ಮೈಸೂರು: ನಾಳೆ ಮೈಸೂರು ದಸರಾ ಉದ್ಘಾಟನೆ ಹಿನ್ನೆಲೆ ಚಾಮುಂಡಿ ಬೆಟ್ಟದಲ್ಲಿ ಜಿಲ್ಲಾಡಳಿತ ಭರ್ಜರಿ ತಯಾರಿ ನಡೆಸುತ್ತಿವೆ, ಉತ್ಸವ ಮೂರ್ತಿ,ದೇವಾಲಯದಲ್ಲಿ ಸ್ವಚ್ಚತಾ ಕಾರ್ಯ, ಮೂರ್ತಿಗೆ ದೇವಾಲಯದ ಅರ್ಚಕರಿಂದ ಮಜ್ಜನ ಮಾಡಲಾಯಿತು.
ಮೈಸೂರಿನಲ್ಲಿ ಐತಿಹಾಸಿಕ ಮೈಸೂರು ದಸರಾ ನಾಳೆ ಅಧಿಕೃತವಾಗಿ ಚಾಲನೆ ನೀಡಲಿದೆ. ಅದಕ್ಕೆ ಕ್ಷಣ ಗಣನೆ ಇದ್ದು, ಈ ಭಾರಿ ದಸರಾವನ್ನು ಹಿರಿಯ ಸಾಹಿತಿ ಹಾಗು ಸಂಶೋಧಕ ಪ್ರೊ.ಹಂಪ ನಾಗರಾಜಯ್ಯ ಅವರು ಚಾಲನೆ ನೀಡಲಿದ್ದಾರೆ. ಹೀಗಾಗಿ ಮೈಸೂರು ಜಿಲ್ಲಾಡಳಿತ ಜಿಲ್ಲಾಧಿಕಾರಿ ಲಕ್ಷ್ಮಿಕಾಂತ್ ಮುಂದೆ ನಿಂತು ಕಾರ್ಯಕ್ರಮ ಉದ್ಘಾಟನೆಗೆ ಸಕಲ ಸಿದ್ಧತೆ ಮಾಡಿಕೊಂಡಿದೆ. ಬೃಹತ್ ಶಾಮಿಯಾನ,ದೊಡ್ಡದಾದ ವೇದಿಕೆ ನಿರ್ಮಾಣ ಬರದಿಂದ ಸಾಗಿದೆ, ಕಾರ್ಯಕ್ರಮ ನಡೆಯುವ ಜಾಗದಲ್ಲಿ ಜಿಲ್ಲಾಧಿಕಾರಿ ಲಕ್ಷ್ಮಿಕಾಂತ್ ಮೊಕ್ಕಮ್ ಹೂಡಿ ಕೆಲಸ ಕಾರ್ಯಗಳ ಬಗ್ಗೆ ಪರಿಶೀಲಿಸಿದರು.
ನಾಳೆ 9.30ಕ್ಕೇ ದಸರಾ ಕಾರ್ಯಕ್ರಮ ಉದ್ಘಾಟನೆಯಾಗಲಿದೆ, ಸಿಎಂ ಸಿದ್ದರಾಮಯ್ಯ, ಜಿಲ್ಲಾ ಉಸ್ತುವಾರಿ, ಜಿಲ್ಲಾಧಿಕಾರಿ ಅವರು ಭಾಗವಹಿಸಲಿದ್ದಾರೆ.
ಇನ್ನು ಚಾಮುಂಡಿ ಬೆಟ್ಟದಲ್ಲಿ ಚಾಮುಂಡಿ ದರ್ಶನ ಎಂದಿನಂತೆ ಭಕ್ತರಿಗೆ ದೊರೆಯಲಿದೆ, ಅದರಲ್ಲಿ ಯಾವುದೇ ಬದಲಾವಣೆ ಆಗಿಲ್ಲ, ಆದರೆ ಉತ್ಸವ ಮೂರ್ತಿಯನ್ನು ಸ್ವಚ್ಚವಾಗಿ ಮಾಡಲಾಯಿತು