ಬೆಂಗಳೂರು: ಗಾಂಧಿನಗರ ವಿಧಾನಸಭಾ ಕ್ಷೇತ್ರ: ಶಾಸಕರ ಕಛೇರಿಯಲ್ಲಿ ಗ್ಯಾರೆಂಟಿ ಯೋಜನೆಗಳ ಅನುಷ್ಠಾನ ಸಮಿತಿ ಸಭೆಯನ್ನು ಸ್ಥಳೀಯ ಶಾಸಕರು, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಚಿವರಾದ ದಿನೇಶ್ ಗುಂಡೂರಾವ್ ರವರ ನೇತೃತ್ವದಲ್ಲಿ ಸಭೆ ಜರುಗಿತು.
ಗ್ಯಾರೆಂಟಿ ಯೋಜನೆ ಅನುಷ್ಠಾನ ಸಮಿತಿಯ ಅಧ್ಯಕ್ಷರಾದ ಉಮೇಶ್ ಬಾಬುರವರು, ಆಹಾರ ಇಲಾಖೆ ಉಪನಿರ್ದೇಶಕಿ ಸೌಮ್ಯ, ಮತ್ತು ಮಹಿಳಾ ಮತ್ತು ಮಕ್ಕಳ ಕುಟುಂಬ ಇಲಾಖೆ, ಬೆಸ್ಕಾಂ , ಕೆ.ಎಸ್.ಆರ್.ಟಿ.ಸಿ ಮತ್ತು ಬಿಟಿಎಸ್, ಕ್ರೀಡಾ ಮತ್ತು ಯುವ ಜನ ಸಬಲೀಕರಣ ಇಲಾಖೆ ಅಧಿಕಾರಿಗಳು ಸಭೆಯಲ್ಲಿ ಭಾಗವಹಿಸಿದ್ದರು.
ಸಚಿವರಾದ ದಿನೇಶ್ ಗುಂಡೂರಾವ್ ಮಾತನಾಡಿ, ರಾಜ್ಯದಲ್ಲಿ ಗ್ಯಾರೆಂಟಿ ಯೋಜನೆಗಳು ವೇಗವಾಗಿ ಜನರಿಗೆ ತಲುಪಿದೆ. ಯೋಜನೆಯ ಲಾಭ ಎಷ್ಟು ಜನರಿಗೆ ಸದುಪಯೋಗ ವಾಗುತ್ತಿದೆ ಮತ್ತು ಇದರಲ್ಲಿ ಬಡವರು, ಮಧ್ಯಮವರ್ಗದವರು ಎಷ್ಟು ಜನರು ಇದ್ದಾರೆ ಎಂದು ಪರಿಶೀಲನೆ ಮಾಡಬೇಕು.
ಗಾಂಧಿನಗರ ವಿಧಾನಸಭಾ ಕ್ಷೇತ್ರದಲ್ಲಿ 200ಯೂನಿಟ್ ವಿದ್ಯುತ್ ಉಚಿತ ಯೋಜನೆಯ ಲಾಭ ಸಾವಿರಾರು ಕುಟುಂಬಗಳಿಗೆ ಯೋಜನೆ ಲಾಭ ತಲುಪಿದೆ.
ಗಾಂಧಿನಗರ ವಿಧಾನಸಭಾ ಕ್ಷೇತ್ರದಲ್ಲಿರುವ ಸ್ಲಂ ಪ್ರದೇಶದ ವಾಸ ಮಾಡುವ ಕಡೆಗಳಲ್ಲಿ ಗೃಹಜ್ಯೋತಿ ಯೋಜನೆ ಬಳಕೆದಾರರು ಶೇಕಡ 90%ರಷ್ಟು ಇದ್ದಾರೆ.
ಆಹಾರ ಇಲಾಖೆಯಿಂದ ಬಡವರ ಮನೆಗಳಿಗೆ ಖುದ್ದಾಗಿ ಪರಿಶೀಲನೆ ಮಾಡಿ ಬಿಪಿಎಲ್ ಕಾರ್ಡ್ ನೀಡಲಾಗುತ್ತಿದೆ ಇದರಿಂದ ದುರುಪಯೋಗ ಕಡಿಮೆಯಾಗುತ್ತಿದೆ.
ಹಸಿವಿನಿಂದ ಯಾರು ಮಲಗಬಾರದು ಎಂದು ಸರ್ಕಾರ ಅನ್ನಭಾಗ್ಯ ಯೋಜನೆ ಬಡವರ ಪಾಲಿಗೆ ಅಕ್ಷಯಪಾತ್ರೆಯಾಗಿದೆ.
ಯುವತಿಯರು, ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ ಮತ್ತು ಗೃಹಲಕ್ಷ್ಮಿ ಯೋಜನೆಯಿಂದ ಸ್ವಾವಲಂಭಿ ಬದುಕು ಸಾಗಿಸಲು ಅನುಕೂಲವಾಗಿದೆ.
ಗಾಂಧಿನಗರ ವಿಧಾನಸಭಾ ಕ್ಷೇತ್ರದ ಗ್ಯಾರೆಂಟಿ ಯೋಜನೆ ಅನುಷ್ಠಾನ ಸಮಿತಿ ಅಧ್ಯಕ್ಷರು, ಸಮಿತಿಯ ಸದಸ್ಯರುಗಳು ಪ್ರತಿ ಮನೆಗಳಿಗೆ ಭೇಟಿ ನೀಡಲಿದ್ದಾರೆ ಮತ್ತು ಹೊಸ ಫಲಾನುಭವಿಗಳಿಗೆ ಗುರುತಿಸಿ ಯೋಜನೆ ಲಾಭ ತಲುಪುವಂತೆ ಮತ್ತು ಫಲಾನುಭವಿಗಳಿಗೆ ಸರಿಯಾಗಿ ಯೋಜನೆ ಲಾಭ ತಲುಪುತಿದ್ದಿಯ ಎಂದು ಪರಿಶೀಲನೆ ಮಾಡಲಿದ್ದಾರೆ ಎಂದು ಹೇಳಿದರು.
ಬ್ಲಾಕ್ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರುಗಳಾದ ಶ್ರೀನಿವಾಸಮೂರ್ತಿ, ಸರವಣನ್, ಗ್ಯಾರೆಂಟಿ ಯೋಜನೆ ಅನುಷ್ಠಾನ ಸಮಿತಿಯ ಸದಸ್ಯರುಗಳಾದ ಓಂಪ್ರಕಾಶ್, ಭಾಗಲಕ್ಷ್ಮಿ, ಅಮರ್ ನಾಥ್ ವಿ, ಮತ್ತು ಕುಮಾರಿ,ಮಾಧುರಿ, ಸೈಯದ್, ಸಲಾವುದ್ದೀನ್, ಮಹೇಶ್ ಜಿ, ದೀಪ, ರೇಖಾ, ಶೇಖರ್, ದರ್ಶನ್ ನಟರಾಜ್, ಮಹೇಶ್ವರಿ ಸೇರಿದಂತೆ ಇತರರು ಉಪಸ್ಥಿತರಿದ್ದರು.