ಬೆಂಗಳೂರು: ಬಿಬಿಎಂಪಿ ವ್ಯಾಪ್ತಿಯಲ್ಲಿ ಅನಧಿಕೃತ ಕಟ್ಟಡಗಳನ್ನು ತೆರವುಗೊಳಿಸಲು ಮಾನ್ಯ ಉಪ ಮುಖ್ಯಮಂತ್ರಿಗಳಾದ ಶ್ರೀ ಡಿ.ಕೆ ಶಿವಕುಮಾರ್ ರವರು ಆದೇಶಿಸಿರುತ್ತಾರೆ. ಅದರಂತೆ ಅಧಿಕಾರಿಗಳು ಸರ್ವೇ ನಡೆಸಿ ತೆರವು ಕಾರ್ಯಾಚರಣೆ ನಡೆಸಲಿದ್ದಾರೆ.
ಅನಧಿಕೃತ ಕಟ್ಟಡ ತೆರವು ಕಾರ್ಯಾಚರಣೆ:
ಮಹದೇವಪುರ ವಲಯ ಹೊರಮಾವು ವ್ಯಾಪ್ತಿಯ ನಂಜಪ್ಪ ಗಾರ್ಡನ್ 4ನೇ ಅಡ್ಡ ರಸ್ತೆಯಲ್ಲಿ ಬರುವ ಸರ್ವೇ ಸಂಖ್ಯೆ 54/1 ರಲ್ಲಿ ಪುಟ್ಟಪ್ಪ ಎಂಬ ಮಾಲೀಕರು 10 X 25 ರಷ್ಟು ಅಡಿಯಲ್ಲಿ ಕಟ್ಟಡ ನಿರ್ಮಾಣ ಹಂತದಲ್ಲಿರುವ ನೆಲಮಡಿ + 5 ಅಂತಸ್ತಿನ ಕಟ್ಟಡವು ಬಿರುಕು ಬಿಟ್ಟಿದ್ದು, ತೆರವು ಕಾರ್ಯಾಚರಣೆಯನ್ನು ನಡೆಸಲಾಗುತ್ತಿದೆ.
ಮಾನ್ಯ ಉಪ ಮುಖ್ಯಮಂತ್ರಿಗಳಾದ ಡಿ.ಕೆ ಶಿವಕುಮಾರ್ ರವರ ಆದೇಶದ ಮೇರೆಗೆ ಮಹದೇವಪುರ ವಲಯ ವ್ಯಾಪ್ತಿಯಲ್ಲಿ ಅನಧಿಕೃತ ಕಟ್ಟಡವನ್ನು ಗುರುತಿಸಿ, ವಲಯ ಆಯುಕ್ತರಾದ ರಮೇಶ್ ಹಾಗೂ ವಲಯ ಜಂಟಿ ಆಯುಕ್ತರಾದ ಡಾ. ಕೆ. ದಾಕ್ಷಾಯಿಣಿ ರವರ ನೇತೃತ್ವದಲ್ಲಿ ತೆರವು ಕಾರ್ಯಾಚರಣೆಯನ್ನು ನಡೆಸಲಾಗುತ್ತಿದೆ.
ಶಿಥಿಲ ಕಟ್ಟಡ ತೆರವು ಕಾರ್ಯಾಚರಣೆ:
ಹೆಚ್.ಎ.ಎಲ್ ವಾರ್ಡ್ ಇಸ್ಲಾಂಪುರದಲ್ಲಿ ಶ್ರೀರಾಂ ಎಂಬ ಮಾಲೀಕರ ನೆಲಮಹಡಿ + ಮೊದಲಹಡಿಯು ಹಳೆಯ ಕಟ್ಟಡವಾಗಿದ್ದು, ಶಿಥಿಲಾವಸ್ಥೆಯಲ್ಲಿರುವ ಕಾರಣ ಮನೆಯಲ್ಲಿದ್ದ ಸಾಮಗ್ರಿಗಳನ್ನೆಲ್ಲಾ ತೆಗೆದು ಜೆಸಿಬಿ ಮೂಲಕ ತೆರವು ಕಾರ್ಯಾಚರಣೆ ನಡೆಯುತ್ತಿದೆ.