ಶಿಗ್ಗಾಂವಿ : ಶಾಸಕ ಪಠಾಣ್ ಅವರು ಕಾವೇರಿ ನಿವಾಸದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿ.ಕೆ.ಶಿವಕುಮಾರ್ ಅವರನ್ನು ಭೇಟಿಯಾಗಿ ಧನ್ಯವಾದ ಅರ್ಪಿಸಿದರು.
ಮುಖ್ಯಮಂತ್ರಿಗಳು ಶುಭ ಹಾರೈಸಿ ಚುನಾವಣೆ ಸಂದರ್ಭದಲ್ಲಿ ಕೊಟ್ಟ ಮಾತಿನಂತೆ ಕ್ಷೇತ್ರದ ಅಭಿವೃದ್ಧಿ ಕಡೆಗೆ ಹೆಚ್ಚಿನ ಗಮನ ಹರಿಸುವಂತೆ ಸೂಚಿಸಿದರು. ಚುನಾವಣೆಯಲ್ಲಿ ಗೆದ್ದ ನಂತರ ಮೊದಲ ಬಾರಿಗೆ ಬೆಂಗಳೂರಿಗೆ ಆಗಮಿಸಿ ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ಶುಭಹಾರೈಸಿದರು. ಕ್ಷೇತ್ರದಲ್ಲಿ ಕೆಲಸ ಕಾರ್ಯಗಳ ಬಗ್ಗೆ ಗಮನಹರಿಸಿ, ಅಭಿವೃದ್ಧಿಯ ಕಡೆ ಹೆಚ್ಚು ಒಟ್ಟುಕೊಡಬೇಕು ಎಂದು ಸೂಚನೆ ನೀಡರು.
ಸಚಿವರಾದ ಜಮೀರ್ ಅಹಮದ್ ಖಾನ್, ವಿಧಾನ ಪರಿಷತ್ ಮುಖ್ಯ ಸಚೇತಕರಾದ ಸಲೀಂ ಅಹಮದ್, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ನಸೀರ್ ಅಹಮದ್, ಶಾಸಕರಾದ ಶಿವಣ್ಣ ಮತ್ತು ನರೇಂದ್ರಸ್ವಾಮಿ, ಶ್ರೀನಿವಾಸ್ ಮಾನೆ, ಹೆಸ್ಕಾಂ ಅಧ್ಯಕ್ಷರಾದ ಖಾದ್ರಿ ಉಪಸ್ಥಿತರಿದ್ದರು.