ಬೆಂಗಳೂರು: ಕರ್ನಾಟಕ ರಾಜ್ಯ ಸರ್ಕಾರದ ಮುಖ್ಯಮಂತ್ರಿಗಳು ಮತ್ತು ಕಾಂಗ್ರೆಸ್ ಪಕ್ಷದ ನಾಯಕರು ಆದ ಸಿದ್ದರಾಮಯ್ಯ ರವರು 06-07-2024 ರಂದು ಶನಿವಾರ ಮದ್ಯಾಹ್ನ 3 ಗಂಟೆಗೆ ಕ್ವೀನ್ಸ್ ರಸ್ತೆಯಲ್ಲಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಪಕ್ಷದ ಕಾರ್ಯಾಲಯಕ್ಕೆ ಭೇಟಿ ನೀಡಲಿದ್ದು, ಕಾಂಗ್ರೆಸ್ ಪಕ್ಷದ ಕಾರ್ಯಕರ್ತರ ಮನವಿಗಳು, ಕುಂದು ಕೊರತೆಗಳನ್ನು ಹಾಲಿಸಲಿದ್ದಾರೆ.
ಕೆಪಿಸಿಸಿ ಅಧ್ಯಕ್ಷರು ಹಾಗೂ ಉಪಮುಖ್ಯಮಂತ್ರಿಗಳಾದ ಡಿ.ಕೆ.ಶಿವಕುಮಾರ್ ರವರು ಉಪಸ್ಥಿತರಿರುತ್ತಾರೆ. ಮುಖ್ಯಮಂತ್ರಿಗಳು ಮದ್ಯಾಹ್ನ 3 ಗಂಟೆಯಿಂದ 5 ಗಂಟೆಯವರೆಗೆ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರ ಮನವಿಗಳನ್ನು ಸ್ವೀಕರಿಸಲಿದ್ದು, ಪಕ್ಷದ ಕಾರ್ಯಕರ್ತರ ಕುಂದುಕೊರತೆಗಳನ್ನು ಆಲಿಸಲಿದ್ದಾರೆ.
ಪಕ್ಷದ ಕಾರ್ಯಕರ್ತರು ಈ ಕಾರ್ಯಕ್ರಮವನ್ನು ಸದುಪಯೋಗ ಪಡಿಸಿಕೊಳ್ಳಲು ಕರ್ನಾಟಕ ಪ್ರದೇಶ ಕಾಂಗ್ರೆಸ್ ಪಕ್ಷದ ಅಧ್ಯಕ್ಷರು ಹಾಗೂ ರಾಜ್ಯದ ಉಪ ಮುಖ್ಯಮಂತ್ರಿಗಳು ಆದ ಡಿ.ಕೆ. ಶಿವಕುಮಾರ್ ರವರು ಸೂಚಿಸಿರುತ್ತಾರೆ. ಪಕ್ಷದ ಕಾರ್ಯಕರ್ತರು ಮುಖ್ಯಮಂತ್ರಿಗಳ ಭೇಟಿಗೆ ಪಕ್ಷದ ಕಾರ್ಯಾಲಯದಲ್ಲಿ ತಮ್ಮ ಹೆಸರನ್ನು ನೋಂದಾಯಿಸಿಕೊಳ್ಳಲು ಅವಕಾಶವಿದ್ದು, ಮೊದಲು ಬಂದವರಿಗೆ /ನೋಂದಾಯಿಸಿಕೊಂಡವರಿಗೆ ಮೊದಲು ಆದ್ಯತೆ ನೀಡಲಾಗುವುದು.
ಪಕ್ಷದ ಕಾರ್ಯಕರ್ತರು ಕಾಂಗ್ರೆಸ್ ಪಕ್ಷದ ವಾಟ್ಸ್ ಅಪ್ ಮೊಬೈಲ್ ಸಂಖ್ಯೆ 7899116899 ರಲ್ಲಿ ತಮ್ಮ ಹೆಸರು, ವಯಸ್ಸು, ವಿಳಾಸ ಹಾಗೂ ಇತರ ಮಾಹಿತಿಯೊಂದಿಗೆ ಹೆಸರುಗಳನ್ನು ನೋಂದಾಯಿಸಿಕೊಳ್ಳಬಹುದು ಎಂದು ಮಾಧ್ಯಮ ವಿಭಾಗದ ಉತ್ತರ ರಮೇಶ್ ಬಾಬು ಅವರು ಪತ್ರಿಕಾ ಪ್ರಕಟಣೆಯನ್ನು ತಿಳಿಸಿದ್ದಾರೆ.