ಬೆಂಗಳೂರು: ಬಿಬಿಎಂಪಿ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ, ಅಧ್ಯಕ್ಷರಾದ ಜಿ.ಕೃಷ್ಣಪ್ಪ ರವರು ಬೆಂಗಳೂರು ದಕ್ಷಿಣ ವಿಧಾನ ಸಭಾ ಕ್ಷೇತ್ರದ ಕಛೇರಿಯಲ್ಲಿ ಪರಿವೀಕ್ಷಣೆ ಕಾರ್ಯಕ್ರಮವನ್ನು ಕೈಗೊಂಡು, ಗ್ಯಾರಂಟಿ ಯೋಜನೆಗಳ ಪರಿಣಾಮಕಾರಿ ಅನುಷ್ಠಾನದ ಬಗ್ಗೆ ಚರ್ಚಿಸಿದರು.
ಈ ಸಮಯದಲ್ಲಿ ವಿಶ್ವಸಂಸ್ಥೆಯ ಸಾಮಾನ್ಯ ಸಭೆಯ ಅಧ್ಯಕ್ಷರಾದ ಫಿಲೆ ಮನ್ ಯಾಂಗ್ ರವರು ಮಹಿಳೆಯರನ್ನು ಮುಖ್ಯ ಫಲಾನುಭವಿಗಳನ್ನಾಗಿಸುವ ರಾಜ್ಯ ಕಾಂಗ್ರೆಸ್ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳ ಕುರಿತು ಮೆಚ್ಚುಗೆ ವ್ಯಕ್ತಪಡಿಸಿದ್ದು, ಮಹಿಳಾ ಸಬಲೀಕರಣ ಹಾಗೂ ಲಿಂಗ ಸಮಾನತೆ ತರುವಲ್ಲಿ ಈ ಯೋಜನೆಗಳು ಮಹತ್ವದ ಪಾತ್ರ ವಹಿಸಿದೆ ಎಂದ ಫಿಲೆ ಮನ್ ಯಾಂಗ್ ರವರ ಮಾತನ್ನು ಕೊಂಡಾಡಿದರು.
ಕಾರ್ಯಕ್ರಮದಲ್ಲಿ ಬೆಂಗಳೂರು ದಕ್ಷಿಣ ವಿಧಾನ ಸಭಾ ಕ್ಷೇತ್ರದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಅಧ್ಯಕ್ಷರಾದ ಅಂಜನಪ್ಪ ರವರು, ಬಿಬಿಎಂಪಿ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಉಪಾಧ್ಯಕ್ಷರಾದ ಸ್ವಪ್ನಚಂದ್ರ ಶೆಟ್ಟಿ ರವರು, ಹಾಗೂ ಸ್ಥಳೀಯ ಸಮಿತಿಯ ಸದಸ್ಯರುಗಳು ಭಾಗವಹಿಸಿದ್ದರು.