ಮುಂಬೈ: ಮಹಾರಾಷ್ಟ್ರ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಶನಿವಾರ ಆಯೋಜಿಸಿದ್ದ ಪಕ್ಷದ ಹಿರಿಯ ವೀಕ್ಷಕರ ಸಭೆಯಲ್ಲಿ ರಾಜ್ಯದಿಂದ ಬೃಹತ್ ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ ಮತ್ತು ಗೃಹ ಸಚಿವ ಡಾ.ಜಿ.ಪರಮೇಶ್ವರ ಅವರು ಭಾಗವಹಿಸಿ ಚುನಾವಣಾ ತಯಾರಿ ಕುರಿತು ಚರ್ಚಿಸಿದರು.
ಮುಂಬೈನ ತಿಲಕ್ ಭವನದಲ್ಲಿ ನಡೆದ ಸಭೆಯಲ್ಲಿ ಚುನಾವಣೆಯಲ್ಲಿ ಕೈಗೊಳ್ಳಬೇಕಿರುವ ರಣತಂತ್ರಗಳ ಕುರಿತು ಚರ್ಚಿಸಿದರು.ಚುನಾವಣಾ ಉಸ್ತುವಾರಿ ರಮೇಶ್ ಚೆನ್ನಿತ್ತಲ, ರಾಜಸ್ಥಾನದ ಮಾಜಿ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್, ಛತ್ತೀಸ್ಗಢದ ಮಾಜಿ ಮುಖ್ಯಮಂತ್ರಿ ಭೂಪೇಶ್ ಬಾಘೇಲ್, ಪಂಜಾಬ್ ಮಾಜಿ ಮುಖ್ಯಮಂತ್ರಿ ಚರಂಜಿತ್ ಸಿಂಗ್ ಚನ್ನಿ, ಮಾಜಿ ಮುಖ್ಯಮಂತ್ರಿ ಪೃಥ್ವಿರಾಜ್ ಚವ್ಹಾಣ್, ತೆಲಂಗಾಣ ಸಚಿವರಾದ ಉತ್ತಮ್ ಕುಮಾರ್ ರೆಡ್ಡಿ, ದಾರಸಾರಿ ಅನುಸಯಾ ಸೀತಕ್ಕ, ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಸದಸ್ಯ ಟಿ.ಎಚ್.ಸಿಂಗ್ ದೇವ್, ಮುಂಬೈ ಕಾಂಗ್ರೆಸ್ ಅಧ್ಯಕ್ಷ ನಾಸಿರ್ ಹುಸೇನ್, ನಶ್ದಾಯಿ ಗಾಯಕವಾಡ ಉಪಸ್ಥಿತರಿದ್ದರು.
ಸಚಿವ ಎಂ.ಬಿ.ಪಾಟೀಲ ಅವರನ್ನು ಪಶ್ಚಿಮ ಮಹಾರಾಷ್ಟ್ರದ ಚುನಾವಣೆಗೆ ಹಿರಿಯ ವೀಕ್ಷಕರನ್ನಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ನಿಯೋಜಿಸಿದ್ದಾರೆ.