ಬೆಂಗಳೂರು: ಅನಗತ್ಯವಾಗಿ ನೀರು ಪೋಲಾಗುವುದನ್ನ ತಡೆಯಲು ವಾಣಿಜ್ಯ ಕಟ್ಟಡಗಳು, ಕೈಗಾರಿಕಾ ಪ್ರದೇಶಗಳು, ರೆಸ್ಟೋರೆಂಟ್ ಗಳು ಸೇರಿದಂತೆ ಸಾರ್ವಜನಿಕ ಸ್ಥಳಗಳಲ್ಲಿನ ನಲ್ಲಿಗಳಿಗೆ ಏರಿಯೇಟರ್ ಹಾಗೂ ಫ್ಲೋ ಕಂಟ್ರೋಲರ್ ಅಳವಡಿಸಿಕೊಳ್ಳುವಂತೆ ನೀಡಿದ್ದ ಗಡುವನ್ನು ಏಪ್ರಿಲ್ 7 ರ ವರೆಗೆ ವಿಸ್ತರಿಸಲಾಗಿದೆ ಎಂದು ಜಲಮಂಡಳಿ ಅಧ್ಯಕ್ಷ ರಾದ ಡಾ. ರಾಮ್ ಮನೋಹರ್ ಪ್ರಸಾತ್ ತಿಳಿಸಿದ್ದಾರೆ.
ಈ ಬಗ್ಗೆ ಪತ್ರಿಕಾ ಹೇಳಿಕೆಯನ್ನು ನೀಡಿರುವ ಅವರು, ಬೆಂಗಳೂರಿನಲ್ಲಿ ಕುಡಿಯುವ ನೀರಿಗೆ ಅಭಾವ ಉಂಟಾಗಿರುವ ಕಾರಣ, ಹೆಚ್ಚು ಪೋಲಾಗುತ್ತಿರುವ ಪ್ರದೇಶಗಳಲ್ಲಿ ನೀರು ಬಳಕೆ ನಿಯಂತ್ರಣ ಮಾಡುವ ಸಲುವಾಗಿ ಈಗಾಗಲೇ ಎರಿಯೇಟರ್ ಅಳವಡಿಕೆ ಬಗ್ಗೆ ಎಲ್ಲರ ಗಮನಕ್ಕೂ ತರಲಾಗಿದೆ. ಸಾರ್ವಜನಿಕರಿಗೆ ಕಲಾವಕಾಶವನ್ನು ನೀಡಲಾಗಿದ್ದು, ರೇಡಿಯೇಟರ್ ಅಡವಳಿಕೆ ಬಗ್ಗೆ ಸಾರ್ವಜನಿಕರಲ್ಲಿ ಬೆಂಗಳೂರು ಜಲಮಂಡಳಿಯ ಅಧ್ಯಕ್ಷ ಮನವಿ ಮಾಡಿದರು.
ಏರಿಯೇಟರ್ ಅಳವಡಿಕೆಗೆ ಮಾರ್ಚ್ 31 ರ ವರೆಗೆ ಗಡುವು ನೀಡಲಾಗಿತ್ತು. ಈಗಾಗಲೇ ಬಹಳಷ್ಟು ಕಡೆ ಏರಿಯೇ ಟರ್ ಅಳವಡಿಸಲಾಗಿದೆ. ಇನ್ನು ಹಲವು ಕಡೆ ಇದರ ಅಳವಡಿಕೆಗೆ ಹೆಚ್ಚಿನ ಕಾಲಾವಕಾಶ ನೀಡುವಂತೆ ಮನವಿ ಮಾಡಿದ್ದಾರೆ. ನೀರಿನ ಉಳಿತಾಯ ಮಾಡುವ ನಿಟ್ಟಿನಲ್ಲಿ ಸಾರ್ವಜನಿಕರ ಸಹಭಾಗಿತ್ವ ಬಹಳ ಮುಖ್ಯ. ಅವರ ಪಾಲುದಾರಿಕೆ ಯಿಂದ ಮಾತ್ರ ಈ ಯೋಜನೆ ಯಶಸ್ವಿಯಾಗುತ್ತದೆ. ಸಾರ್ವಜನಿಕರಿಗೆ ಹೆಚ್ಚಿನ ಅವಕಾಶ ನೀಡುವ ನಿಟ್ಟಿನಲ್ಲಿ ಸಮಯಾವಕಾಶ ವಿಸ್ತರಿಸಲಾಗಿದೆ. ಈ ಗಡುವಿನ ಅವಧಿಯಲ್ಲಿ ಏರಿಯೇಟರ್ ಅಳವಡಿಸಿಕೊಳ್ಳುವಂತೆ ಅಧ್ಯಕ್ಷರು ಸೂಚನೆ ನೀಡಿದ್ದಾರೆ.