ಬೆಂಗಳೂರು: ಶ್ರೀನಗರದಿಂದ ಶೇರ್ – ಇ -ಕಾಶ್ಮೀರ ಕೃಷಿ ವಿಜ್ಞಾನ ಮತ್ತು ತಂತ್ರಜ್ಞಾನ ವಿಶ್ವವಿದ್ಯಾಲಯದಲ್ಲಿ ವ್ಯಾಸಂಗ ಮಾಡುತ್ತಿದ್ದ ರಾಜ್ಯದ 13 ಜನ ವಿದ್ಯಾರ್ಥಿಗಳು ಸುರಕ್ಷಿತವಾಗಿ ಬೆಂಗಳೂರಿಗೆ ವಾಪಸ್ ಬಂದು ನಿಖಿಲ್ ಕುಮಾರಸ್ವಾಮಿ ಅವರನ್ನ ಭೇಟಿ ಮಾಡಿ ಸಂತಸ ವ್ಯಕ್ತಪಡಿಸಿದರು.
*ಸುರಕ್ಷಿತ ಬೆಂಗಳೂರಿಗೆ ವಾಪಸ್, ವಿದ್ಯಾರ್ಥಿಗಳ ಸಂತಸ*
ಕಷ್ಟದ ಸಮಯದಲ್ಲಿ ನಿಖಿಲ್ ಅಣ್ಣ ಅವರು ವೈಯಕ್ತಿಕವಾಗಿ ನಮ್ಮೊಂದಿಗೆ ನಿಂತಿದ್ದಕ್ಕಾಗಿ ಅವರಿಗೆ ಧನ್ಯವಾದ ಹೇಳುತ್ತೇನೆ. ವಿದ್ಯಾರ್ಥಿಗಳ ಸುರಕ್ಷತೆಯನ್ನು ಅವರು ತುಂಬಾ ಗಂಭೀರವಾಗಿ ಪರಿಗಣಿಸಿದ್ದು ನಮಗೆ ತುಂಬಾ ಸಂತೋಷ ಉಂಟು ಮಾಡಿದೆ. ಕೇಂದ್ರ ಸಚಿವರಾದ ಹೆಚ್.ಡಿ. ಕುಮಾರಸ್ವಾಮಿ ಅವರ ವೈಯಕ್ತಿಕ ಕಾಳಜಿ, ನೆರವು ಹಾಗೂ ನಿಖಿಲ್ ಕುಮಾರಸ್ವಾಮಿ ಅವರಿಂದ ದೊರೆತ ಸಹಾಯದಿಂದ ನಾವು ಸುರಕ್ಷಿತವಾಗಿ ನಮ್ಮ ನಮ್ಮ ಮನೆಗಳಿಗೆ ತಲುಪುತ್ತಿದ್ದೇವೆ ಎಂದು ವಿದ್ಯಾರ್ಥಿಗಳು ಸಂತಸ ವ್ಯಕ್ತಪಡಿಸಿದರು.
ಚನ್ನಪಟ್ಟಣ ತಾಲ್ಲೂಕಿನ ತಗಚಗೆರೆ ಗ್ರಾಮದ ವಿದ್ಯಾರ್ಥಿ ಹರ್ಷಿತ್ ಅವರ ಪೋಷಕರು ಜಮ್ಮುವಿನಲ್ಲಿ ಸಿಲುಕಿರುವ ತಮ್ಮ ಪುತ್ರನನ್ನು ರಕ್ಷಣೆ ಮಾಡಬೇಕು ಎಂದು ಯುವ ಜನತಾದಳ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಅವರಿಗೆ ಮನವಿ ಮಾಡಿದ್ದರು. ಕೂಡಲೇ ಈ ವಿಷಯವನ್ನು ಕೇಂದ್ರ ಸಚಿವ ಕುಮಾರಸ್ವಾಮಿ ಅವರ ಗಮನಕ್ಕೆ ತಂದು ವಿದ್ಯಾರ್ಥಿಗಳ ಸುರಕ್ಷಿತ ಸ್ಥಳಾಂತರಕ್ಕೆ ಮನವಿ ಮಾಡಿದ್ದರು ಈಗ ಮೆನೆಗೆ ತಲುಪಿದ್ದಾರೆ. ಕಷ್ಟದ ಸಮಯದಲ್ಲಿ ನಮ್ಮ ಜತೆ ನಿಂತಿದ್ದಕ್ಕೆ ಅವರಿಗೆ ನಾವು ಎಷ್ಟು ಧನ್ಯವಾದ ತಿಳಿಸಿದರು ಸಾಲದು ಎಂದು ಪೋಷಕರು ಸಂತಸ ವ್ಯಕ್ತ ಪಡಿಸಿದರು.
ಶ್ರೀನಗರದಿಂದ ಬೆಂಗಳೂರಿಗೆ ಸುರಕ್ಷಿತವಾಗಿ ವಾಪಸ್ ಬಂದ ಬಗ್ಗೆ ಎಲ್ಲಾ ಹದಿಮೂರು ವಿದ್ಯಾರ್ಥಿಗಳು ಅತೀವ ಸಂತಸ ವ್ಯಕ್ತಪಡಿಸಿದ್ದಾರೆ.ಯುದ್ಧದ ವೇಳೆ ತುಂಬಾನೇ ಭಯ ಆಗ್ತಿತ್ತು. ಎಂದು ತಿಳಿಸಿದರು.
ಶ್ರೀನಗರದಲ್ಲಿದ್ದ ಪ್ರದೇಶದಲ್ಲಿ ಉದ್ವಿಗ್ನತೆ ಹೆಚ್ಚಾದಾಗ ತೀವ್ರ ಅನಿಶ್ಚಿತ ಮತ್ತು ಆತಂಕಕ್ಕೊಳಗಾಗಿದ್ದೆವು. ಆದರೆ ಭಾರತ ಸರ್ಕಾರದ ತ್ವರಿತ ನೆರವಿನಿಂದ ನಾವು ಅಪಾಯದಿಂದ ಪಾರಾದೆವು. ನಾವು ಸುರಕ್ಷಿತವಾಗಿ ವಾಪಸ್ ಆಗಿದ್ದೇವೆ. ನಮ್ಮನ್ನು ಯೋಗಕ್ಷೇಮ, ಸುರಕ್ಷತೆಯ ಬಗ್ಗೆ ನಿರಂತರವಾಗಿ ನಿಗಾ ವಹಿಸಿದ್ದ ಕೇಂದ್ರ ಸಚಿವರಾದ ಹೆಚ್.ಡಿ.ಕುಮಾರಸ್ವಾಮಿ ಅವರಿಗೆ ಮತ್ತು ನಿಖಿಲ್ ಕುಮಾರಸ್ವಾಮಿ ಅವರಿಗೆ ನಮ್ಮ ಹೃತ್ಪೂರ್ವಕ ಕೃತಜ್ಞತೆಯನ್ನು ಅರ್ಪಿಸುತ್ತೇವೆ.