ಕೇರಳ,ವಯನಾಡ್: ಪ್ರಿಯಾಂಕ ಗಾಂಧಿ ಅವರು ಅತ್ಯಂತ ಬಹುಮತದಿಂದ ಈ ಕ್ಷೇತ್ರದಲ್ಲಿ ಜಯಗಳಿಸುವುದು ಶತಸಿದ್ಧ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಭರವಸೆ ವ್ಯಕ್ತಪಡಿಸಿದರು.
ಉಪಚುನಾವಣೆ ಹಿನ್ನೆಲೆ ಕೇರಳದ ವಯನಾಡಿನಲ್ಲಿ ಪ್ರಿಯಾಂಕ ಗಾಂಧಿಯವರು ಇಂದು ನಾಮಪತ್ರವನ್ನು ಸಲ್ಲಿಸಿದರು, ಈ ವೇಳೆ ಕಾಂಗ್ರೆಸ್ನ ಕೆ ಸಿ ಸಿ ಅಧ್ಯಕ್ಷರು ಕರ್ನಾಟಕದ ಹಿರಿಯ ನಾಯಕರು ಇದೆ ವೇಳೆ ಉಪಸ್ಥಿತರಿದ್ದರು.
ಪ್ರಿಯಾಂಕ ಗಾಂಧಿಯವರು ವಯನಾಡಿನಲ್ಲಿ ನಾಮಪತ ಸಲ್ಲಿಸಿದ ನಂತರ ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಾಧ್ಯಮ ಜೊತೆ ಮಾತನಾಡಿ. ಬಿಜೆಪಿ ನಮ್ಮ ವಿರೋಧಿ. ಬಿಜೆಪಿ ಸೋಲಿಸಲು ಎಲ್ಲಾ ಜಾತ್ಯತೀತ ಶಕ್ತಿ ಮತ್ತು ಮೌಲ್ಯಗಳೊಂದಿಗೆ ನಾವು ಜೊತೆ ಸೇರುತ್ತೇವೆ. ಬಿಜೆಪಿ ಸೋಲಿಸಿ ದೇಶ ಉಳಿಸುವುದು ನಮ್ಮ ಮೊದಲ ಗುರಿ ಎಂದರು.
ರಾಹುಲ್ ಗಾಂಧಿ ಅವರ ರಾಜೀನಾಮೆಯಿಂದ ತೆರವಾಗಿರುವ ಕ್ಷೇತ್ರದಲ್ಲಿ ಪ್ರಿಯಾಂಕ ಗಾಂಧಿ ಅವರ ಸ್ಫರ್ಧೆಯ ಪರಿಣಾಮ ಏನಾಗಿರಬಹುದು ಎನ್ನುವ ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಿದ ಸಿಎಂ, ಪ್ರಿಯಾಂಕ ಗಾಂಧಿ ಅವರು ಅತ್ಯಂತ ಬಹುಮತದಿಂದ ಈ ಕ್ಷೇತ್ರದಲ್ಲಿ ಜಯಗಳಿಸುವುದು ಶತಸಿದ್ಧ ಎಂದರು.
ಈ ಬಾರಿ ವಯನಾಡಿನಲ್ಲಿ ಕಾಂಗ್ರೆಸ್ ಗೆಲ್ಲುವ ಮೂಲಕ ಪ್ರಿಯಾಂಕಾ ಗಾಂಧಿ ಅವರು ವಿಪಕ್ಷಗಳಿಗೆ ತಕ್ಕ ಉತ್ತರವನ್ನು ನೀಡಲಿದ್ದಾರೆ ಎಂದರು.