ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನವದೆಹಲಿಯಲ್ಲಿ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರನ್ನು ಭೇಟಿಯಾಗಿ ನಬಾರ್ಡ್ ನಿಂದ ರಾಜ್ಯದ ರೈತರಿಗೆ ಆಗಿರುವ ಸಾಲದ ಕೊರತೆಯನ್ನು ಸರಿಪಡಿಸಿ, ಆಗಿರುವ ಅನ್ಯಾಯವನ್ನು ಸರಿದೂಗಿಸುವಂತೆ ಮನವಿ ಮಾಡಿದರು.
ನಬಾರ್ಡ್ ಸಾಲದ ಮೊತ್ತ ಹೆಚ್ಚಿಸುವಂತೆ ಕೇಂದ್ರ ಸಚಿವರಿಗೆ ಮನವಿ.
ರಾಜ್ಯಕ್ಕೆ ನಬಾರ್ಡ್ ನಿಂದ ರಾಜ್ಯಕ್ಕೆ ನೀಡಲಾಗುವ ಸಾಲದ ಮೊತ್ತವನ್ನು ಕಳೆದ ವರ್ಷದ 5600 ಕೋಟಿ ರೂ.ಗಳಿಂದ , ಈ ವರ್ಷ 2340 ಕೋಟಿ ರೂ. ಗಳಿಗೆ ಇಳಿಸಲಾಗಿದೆ. ಆದ್ದರಿಂದ ಕೇಂದ್ರ ವಿತ್ತ ಸಚಿವರನ್ನು ಭೇಟಿಯಾಗಿ ಈ ಬಗ್ಗೆ ಮನವಿ ಮಾಡಿಕೊಳ್ಳಲಾಗಿದೆ. ಈ ಮಧ್ಯೆ ಸಮಯಾವಕಾಶವಿದ್ದಲ್ಲಿ ಪಕ್ಷದ ವರಿಷ್ಠರನ್ನು ಭೇಟಿ ಮಾಡಲಾಗುವುದು ಎಂದರು.
ಸಿಎಂ ಸಿದ್ದರಾಮಯ್ಯ ಅವರ ಜೊತೆ ಸಚಿವರಾದ ಬೈರತಿ ಸುರೇಶ್, ಚಲುವರಾಯಸ್ವಾಮಿ, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಗೋವಿಂದರಾಜು ಅವರು ಉಪಸ್ಥಿತರಿದ್ದರು.