ಬೆಂಗಳೂರು: ಆಯುಧಪೂಜೆಯ ನಿಮಿತ್ತ ಕರ್ನಾಟಕ ರಾಜ್ಯ ರಸ್ತೆ ಸಾರಿಗೆಯಿಂದ ಬಸ್ ನ ಚಾಲಕರು ಹಾಗೂ ನಿರ್ವಾಹಕರಿಗೆ ಬಸ್ ಪೂಜೆ ಪುನಸ್ಕಾರಕ್ಕೆ ನೀಡುವ ರೂ.100 ಬದಲು ರೂ.250 ಕ್ಕೆ ಹೆಚ್ಚಳ ಮಾಡಿ ಆದೇಶ ಹೊರಡಿಸಿದೆ.
ಒಂದು ಘಟಕದಲ್ಲಿ ಸರಿ ಸುಮಾರು 100 ರಿಂದ 500 ಬಸ್ಸುಗಳಿರುತ್ತವೆ. ಒಂದು ಬಸ್ಸಿಗೆ ರೂ. 100 ಎಂದು ಒಂದು ಘಟಕಕ್ಕೆ / ಕಾರ್ಯಾಗಾರಕ್ಕೆ ನೀಡಲಾಗುತ್ತದೆ. ಆಯುಧಪೂಜೆಗೆ 2008 ರವರೆಗೂ ರೂ.10 ಪ್ರತಿ ಬಸ್ಸಿಗೆ , 2009 ರಲ್ಲಿ ಪ್ರತಿ ಬಸ್ಸಿಗೆ ರೂ 30 ಕ್ಕೆ ಏರಿಕೆ ಮಾಡಲಾಯಿತು.2016 ರಲ್ಲಿ ಪ್ರತಿ ಬಸ್ಸಿಗೆ ರೂ.50 ಕ್ಕೆ ಏರಿಕೆ , 2017 ರಲ್ಲಿ ಪ್ರತಿ ಬಸ್ಸಿಗೆ ರೂ.100 ಕ್ಕೆ ಏರಿಕೆ ಮಾಡಲಾಗಿತ್ತು.ರೂ.100 ಪ್ರತಿ ಬಸ್ಸಿಗೆ ನೀಡುವ ಮೊತ್ತವು 2023 ರವರೆಗೂ ರೂ.100 ಆಗಿತ್ತು.
2024 ಅಂದರೆ ಪ್ರಸಕ್ತ ವರ್ಷದಲ್ಲಿ ಆಯುಧಪೂಜೆಗೆ ಪ್ರತಿ ಬಸ್ಸಿಗೆ ಈಗ ನೀಡಲಾಗುತ್ತಿರುವ ರೂ.100 ಅನ್ನು ರೂ.250 ಕ್ಕೆ ಹೆಚ್ಚಿಸಲು ಮಾನ್ಯ ಸಾರಿಗೆ ಹಾಗೂ ಮುಜರಾಯಿ ಸಚಿವರು ಆದೇಶಿಸಿದ್ದಾರೆ.ಅದರಂತೆ ಪರಿಷ್ಕೃತ ಆದೇಶ ಹೊರಡಿಸಲಾಗಿದೆ.
ಇದರಿಂದ ಬಸ್ ನ ಚಾಲಕರು, ನಿರ್ವಾಹಕರಿಗೆ ಕೊಂಚ ನಿರಾಳವಾಗಿದ್ದಾರೆ ಏನ್ನಿಸದಿರದು, ಹಿಂದೆ ನೀಡುತ್ತಿದ್ದ 100 ರೂಪಾಯಿ ಯಾವ ಕೆಲಸಕ್ಕೂ ಬರುತ್ತಿರಲಿಲ್ಲ, ಸ್ವತಃ ಬಸ್ ನ ಚಾಲಕರು, ನಿರ್ವಾಹಕರು ಕೈಯಿಂದ ಹಣ ಹಾಕಿಕೊಂಡು ಪೂಜೆ ಪುನಸ್ಕಾರ ಮಾಡಿಕೊಳ್ಳುತ್ತಿದ್ದರು. ಇದೀಗ ಸಾರಿಗೆ ಇಲಾಖೆ ಹಳೆ ಮಾನದಂಡ ಬಿಟ್ಟು ಹೊಸ ಆದೇಶ ಹೊರಡಿಸಿ ಪ್ರಸಕ್ತ ಸಾಲಿನಿಂದ ಜಾರಿಗೆ ಬರುವಂತೆ ಆದೇಶಿಸಲಾಗಿದೆ.