ಬೆಂಗಳೂರು:ಬಿಬಿಎಂಪಿ ಹೊರವಲಯ ವ್ಯಾಪ್ತಿಯ 35 ವಾರ್ಡ್ಗಳಲ್ಲಿನ 110 ಹಳ್ಳಿಗಳಲ್ಲಿ ನೀರಿನ ಸಮಸ್ಯೆ ಬಗೆಹರಿಸುವ ಸಲುವಾಗಿ ಉಸ್ತುವಾರಿಗಾಗಿ ನೋಡಲ್ ಅಧಿಕಾರಿಗಳ ನಿಯೋಜನೆ.
ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ಹೊ ವಲಯ ವ್ಯಾಪ್ತಿಯ 35 ವಾರ್ಡ್ಗಳಲ್ಲಿ ಬರುವ 110 ಹಳ್ಳಿಗಳಲ್ಲಿ ನೀರಿನ ಸಮಸ್ಯೆ ಬಗೆಹರಿಸುವ ಸಲುವಾಗಿ ಪಾಲಿಕೆ ಕೇಂದ್ರ ಕಛೇರಿಯಲ್ಲಿ ನಿಯಂತ್ರಣ ಕೊಠಡಿಯನ್ನು ಸ್ಥಾಪಿಸಿದ್ದು, ಶೀಘ್ರ ಕುಡಿಯುವ ನೀರಿನ ಸಮಸ್ಯೆ ಆಲಿಸುವ ಸಲುವಾಗಿ ಪ್ರತ್ಯೇಕವಾಗಿ ಮೇಲುಸ್ತುವಾರಿಗಾಗಿ ಧರಣೇಂದ್ರ ಕುಮಾರ್, ಕಾರ್ಯಪಾಲಕ ಅಭಿಯಂತರರು(ದಾಸರಹಳ್ಳಿ), ಬಿಬಿಎಂಪಿ ಇವರುನ್ನು ನೋಡಲ್ ಅಧಿಕಾರಿಗಳನ್ನಾಗಿ ನಿಯೋಜಿಸಲಾಗಿದೆ.
ಬಿಬಿಎಂಪಿ ವ್ಯಾಪ್ತಿಯ 35 ವಾರ್ಡ್ಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಕಂಡುಬಂದಲ್ಲಿ ಪಾಲಿಕೆಯ ಕೇಂದ್ರ ಕಛೇರಿಯಲ್ಲಿ ಸ್ಥಾಪಿಸಿರುವ ನಿಯಂತ್ರಣ ಕೊಠಡಿಯ ಸಹಾಯವಾಣಿ ಸಂಖ್ಯೆಯಾದ 1533 ಗೆ ಕರೆ ಮಾಡಿ ತಮ್ಮ ಸಮಸ್ಯೆ ಕುರಿತು ಮಾಹಿತಿ ಒದಗಿಸಲು ಕೋರಲಾಗಿದೆ.
ಅಲ್ಲದೇ, ಬಿಬಿಎಂಪಿ ವ್ಯಾಪ್ತಿಯ ಇನ್ನುಳಿದ ವಾರ್ಡ್ಗಳಲ್ಲಿನ ಕುಡಿಯುವ ನೀರಿನ ಸಮಸ್ಯೆ ಕುರಿತಾಗಿ ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಯ ಸಹಾಯವಾಣಿ ಸಂಖ್ಯೆಯಾದ *1916* ಗೆ ಕರೆ ಮಾಡಿ ತಮ್ಮ ಸಮಸ್ಯೆ ಕುರಿತು ಮಾಹಿತಿ ಒದಗಿಸಲು ಕೋರಲಾಗಿದೆ.
ಹೊರ ವಲಯಗಳಲ್ಲಿ ಬರುವ 35 ವಾರ್ಡ್ಗಳಲ್ಲಿ ಬರುವ 110 ಹಳ್ಳಿಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಬಗೆಹರಿಸುವ ನಿಟ್ಟಿನಲ್ಲಿ ಪಾಲಿಕೆಯು 35 ವಾರ್ಡ್ಗಳಿಗೆ ಪ್ರತ್ಯೇಕವಾಗಿ ನೋಡಲ್ ಅಧಿಕಾರಿಗಳನ್ನು ನಿಯೋಜಿಸಲಾಗಿದೆ ಎಂದು ಯೋಜನಾ ವಿಭಾಗದ ವಿಶೇಷ ಆಯುಕ್ತರಾದ ಡಾ. ಕೆ. ಹರೀಶ್ ಕುಮಾರ್ ರವರು ಮಾಧ್ಯಮ ಪ್ರಕಟಣೆಯ ಮೂಲಕ ತಿಳಿಸಿರುತ್ತಾರೆ.
ಹೆಚ್ಚಿನ ಮಾಹಿತಿಗಾಗಿ ಮಾಧ್ಯಮ ಪ್ರಕಟಣೆಯ ಪ್ರತಿ ಹಾಗೂ 35 ವಾರ್ಡ್ಗಳಲ್ಲಿ ಬರುವ 110 ಹಳ್ಳಿಗಳ ಪಟ್ಟಿಯನ್ನು ಲಗತ್ತಿಸಲಾಗಿದೆ.