ಬೆಂಗಳೂರು: ಯಲಹಂಕ ತಾಲೂಕಿನ ಸಿಂಗನಾಯಕನ ಹಳ್ಳಿ ಗ್ರಾಮ ಪಂಚಾಯತಿ ವ್ಯಾಪ್ತಿಗೆ ಬರಲಿದ್ದು, ಸದರಿ ಪ್ರದೇಶದಲ್ಲಿ ಅಳವಡಿಸಿರುವ ಫ್ಲೆಕ್ಸ್ ನಿಂದಾಗಿ ಓರ್ವ ವ್ಯಕ್ತಿಗೆ ಅಪಘಾತ ಸಂಭವಿಸಿರುತ್ತದೆ. ಮುಂದುವರಿದು, ಕೆಲ ಮಾಧ್ಯಮಗಳಲ್ಲಿ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಎಚ್ಚೆತ್ತುಕೊಳ್ಳುತ್ತಿಲ್ಲ, ಎಂಬಿತ್ಯಾದಿ ರೀತಿ ಮಾಧ್ಯಮಗಳಲ್ಲಿ ಪ್ರಸಾರವಾಗುತ್ತಿದೆ.
ಈ ಸಂಬಂಧ ಪಾಲಿಕೆ ವ್ಯಾಪ್ತಿಯಲ್ಲಿ ಈಗಾಗಲೇ ಅನಧಿಕೃತವಾಗಿ ಅಳವಡಿಸುತ್ತಿರುವ ಫ್ಲೆಕ್ಸ್/ಬ್ಯಾನರ್ ಗಳನ್ನು ತೆರವುಗಿಳಿಸುತ್ತಿದ್ದು, ಫ್ಲೆಕ್ಸ್/ಬ್ಯಾನರ್ ಅಳವಡಿಸುವವರ ಮೇಲೆ ಎಫ್.ಐ.ಆರ್ ದಾಖಲಿಸಲಾಗುತ್ತಿರುವ ಜೊತೆಗೆ ಶಿಸ್ತು ಕ್ರಮ ಕೈಗೊಳ್ಳಲಾಗುತ್ತಿದೆ.
ಫ್ಲೆಕ್ಸ್ ಅಪಘಾತ ನಡೆದ ಸ್ಥಳವು ಯಲಹಂಕ ತಾಲೂಕಿನ ಸಿಂಗನಾಯಕನ ಹಳ್ಳಿ ಗ್ರಾಮ ಪಂಚಾಯತಿ ವ್ಯಾಪ್ತಿಗೆ ಬರಲಿದ್ದು, ಬಿಬಿಎಂಪಿ ವ್ಯಾಪ್ತಿಗೆ ಒಳಪಡುವುದಿಲ್ಲ. ಬಿಬಿಎಂಪಿಯ ವ್ಯಾಪ್ತಿಯಲ್ಲದೆ ಗ್ರಾಮ ಪಂಚಾಯತಿ ವ್ಯಾಪ್ತಿಗೆ ಬರುತ್ತದೆಂದು ಈ ಮೂಲಕ ಸ್ಪಷ್ಟೀಕರಿಸಿದೆ.
ಕೆಲ ಮಾಧ್ಯಮಗಳಲ್ಲಿ ತಪ್ಪು ಮಾಹಿತಿ(ಬಿಬಿಎಂಪಿ ವ್ಯಾಪ್ತಿಯಲ್ಲಿ) ಬಿತ್ತರಿಸಲಾಗುತ್ತಿದೆ. ಅದನ್ನು ಸರಿಪಡಿಸಿ ನಿಖರ ಮಾಹಿತಿಯನ್ನು ಸಾರ್ವಜನಿಕರಿಗೆ ತಿಳಿಯಪಡಿಸುವಂತೆ ಕೋರುತ್ತಾ, ಸ್ಪಷ್ಟೀಕರಣವನ್ನು ತಮ್ಮ ಮಾಧ್ಯಮಗಳಲ್ಲಿ ಪ್ರಚುರಪಡಿಸುವಂತೆ ಕೋರಿದೆ.