾಜದ ಬಂಧುಗಳಿಗೆ ತಿಳಿಸುವುದೇನೆಂದರೆ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ನಮ್ಮ ಸಮಾಜಕ್ಕೆ ನೀಡಿರುವ ಎಲ್ಲಾ ಸಹಕಾರಗಳನ್ನು ಮನಗಂಡು ಈ ಮೂಲಕ ಬಿಜೆಪಿ ಮೈತ್ರಿ ಪಕ್ಷಕ್ಕೆ ಮತ ನೀಡುವಂತೆ ಸಮುದಾಯದ ಎಲ್ಲಾ ಜನರಿಗೆ ಮನವಿ ಮಾಡಿದರು.
ಪತ್ರಿಕಾಗೋಷ್ಠಿಯಲ್ಲಿ ಅಖಿಲ ಭಾರತ ವಿಶ್ವಕರ್ಮ ಮಹಾಸಂಘದ ಪದಾಧಿಕಾರಿಗಳು ಇದೆ ವೇಳೆ ಉಪಸ್ಥಿತರಿದ್ದರು.