ಚನ್ನಪಟ್ಟಣ/ರಾಮನಗರ: ಚನ್ನಪಟ್ಟಣ ವಿಧಾನಸಭೆ ಕ್ಷೇತ್ರದ ಎನ್ ಡಿಎ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ಅವರು ಕ್ಷೇತ್ರದಲ್ಲಿ ಮಂಗಳವಾರ ಬಿರುಸಿನ ಪ್ರಚಾರ ನಡೆಸಿದರು.
ಬೆಳಗ್ಗೆಯಿಂದಲೇ ಪ್ರಚಾರದಲ್ಲಿ ತೊಡಗಿದ ಅವರು; ಚನ್ನಪಟ್ಟಣದ ಜೆಡಿಎಸ್ ಮತ್ತು ಬಿಜೆಪಿ ಮುಖಂಡರ ಮನೆಗಳಿಗೆ ಭೇಟಿ ನೀಡಿದ ಮತಯಾಚನೆ ಮಾಡಿದರು.ಚಕ್ಕಲೂರು ದೊಡ್ಡಿ, ಚಕ್ಕಲೂರು, ಎ ವಿ ಹಳ್ಳಿ, ಅಂಕುಶಹಳ್ಳಿ, ಕೃಷ್ಣಾಪುರ ಮೆಂಗಹಳ್ಳಿ, ಸಾದಹಳ್ಳಿ, ಹಾರೋಹಳ್ಳಿ, ಸುಳ್ಳೇರಿ ಗ್ರಾಮ ದಲ್ಲಿ ಮತಯಾಚನೆ ನಡೆಸಿದರು.
ಈ ಸಂದರ್ಭದಲ್ಲಿ ಮತದಾರರನ್ನು ಉದ್ದೇಶಿಸಿ ಮಾತನಾಡಿದ ನಿಖಿಲ್ ಅವರು; ಚನ್ನಪಟ್ಟಣದಲ್ಲಿ ನನ್ನ ಸ್ಪರ್ಧೆ ಅನಿರೀಕ್ಷಿತ. ಕ್ಷೇತ್ರದ ಕಾರ್ಯಕರ್ತರ ಒತ್ತಡಕ್ಕೆ ಮಣಿದು ಸ್ಪರ್ಧಿಸಿದ್ದೇನೆ. ದೇವೇಗೌಡರು ಇಗ್ಗಲೂರು ಜಲಾಶಯ ನಿರ್ಮಾಣ ಮಾಡಿದ್ದಾರೆ. ತಾಲೂಕಿನ ನೀರಾವರಿ ಯೋಜನೆಗೆ ಅವರ ಕೊಡುಗೆ ಶಾಶ್ವತವಾಗಿದೆ. ನೀರಾ ಚಳುವಳಿ ವೇಳೆ ದೇವೇಗೌಡರು ಚನ್ನಪಟ್ಟಣ ಬೆಂಗಳೂರಿನವರೆಗೂ ಪಾದಯಾತ್ರೆ ಮಾಡಿದ್ದರು ಇಲ್ಲಿನ ಜನರ ಹೃದಯದಲ್ಲಿ ಶಾಶ್ವತವಾಗಿದ್ದಾರೆ ಎಂದು ತಿಳಿಸಿದರು.
ಯುವಕರ ಧ್ವನಿಯಾಗಿ ಕೆಲಸ ಮಾಡುತ್ತೇನೆ
ಮಂಡ್ಯ ಹಾಗೂ ರಾಮನಗರದಲ್ಲಿ ಈಗಾಗಲೇ ಎರಡು ಬಾರಿ ಚುನಾವಣೆಯಲ್ಲಿ ಸ್ಪರ್ಧಿಸಿ ಸೋತಿದ್ದೇನೆ. ಒಬ್ಬ ಯುವಕನಾಗಿ, ಯುವಕರ ಧ್ವನಿಯಾಗಿ ಕೆಲಸ ಮಾಡುತ್ತೇನೆ. ಅದಕ್ಕೆ ಕ್ಷೇತ್ರದ ಜನ ಅವಕಾಶ ಮಾಡಿಕೊಡಿ ಎಂದು ನಿಖಿಲ್ ಕುಮಾರಸ್ವಾಮಿ ಮನವಿ ಮಾಡಿದರು.
ಮಳೆಯ ನಡುವೆಯೂ ಪ್ರಚಾರ
ಮಳೆ ನಡುವೆಯೂ ನಿಖಿಲ್ ಕುಮಾರಸ್ವಾಮಿ ಅವರು ಚನ್ನಪಟ್ಟಣದ ಕೃಷ್ಣಾಪುರ ಗ್ರಾಮದಲ್ಲಿ ಮಳೆ ನಡುವೆಯೂ ಮನೆ ಮನೆಗೆ ತೆರಳಿ ಮತಯಾಚಿಸಿದರು.ಗ್ರಾಮದ ರಸ್ತೆಗಳಲ್ಲಿ ಸಂಚರಿಸಿ ಮಳೆಯ ನಡೆಯುವ ಭಾಷಣ ಮಾಡಿದರು.ಇನ್ನು ಕೃಷ್ಣಾಪುರ ಗ್ರಾಮದಲ್ಲಿ ನಿಖಿಲ್ ಗೆ ಅದ್ಧೂರಿ ಸ್ವಾಗತಕೋರಿದರು.ಜೆಸಿಬಿ ಮೂಲಕ ಪುಷ್ಪ ವೃಷ್ಟಿ ಹರಿಸಿ ಬೃಹತ್ ಸೇಬಿನ ಹಾರ ಹಾಕಿ ಸ್ವಾಗತಿಸಿದರು.ಗ್ರಾಮದಲ್ಲಿ ಮಹಿಳೆಯರ ಬಳಿ ತೆರಳಿ ಕೈ ಮುಗಿದು ಮತಯಾಚಿಸಿದರು.
ಇದೇ ಸಂದರ್ಭದಲ್ಲಿ ಮಹಾಲಕ್ಷ್ಮಿ ಲೇ ಔಟ್ ವಿಧಾನಸಭಾ ಕ್ಷೇತ್ರದ ಶಾಸಕರಾದ ಗೋಪಾಲಯ್ಯ ಅವರು, ಗುರುವಿಟ್ಕಲ್ ವಿಧಾನಸಭಾ ಕ್ಷೇತ್ರದ ಶಾಸಕರಾದ ಶರಣುಗೌಡ ಕಂದಕೂರು,ಚನ್ನಪಟ್ಟಣ ತಾಲ್ಲೂಕು ಅಧ್ಯಕ್ಷರಾದ ಜಯಮುತ್ತು ಅವರು ಸೇರಿದಂತೆ ಜೆಡಿಎಸ್ ಬಿಜೆಪಿ ಅನೇಕ ಪ್ರಮುಖ ಮುಖಂಡರು ಜತೆಯಲ್ಲಿದ್ದರು.