50 ಬಿಎಂಟಿಸಿ ಘಟಕಗಳಿಂದ ಬಸ್ ಆಚರಣೆ
ಬೆಂ.ಮ.ಸಾ.ಸಂಸ್ಥೆಯು ಬೆಂಗಳೂರು ನಗರದ ಪ್ರದೇಶಗಳಿಗೆ ಪ್ರಯಾಣಿಸುವ ಪ್ರಯಾಣಿಕರಿಗೆ 50 ಘಟಕಗಳಿಂದ ವಿವಿಧ ಮಾದರಿಯ ಬಸ್ಸುಗಳನ್ನು ಆಚರಣೆ ಮಾಡುವ ಮೂಲಕ ಸುರಕ್ಷಿತ ಮತ್ತು ಆರಾಮದಾಯಕ ಸಾರಿಗೆ ಸೇವೆಯನ್ನು ಒದಗಿಸುತ್ತಿದೆ. ಸಂಸ್ಥೆಯು ಸಾರ್ವಜನಿಕರ ಬೇಡಿಕೆಗೆ ಅನುಗುಣವಾಗಿ ಸಾರಿಗೆಗಳನ್ನು ಕಾರ್ಯಾಚರಣೆಗೊಳಿಸಲು ಪ್ರತಿದಿನ 5879 ಅನುಸೂಚಿಗಳಿಂದ 61810 ಸುತ್ತುವಳಿಗಳನ್ನು 12.09 ಲಕ್ಷ ಕಿ.ಮೀ.ಗಳಲ್ಲಿ ಆಚರಣೆಗೊಳಿಸಲಾಗುತ್ತಿದೆ. ಪ್ರತಿ ದಿನ ಸರಾಸರಿ 40 ಲಕ್ಷ ಪ್ರಯಾಣಿಕರು ಸಂಸ್ಥೆಯ ಸಾರಿಗೆಗಳ ಸೌಲಭ್ಯವನ್ನು ಪಡೆದುಕೊಳ್ಳುತ್ತಿದ್ದಾರೆ.
ಸಾರ್ವಜನಿಕ ಪ್ರಯಾಣಿಕರಿಗೆ ಉತ್ತಮ ಸಾರಿಗೆ ಸೌಲಭ್ಯವನ್ನು ಒದಗಿಸಲು ಹಾಗೂ ನಗರದಲ್ಲಿ ವಾಯುಮಾಲಿನ್ಯ ತಗ್ಗಿಸುವ ನಿಟ್ಟಿನಲ್ಲಿ ಎಲೆಕ್ಟ್ರಿಕ್ ಬಸ್ಸುಗಳ ಕಾರ್ಯಾಚರಣೆಯನ್ನು ಪ್ರಾರಂಭಿಸಿದ್ದು, ಪ್ರಸ್ತುತ 1369 ಎಲೆಕ್ಟ್ರಿಕ್ ಬಸ್ಸುಗಳನ್ನು ಕಾರ್ಯಾಚರಣೆ ಮಾಡಲಾಗುತ್ತಿದೆ ಹಾಗೂ ಮುಂದಿನ ದಿನಗಳಲ್ಲಿ 262 ಎಲೆಕ್ಟ್ರಿಕ್ ಬಸ್ಸುಗಳನ್ನು ಸೇರ್ಪಡೆಗೊಳಿಸಲು ಯೋಜಿಸಲಾಗಿದೆ. ಸಂಸ್ಥೆಯು ಪ್ರಸ್ತುತ ಒಟ್ಟು 6851 ವಾಹನಗಳನ್ನು ಹೊಂದಿದ್ದು, ಪರಿಸರಸ್ನೇಹಿ ಹಾಗೂ ವಾಯುಮಾಲಿನ್ಯವನ್ನು ನಿಯಂತ್ರಿಸುವ ನಿಟ್ಟಿನಲ್ಲಿ ಎಲೆಕ್ಟ್ರಿಕ್ ಬಸ್ಸುಗಳನ್ನು ಕಾರ್ಯಾಚರಣೆ ಮಾಡಲು ಕ್ರಮ ಕೈಗೊಳ್ಳಲಾಗಿದ