ದೇವನಹಳ್ಳಿ ; ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಜಯಂತಿ ಅಂಗವಾಗಿ ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ರಕ್ಷಾ ರಾಮಯ್ಯ ಅವರು ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಕೆ.ಎಚ್. ಮುನಿಯಪ್ಪ ಅವರ ಜೊತೆ ಡಾ.ಬಿ.ಆರ್.ಅಂಬೇಡ್ಕರ್ ಅವರಿಗ ಗೌರವ ಸಮರ್ಪಿಸಿದರು.
ದೇವನಹಳ್ಳಿಯ ತಾಲ್ಲೂಕು ಕಚೇರಿ ಆವರಣದಲ್ಲಿರುವ ಡಾ. ಬಿ.ಆರ್. ಅಂಬೇಡ್ಕರ್ ಅವರ ಪುತ್ಥಳಿಗೆ ಮಾಲಾರ್ಪಣೆ ಮಾಡಿ ಸಂವಿಧಾನ ಶಿಲ್ಪಿಗೆ ನಮಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ರಕ್ಷಾ ರಾಮಯ್ಯ, ಸಂವಿಧಾನ ರಚಿಸಿದ ಡಾ.ಬಿ.ಆರ್. ಅಂಬೇಡ್ಕರ್ ಅವರಿಗೆ ಕಾಂಗ್ರೆಸ್ ಪಕ್ಷ ಗೌರವ ಸಲ್ಲಿಸುವ ಕೆಲಸ ಮಾಡಲಿದೆ. ಕಾಂಗ್ರೆಸ್ ಪಕ್ಷ ಸಂವಿಧಾನ ರಕ್ಷಣೆಗೆ ಕಟಿ ಬದ್ಧವಾಗಿದ್ದು, ಸಂವಿಧಾನ ಬದಲಿಸುವವರಿಗೆ ಈ ಚುನಾವಣೆಯಲ್ಲಿ ಮತದಾರರು ತಕ್ಕ ಉತ್ತರ ನೀಡಲಿದ್ದಾರೆ. ಸಂವಿಧಾನ ರಕ್ಷಕರನ್ನು ಜನತೆ ಬೆಂಬಲಿಸಲಿದ್ದಾರೆ ಎಂದರು.
ಇದಕ್ಕೂ ಮುನ್ನ ರಕ್ಷಾ ರಾಮಯ್ಯ ಅವರು ಯಲಹಂಕ ಎಪಿಎಂಸಿ ಮಾರುಕಟ್ಟೆ ಆಸುಪಾಸಿನಲ್ಲಿ ಮತಯಾಚಿಸಿದರು. ಪಾರ್ಕ್ ಗಳಲ್ಲಿ ವಾಯು ವಿಹಾರಿಗಳೊಂದಿಗೆ ಸಂಚರಿಸಿ ಈ ಬಾರಿಯ ಚುನಾವಣೆಯಲ್ಲಿ ತಮ್ಮನ್ನು ಗೆಲ್ಲಿಸುವಂತೆ ಮನವಿ ಮಾಡಿದರು.
ಮಹಿಳೆಯರು, ಹಿರಿಯ ನಾಗರಿಕರು, ಯುವ ಜನಾಂಗ ರಕ್ಷಾ ರಾಮಯ್ಯ ಅವರ ಜೊತೆ ವಾಯು ವಿಹಾರದಲ್ಲಿ ಪಾಲ್ಗೊಂಡು ತಮ್ಮ ಬೆಂಬಲ ವ್ಯಕ್ತಪಡಿಸಿದರು.