ಬೆಂಗಳೂರು: SCSP/TSP ಕಾಯ್ದೆಯನ್ನು ಉಲ್ಲಂಘಿಸಿ ಹಣದ ದುರುಪಯೋಗ, ವಾಲ್ಮೀಕಿ ಅಭಿವೃದ್ಧಿ ನಿಗಮದ ಅವ್ಯವಹಾರ, ‘ಮೂಡ’ ದಲ್ಲಿ ನಡೆದಿರುವ ಭ್ರಷ್ಟಾಚಾರ, ಎಸ್.ಸಿ/ಎಸ್.ಟಿ. ವಿದ್ಯಾರ್ಥಿಗಳಿಗೆ ಮಾಡುತ್ತಿರುವ ವಂಚನೆಗಳನ್ನು ಖಂಡಿಸಿ ಆ.15ರಿಂದ 21ರ ವರೆಗೆ ಕಾಲ್ನಡಿಗೆ ಜಾಥ ಹಮ್ಮಿಕೊಳ್ಳಲಾಗಿದೆ ಎಂದು ಡಿಎಸ್ಎಸ್ ಭೂಮವಾದ ಸಂಘಟನೆಯ ರಾಜ್ಯಾಧ್ಯಕ್ಷ ಡಾ. ಮೋಹನ್ ರಾಜ್ ತಿಳಿಸಿದರು.
ಬೆಂಗಳೂರಿನ ಪ್ರೆಸ್ ಕ್ಲಬ್ ನಲ್ಲಿ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಅವರು, ರಾಜ್ಯ ಸರ್ಕಾರದಲ್ಲಿ ನಡೆದಿದೆ ಎನ್ನಲಾದ ಹಗರಣಗಳ ಸರಮಾಲೆಯ ವಿರುದ್ಧ ದಲಿತ ಸಂಘಟನೆಗಳ ಸಮಾನಮನಸ್ಕ ರು ಖಂಡಿಸಿದ್ದು, ಆ.15ರಿಂದ 21ರ ವರೆಗೆ ಮೈಸೂರಿನಿಂದ ಬೆಂಗಳೂರಿನ ತನಕ ಕಾಲ್ನಡಿಗೆ ಜಾಥ ಹಮ್ಮಿಕೊಳ್ಳಲಾಗಿದ್ದು, ಸರ್ಕಾರದಲ್ಲಿ ನಡೆದಿರುವ ಬ್ರಹ್ಮಾಂಡ ಭ್ರಷ್ಟಾಚಾರ ಕುರಿತು ಜನರಿಗೆ ತಿಳಿಸುವ ಕೆಲಸವನ್ನು ಮಾಡಲಾಗುತ್ತದೆ. ಸಮಾಜ ಕಲ್ಯಾಣ ಸಚಿವರ ರಾಜೀನಾಮಗೆ ಒತ್ತಾಯಿಸಿ ಹಾಗೂ ಎಸ್.ಸಿ/ಎಸ್.ಟಿ. ಗಳ ವಿರೋಧಿ ಸಮಾಜ ಕಲ್ಯಾಣ ಇಲಾಖೆಯ ಎ.ಸಿ.ಎಸ್ ಮಣಿವಣ್ಣನ್ ರನ್ನು ಸೇವೆಯಿಂದ ಅಮಾನತ್ತು ಮಾಡಲು ಒತ್ತಾಯಿಸಿ ಮೈಸೂರು ಜಿಲ್ಲಾಧಿಕಾರಿ ಕಛೇರಿಯಿಂದ ಬೆಂಗಳೂರಿನ ವಿಧಾನಸೌಧಕ್ಕೆ ಹಮ್ಮಿಕೊಂಡಿದ್ದ ಕಾಲ್ನಡಿಗೆ ಜಾಥದ ಮುಖಾಂತರ ರಾಜ್ಯಪಾಲರಿಗೆ ಮನವಿ ಸಲ್ಲಿಸಲಾಗುತ್ತದೆ.
ಕಾಂಗ್ರೆಸ್ ಸರ್ಕಾರದಿಂದ sc st ಸಮುದಾಯಗಳಿಗೆ ವಂಚನೆ
ಕಾಂಗ್ರೇಸ್ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಎಸ್.ಸಿ./ಎಸ್.ಟಿ. ಸಮುದಾಯಗಳಿಗೆ ವಂಚಿಸುತ್ತ ಬಂದಿದೆ. ಕಳೆದ ಒಂದು ವರ್ಷದಿಂದ ಎಸ್.ಸಿ/ಎಸ್.ಟಿ. ಸಮುದಾಯಗಳ ಅಭಿವೃದ್ಧಿಗಾಗಿ ಮೀಸಲಿಟ್ಟ SCSP/TSP ಯ ಸುಮಾರು 25,000 ಹಣ ದುರುಪಯೋಗಪಡಿಸಿಕೊಂಡಿದೆ. ಇದರಿಂದ ಈ ಸಮುದಾಯಗಳಿಗೆ ಸರ್ಕಾರ ಅನ್ಯಾಯ ಎಸಗಿದ್ದಾರೆ.
ಇದೇ ಸಂದರ್ಭದಲ್ಲಿ ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ಭ್ರಷ್ಟಚಾರದಿಂದ ಕೋಟ್ಯಾಂತರ ರೂಪಾಯಿಗಳ ಹಣವನ್ನು ಗುಳುಂ ಮಾಡಿದ್ದು, ಸಂಬಂಧಪಟ್ಟ ಸಚಿವರನ್ನು ಸಚಿವ ಸ್ಥಾನದಿಂದ ಕೆಳಗಿಳಿಸಿದ ಮಾತ್ರಕ್ಕೆ ಶಿಕ್ಷೆ ಆದಂತಲ್ಲ, ಬದಲಿಗೆ ಇದಕ್ಕೆ ಸರ್ಕಾರ ನೇರ ಹೊಣೆ ಹೊತ್ತು ಕೊಳ್ಳಬೇಕು, ಪ್ರಕರಣವು ಸಿಬಿಐ ತನಿಖೆಗೆ ವಹಿಸಬೇಕು ಎಂದು ಆಗ್ರಹ ಮಾಡಿದರು.
ಎಸ್.ಸಿ/ಎಸ್.ಟಿ. ಮಕ್ಕಳಿಗೆ ಉನ್ನತ ವ್ಯಾಸಂಗಕ್ಕೆ ವಿದೇಶಕ್ಕೆ ಹೋಗುವ ಯೋಜನೆಯನ್ನು ರದ್ದುಗೊಳಿಸಿದ್ದಾರೆ. ಎಸ್.ಸಿ/ಎಸ್.ಟಿ. ಮಕ್ಕಳಿಗೆ ಎಸ್.ಎಸ್.ಎಲ್.ಸಿ ಪಿಯು ಯಲ್ಲಿ ನೀಡುತ್ತಿದ್ದ ಪ್ರೋತ್ಸಾಹ ಹಣಕ್ಕೂ ಎಸಿಎಸ್ ತೊಂದರೆ ಮಾಡುತಿದ್ದು, ಅವರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ನಿಯಮಗಳನ್ನು ಬದಲಿಸಿದ್ದಾರೆ. ಇವೆಲ್ಲವನ್ನೂ ಗಮನಿಸಿದರೆ ದಲಿತ ಸಮುದಾಯಗಳ ಮಕ್ಕಳ ವಿರುದ್ಧವಿದ್ದಾರೆ ಎಂಬುದು ಸ್ಪಷ್ಟವಾಗುತ್ತದೆ, ಮಕ್ಕಳನ್ನು ಶಾಲೆಯಿಂದ ದೂರ ಉಳಿಸುವ ಉನ್ನಾರವಾಗುತ್ತಿದೆಯೇ ಎನ್ನುವುದು ಶಂಕೆ ವ್ಯಕ್ತವಾಗುತ್ತದೆ.
ರಾಜ್ಯ ಸರ್ಕಾರದ ಹಗರಣಗಳ ವಿರುದ್ಧ ಹಕ್ಕೊತ್ತಾಯಗಳನ್ನು ಮಾಡಿದೆ
ಎಸ್.ಸಿ./ಎಸ್.ಟಿ. ಸಮುದಾಯಗಳ ಅಭಿವೃದ್ಧಿಗೆ ಮೀಸಲಿಟ್ಟ SCSP/TSP ಹಣವನ್ನು ಯೋಜನೆಗಳಿಗೆ ಬಳಸುತ್ತಿರುವುದನ್ನು ಕೂಡಲೇ ವಾಪಸ್ಸು ನೀಡಬೇಕು.
ಸಮಾಜ ಕಲ್ಯಾಣ ಸಚಿವರನ್ನು ಸಚಿವ ಸ್ಥಾನದಿಂದ ವಜಾಗೊಳಸಿಬೇಕು.
ಮೂಡಾ ಹಗರಣವನ್ನು ಸಿ.ಬಿ.ಐ ತನಿಖೆಗೆ ವಹಿಸಬೇಕು.
ಎ.ಸಿ.ಎಸ್ ಮಣಿವಣ್ಣನ್ ನ್ನು ಕೂಡಲೇ ಸೇವೆಯಿಂದ ಅಮಾನತ್ತು ಮಾಡಬೇಕು.
ಎಸ್.ಸಿ./ಎಸ್.ಟಿ. ಸಮುದಾಯಗಳ ಎಸ್.ಎಸ್.ಎಲ್.ಸಿ. /ಪಿ.ಯು.ಸಿ ವಿದ್ಯಾರ್ಥಿಗಳ ಹಣದ ಬಗ್ಗೆ ಎದ್ದಿರುವ ಗೊಂದಲವನ್ನು ಸರಿಪಡಿಸಬೇಕು. ಹಿಂದಿನಂತೆ ಮುಂದುವರೆಸಬೇಕು.
ವಿದೇಶಕ್ಕೆ ಉನ್ನತ ವ್ಯಾಸಂಗಕ್ಕಾಗಿ ರೂಪಿಸಿದ ಪ್ರಬುದ್ಧ ಯೋಜನೆಯನ್ನು ಕೂಡಲೇ ಸಮರ್ಪಕವಾಗಿ ಜಾರಿಗೊಳಿಸಬೇಕು.
ವಸತಿ ಶಾಲೆಗಳ ನೇಮಕದಲ್ಲಿ ವಿಧಿಸಿರುವ ನಿಬಂಧನೆಗಳನ್ನು ರದ್ದುಪಡಿಸಿ, ಎಲ್ಲಾ ಮಕ್ಕಳಿಗೆ ಅವಕಾಶ ಕಲ್ಪಿಸಿ ಕೊಡಬೇಕು.
ಮುಡಾ ಹಗರಣದಲ್ಲಿ ಭಾಗಿಯಾಗಿರುವ ಭ್ರಷ್ಟರನ್ನು ಬಂಧಿಸಬೇಕು, ಇದರ ನೇರ ಹೊಣೆಗಾರಿಕೆಯನ್ನು ಮುಖ್ಯಮಂತ್ರಿಗಳು ವಹಿಸಿಕೊಳ್ಳಬೇಕು. ಈ ಪ್ರಕರಣವನ್ನು ಸಿ.ಬಿ.ಐ ತನಿಖೆಗೆ ನೀಡಬೇಕು.
ಮಹರ್ಷಿ ವಾಲ್ಮೀಕಿ ನಿಗಮದ ಅವ್ಯವಹಾರದ ಹೊಣೆಯನ್ನು ಮುಖ್ಯಮಂತ್ರಿಗಳು ವಹಿಸಿಕೊಳ್ಳಬೇಕು. ಭ್ರಷ್ಟರ ಆಸ್ತಿಗಳನ್ನು ಸರ್ಕಾರ ಕೂಡಲೇ ಮುಟ್ಟುಗೋಲು ಹಾಕಿಕೊಳ್ಳಬೇಕು.
ಬೌದ್ಧ ಸಮಾಜದ ಸಾಮಾಜಿಕ, ಆರ್ಥಿಕ, ಅಭಿವೃದ್ಧಿಗೆ ಕರ್ನಾಟಕ ಬೌದ್ಧ ಧರ್ಮ ಅಭಿವೃದ್ಧಿ ನಿಗಮವನ್ನು ಕೂಡಲೇ ಸ್ಥಾಪಿಸಬೇಕು.
ಬೌದ್ಧ ಧರ್ಮಕ್ಕೆ ಮತಾಂತರಗೊಂಡವರಿಗೆ (ನಮೂನೆ-1) ಸಂವಿಧಾನ ಕಾಯ್ದೆ ಪ್ರಕಾರ ಜಾತಿ ಪ್ರಮಾಣ ಪತ್ರದಲ್ಲಿ ಧರ್ಮದ ಉಲ್ಲೇಖ ಇರುವಂತೆ ಮಾರ್ಪಾಡು ಮಾಡಬೇಕು.
ಪ್ರತಿ ಹಳ್ಳಿಯ ಎಸ್.ಸಿ/ಎಸ್.ಟಿ. ಸಮುದಾಯಗಳಿಗೆ ಸರ್ವೋಚ್ಚ ನ್ಯಾಯಾಲಯದಲ ಆದೇಶದನ್ವಯ ಸ್ಮಶಾನಕ್ಕೆ ಭೂಮಿಯನ್ನು ನಿಗಧಿಪಡಿಸಬೇಕು (ಕಾಯ್ದಿರಸಬೇಕು)
ರಾಜ್ಯದಲ್ಲಿ ದಲಿತರ ಮೇಲಿನಾ ದೌರ್ಜನ್ಯಗಳನ್ನು ಖಂಡಿಸುತ್ತೇವೆ. (ಕನಕಪುರ, ರಾಮನಗರ, ಪಿ.ಎಸ್. ಪರಶುರಾಮ್ ಇತ್ಯಾದಿ) ಪಿ.ಎಸ್.ಐ ಪರಶುರಾಮ್ ಪ್ರಕರಣವನ್ನು ಸಿ.ಬಿ.ಐ ತನಿಖೆಗೆ ವಹಿಸಬೇಕು.
ಎಸ್./ಎಸ್.ಟಿ.ಗಳು ನೀಡುವ ದೂರಿಗೆ ಪ್ರತಿಯಾಗಿ ಪ್ರತಿದೂರು ಪಡೆಯುವುದನ್ನು ನಿಲ್ಲಸಬೇಕು.
ಪತ್ರಿಕಾಗೋಷ್ಠಿಯಲ್ಲಿ ದಲಿತಪರ ಸಮಾನ ಮನಸ್ಕ ಸಂಘಟನೆಗಳ ಮುಖಂಡರು ಭಾಗವಹಿಸಿದ್ದರು. ಕಾಲ್ನಡಿಗೆ ಜಾಥದಲ್ಲಿ ಎಲ್ಲಾ ದಲಿತ ಸಮುದಾಯಗಳು ಭಾಗವಹಿಸಲಿದ್ದಾರೆ.