ನವದೆಹಲಿ: ಮಾಜಿ ಪ್ರಧಾನಿಗಳಾದ ಹೆಚ್.ಡಿ.ದೇವೇಗೌಡರು ನವದೆಹಲಿಯಲ್ಲಿರುವ ಪ್ರಧಾನಮಂತ್ರಿಗಳ ವಸ್ತು ಸಂಗ್ರಹಾಲಯಕ್ಕೆ ಭೇಟಿ ನೀಡಿದರು.
ಭಾರತಕ್ಕೆ ತಮ್ಮದೇ ಆದ ಅನನ್ಯ ಕೊಡುಗೆ ನೀಡಿರುವ ಎಲ್ಲಾ ಪ್ರಧಾನಿಗಳ ಮಾಹಿತಿಯನ್ನು ವಸ್ತು ಸಂಗ್ರಹಾಲಯದಲ್ಲಿ ಪ್ರದರ್ಶಿಸಲಾಗಿದ್ದು, ಈ ನಿಟ್ಟಿನಲ್ಲಿ ಪ್ರಧಾನಿಗಳಾದ ನರೇಂದ್ರ ಮೋದಿ ಅವರು ಕೈಗೊಂಡ ಕ್ರಮಗಳ ಬಗ್ಗೆ ಅತೀವ ಸಂತಸ ವ್ಯಕ್ತಪಡಿಸಿದರು.
ಪ್ರಧಾನಿಗಳ ವಸ್ತು ಸಂಗ್ರಹಾಲಯಕ್ಕೆ ಭೇಟಿ ನೀಡಿದ ಬಗ್ಗೆ ಮಾಜಿ ಪ್ರಧಾನಿಗಳು ಸಂತಸ ವ್ಯಕ್ತಪಡಿಸಿದ್ದು, ಅಲ್ಲಿ ಕಳೆದ ಕ್ಷಣಗಳ ಬಗ್ಗೆ ಭಾವುಕರಾಗಿ ಪ್ರತಿಕ್ರಿಯಿಸಿದ್ದಾರೆ.
ಈ ಸಂದರ್ಭದಲ್ಲಿ ವಸ್ತು ಸಂಗ್ರಹಾಲಯದ ಅಧಿಕಾರಿಗಳು ಮಾಜಿ ಪ್ರಧಾನಿಗಳನ್ನು ಬರ ಮಾಡಿಕೊಂಡು, ಅಲ್ಲಿನ ಎಲ್ಲಾ ಪ್ರಧಾನಿಗಳ ಕುರಿತಾದ ಮಾಹಿತಿಯನ್ನು ನೀಡಿದರು.ಅಲ್ಲದೆ, ವೀಕ್ಷಕರ ಪುಸ್ತಕದಲ್ಲಿ ತಮ್ಮ ಅಭಿಪ್ರಾಯವನ್ನು ಮಾಜಿ ಪ್ರಧಾನಿಗಳು ಬರೆದಿದ್ದಾರೆ.