ಬೆಂಗಳೂರು: ಬಿಬಿಎಂಪಿ ವ್ಯಾಪ್ತಿಯಲ್ಲಿ ಅನಧಿಕೃತ ಜಾಹೀರಾತುಗಳನ್ನು ಅಳವಡಿಸಿರುವವರ ಮೇಲೆ ಎಫ್.ಐ.ಆರ್ ದಾಖಲಿಸಲು *ಮುಖ್ಯ ಆಯುಕ್ತರಾದ ಶ್ರೀ ತುಷಾರ್ ಗಿರಿ ನಾಥ್* ರವರು ಅಧಿಕಾರಿಗಳಿಗೆ ಸೂಚನೆ ನೀಡಿದರು.
ಬಿಬಿಎಂಪಿ ವ್ಯಾಪ್ತಿಯಲ್ಲಿ ವಿವಿಧ ವಿಷಯಗಳಿಗೆ ಸಂಬಂಧಿಸಿದಂತೆ ಇಂದು ಪಾಲಿಕೆ ಕೇಂದ್ರ ಕಛೇರಿಯಲ್ಲಿ ನಡೆದ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅವರು, ಪಾಲಿಕೆ ವ್ಯಾಪ್ತಿಯಲ್ಲಿ ಎಲ್ಲಿಯೂ ಅನಧಿಕೃತ ಜಾಹೀರಾತುಗಳನ್ನು ಅಳವಡಿಸದಂತೆ ಸೂಕ್ತ ಕ್ರಮಗಳನ್ನು ಕೈಗೊಳ್ಳಬೇಕೆಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.
ಪಾಲಿಕೆಯ ಎಲ್ಲಾ 8 ವಲಯಗಳಲ್ಲಿ ಅನಧಿಕೃತ ಜಾಹೀರಾತುಗಳನ್ನು ಅಳವಡಿಸಿರುವುದನ್ನು ತೆರವುಗೊಳಿಸಿ, ಅಳವಡಿಸಿರುವವರ ಮೇಲೆ ಎಫ್.ಐ.ಆರ್ ದಾಖಲಿಸಬೇಕು. ಮತ್ತೆ ಯಾವುದೇ ರೀತಿಯ ಅನಧಿಕೃತ ಜಾಹೀರಾತುಗಳು ಅಳವಡಿಸದಂತೆ ಅಗತ್ಯ ಕ್ರಮಗಳನ್ನು ಕೈಗೊಳ್ಳಲು ಸೂಚಿಸಲಾಯಿತು.
*ಆಸ್ತಿಗಳನ್ನು ಟ್ಯಾಕ್ಸ್ ನೆಟ್ ಗೆ ತರಲು ಸೂಚನೆ:*
ಬಿಬಿಎಂಪಿ ವ್ಯಾಪ್ತಿಯಲ್ಲಿ ಆಸ್ತಿ ತೆರಿಗೆಯಿಂದ ಹೊರಗುಳಿದ ಆಸ್ತಿಗಳನ್ನು ಟ್ಯಾಕ್ಸ್ ನೆಟ್ ಗೆ ತರಬೇಕು. ಈ ಸಂಬಂಧ ಆಯಾ ವಲಯ ವ್ಯಾಪ್ತಿಯಲ್ಲಿ ಎಷ್ಟು ಆಸ್ತಿಗಳು ಆಸ್ತಿ ತೆರಿಗೆ ವ್ಯಾಪ್ತಿಯಿಂದ ಹೊರಗುಳಿದಿವೆ ಎಂಬುದನ್ನು ಗುರುತಿಸಿ ಎಲ್ಲಾ ಆಸ್ತಿಗಳನ್ನು ಆಸ್ತಿ ತೆರಿಗೆ ವ್ಯಾಪ್ತಿಗೆ ತರಲು ಅಧಿಕಾರಿಗಳಿಗೆ ಸೂಚನೆ ನೀಡಿದರು.
ಈ ವೇಳೆ ವಿಶೇಷ ಆಯುಕ್ತರಾದ ಮುನೀಶ್ ಮೌದ್ಗಿಲ್, ಡಾ. ಕೆ. ಹರೀಶ್ ಕುಮಾರ್, ಸುರಳ್ಕರ್ ವಿಕಾಸ್ ಕಿಶೋರ್, ಅವಿನಾಶ್ ಮೆನನ್ ರಾಜೇಂದ್ರನ್, ಪ್ರೀತಿ ಗೆಹ್ಲೋಟ್, ವಲಯ ಆಯುಕ್ತರಾದ ಅರ್ಚನಾ, ವಿನೋತ್ ಪ್ರಿಯಾ, ರಮೇಶ್, ಗಿರೀಶ್, ಕರೀಗೌಡ, ರಮ್ಯಾ, ಪ್ರಧಾನ ಅಭಿಯಂತರರು, ಮುಖ್ಯ ಅಭಿಯಂತರರು ಸೇರಿದಂತೆ ಇನ್ನಿತರೆ ಸಂಬಂಧಪಟ್ಟ ಅಧಿಕಾರಿಗಳು ಉಪಸ್ಥಿತರಿದ್ದರು.