ಬಳ್ಳಾರಿ(ಸಂಡೂರು) : ಉಪಚುನಾವಣೆಯ ಪ್ರಚಾರ ಸಭೆಗಳಲ್ಲಿ ನಿರೀಕ್ಷೆಗೂ ಮೀರಿ ಜನರು ತಮ್ಮ ಬೆಂಬಲವನ್ನು ವ್ಯಕ್ತವಾಗುತ್ತಿದ್ದು, ಸಂಡೂರು, ಶಿಗ್ಗಾಂವಿ ಹಾಗೂ ಚನ್ನಪಟ್ಟಣದಲ್ಲಿ ಕಾಂಗ್ರೆಸ್ ಗೆಲುವು ಸಾಧಿಸಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ವಿಶ್ವಾಸ ವ್ಯಕ್ತಪಡಿಸಿದರು.
ಅವರು ಇಂದು ಸಂಡೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು. ಯತ್ನಾಳ್ ಅವರದ್ದು ರಾಜಕೀಯ ಪ್ರತಿಭಟನೆವಿಜಯಪುರಕ್ಕೆ ವಕ್ಫ್ ಬೋರ್ಡ್ ಗೆ ಸಂಬಂಧಿಸಿದಂತೆ ಜಂಟಿ ಸಂಸದೀಯ ಸಮಿತಿಯ ಅಧ್ಯಕ್ಷರು ಆಗಮಿಸಿರುವ ಬಗ್ಗೆ ಹಾಗೂ ಬಸವನಗೌಡ ಯತ್ನಾಳ್ ಅವರು ಪ್ರತಿಭಟನೆ ಮಾಡುತ್ತಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, ವಕ್ಫ್ ಬೋರ್ಡ್ ಕಾನೂನಿಗೆ ತಿದ್ದುಪಡಿ ತರುವ ಬಗ್ಗೆ ಪರಿಶೀಲನೆ ನಡೆಸುತ್ತಿದ್ದಾರೆ. ಯತ್ನಾಳ್ ಅವರು ರಾಜಕೀಯವಾಗಿ ಪ್ರತಿಭಟನೆ ಮಾಡುತ್ತಿದ್ದಾರೆ. ಜಂಟಿ ಸಂಸದೀಯ ಸಮಿತಿಯವರು ಭೇಟಿ ನೀಡಿದ್ದೂ ಕೂಡ ರಾಜಕೀಯವಾಗಿ. ಹಿಂದೆ ಯಾವಾಗ ಬಂದಿದ್ದರು ಎಂದು ಪ್ರಶ್ನಿಸಿದರು.
ಸಮಸ್ಯೆ ಎಲ್ಲಿದೆ
ಒಂದು ವೇಳೆ ಯಾರಿಗಾದರೂ ನೋಟೀಸು ನೀಡಲಾಗಿದ್ದರೆ ಅದನ್ನು ವಾಪಸು ಪಡೆಯುವುದಾಗಿ ಸ್ಪಷ್ಟವಾಗಿ ಈಗಾಗಲೇ ತಿಳಿಸಲಾಗಿದೆ. ಯಾರನ್ನೂ ನಾವು ಒಕ್ಕಲೆಬ್ಬಿಸುವುದಿಲ್ಲ. ಒಂದು ವೇಳೆ ದಾಖಲಾತಿಗಳು ತಿದ್ದುಪಡಿಯಾಗಿದ್ದರೆ ಅದನ್ನು ರದ್ದು ಮಾಡುತ್ತೇವೆ ಎಂದು ಹೇಳಿದ ಮೇಲೆ ಸಮಸ್ಯೆ ಎಲ್ಲಿದೆ ಎಂದು ಮುಖ್ಯಮಂತ್ರಿಗಳು.
ಬಿಜೆಪಿ ಷಡ್ಯಂತ್ರಕ್ಕೆ ತಕ್ಕ ಉತ್ತರ ಕೊಡಲು ಸಂಡೂರಿನಲ್ಲಿ ಅನ್ನಪೂರ್ಣಮ್ಮ ಗೆಲ್ಲಬೇಕು: ಸಿ.ಎಂ.ಸಿದ್ದರಾಮಯ್ಯ ಕರೆ
ಸಂಡೂರು ವಿಧಾನಸಭಾ ಕ್ಷೇತ್ರದ ಯಶವಂತಪುರ ಗ್ರಾಮದಲ್ಲಿ ನಡೆದ ಬೃಹತ್ ಜನ ಸಮಾವೇಶದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮಾತನಾಡಿ,ಈಗ ನಡೆಯುತ್ತಿರುವ ಮೂರೂ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲೂ ನಾವು ಗೆದ್ದೇ ಗೆಲ್ತೀವಿ,
ಯಶವಂತಪುರದ ಪುತ್ರ ಈ.ತುಕಾರಾಮ್ ಲೋಕಸಭಾ ಸದಸ್ಯರಾಗಿದ್ದಾರೆ. ಈಗ ಈ ಊರಿನ ಸೊಸೆ ಅನ್ನಪೂರ್ಣಮ್ಮ ಅವರನ್ನೂ ಗೆಲ್ಲಿಸಿ,ಈ.ತುಕಾರಾಮ್ ಅಭಿವೃದ್ಧಿಯಲ್ಲಿ ನಿಸ್ಸೀಮ. ನನ್ನಿಂದ, ಎಲ್ಲಾ ಮಂತ್ರಿಗಳಿಂದ ಸಜ್ಜನಿಕೆಯಿಂದಲೇ ಕೆಲಸ ಮಾಡಿಸಿಕೊಳ್ಳುವ ಕಲೆ, ಕಾಳಜಿ ಈ.ತುಕಾರಾಮ್ ಅವರಿಗೆ ಇದೆ ಎಂದರು.
ಈಗ ಅನ್ನಪೂರ್ಣಮ್ಮ ಅವರನ್ನೂ ಸೇರಿಸಿಕೊಂಡು ಅಭಿವೃದ್ಧಿ ಹೆಚ್ಚಾಗಿ ಆಗುತ್ತದೆ, ನಮ್ಮ ಸರ್ಕಾರ ಎಲ್ಲಾ ಜಾತಿ, ಎಲ್ಲಾ ಧರ್ಮದ ಮಹಿಳೆಯರಿಗೂ ಉಚಿತವಾದ ಶಕ್ತಿ, ಗೃಹಲಕ್ಷ್ಮಿ ಯೋಜನೆ ಜಾರಿ ಮಾಡಿದ್ದೇವೆ. ಯಶಸ್ವಿಯಾಗಿ ನಮ್ಮ ಗ್ಯಾರಂಟಿಗಳು ನಡೆಯುತ್ತಿವೆ.
ನಾವು ನಾಲ್ಕೂವರೆ ಲಕ್ಷ ಕೋಟಿ ತೆರಿಗೆ ಕಟ್ತೀವಿ. ನಮಗೆ ವಾಪಾಸ್ ಬರೋದು ಒಂದು ರೂಪಾಯಿಗೆ 15 ಪೈಸೆ ಮಾತ್ರ,ಐದನೇ ವೇತನ ಆಯೋಗ, ತುಂಗಾ ಮೇಲ್ದಂಡೆ, ಬರ ಪರಿಹಾರದಲ್ಲೂ ರಾಜ್ಯಕ್ಕೆ ಅನ್ಯಾಯ ಮಾಡಿದರು. ನಾವು ಸುಪ್ರೀಂಕೋರ್ಟ್ ಗೆ ಹೋಗಿ ಬರ ಪರಿಹಾರ ತಂದೆವು. ನಮ್ಮ ಪಾಲಿನ ತೆರಿಗೆ ಹಣ ಕೊಡುವುದನ್ನು ನಿಲ್ಲಿಸಿದರೆ ಗ್ಯಾರಂಟಿಗಳನ್ನು ನಿಲ್ಲಿಸಿ ಬಿಡ್ತಾರೆ ಅಂತ ಕೇಂದ್ರ ತೊಂದರೆ ಕೊಡುತ್ತಿದೆ ಎಂದರು.
ಆದರೆ ನಾವು 56 ಸಾವಿರ ಕೋಟಿ ಹಣವನ್ನು ಗ್ಯಾರಂಟಿಗಳಿಗೆ ಖರ್ಚು ಮಾಡುತ್ತಲೇ ಒಂದು ಲಕ್ಷ ಇಪ್ಪತ್ತು ಸಾವಿರ ಕೋಟಿ ಹಣವನ್ನು ಅಭಿವೃದ್ಧಿ ಕೆಲಸಗಳಿಗೆ ಕೊಡುತ್ತಿದ್ದೇವೆ. ಆದ್ದರಿಂದ ಬಿಜೆಪಿಯವರ ಹಸಿ ಹಸಿ ಸುಳ್ಳುಗಳಿಗೆ ಮರುಳಾಗಬೇಡಿ. ಕಾಂಗ್ರೆಸ್ಸಿಗೆ ಮತ ನೀಡಿ.
ನನ್ನ ಚಿಗರಿ ದೋಸ್ತ್ ನ ಮಗಳು ಅನ್ನಪೂರ್ಣಮ್ಮ ಅವರನ್ನು ನೀವು ಗೆಲ್ಲಿಸಲೇಬೇಕು. ಈ.ತುಕಾರಾಮ್ ಅವರ ಖಾಲಿ ಜಾಗವನ್ನು ಅನ್ನಪೂರ್ಣಮ್ಮ ಭರ್ತಿ ಮಾಡಬೇಕು.
ಅನ್ನಪೂರ್ಣಮ್ಮ ಅವರು ಗೆದ್ದರೆ ನಾನೇ ಗೆದ್ದ ಹಾಗೆ. ಈ ಗೆಲುವಿನಿಂದ ನನಗೆ ಶಕ್ತಿ ಬರುತ್ತದೆ. ನಾನೇನು ತಪ್ಪು ಮಾಡದೆ ನನ್ನ ಮೇಲೆ ಸುಳ್ಳು ಕೇಸು ಹಾಕಿದ್ದಾರೆ. ನಾನು ಮಂತ್ರಿಯಾಗಿ 40 ವರ್ಷ ಆಯ್ತು. ಸಣ್ಣ ಕಳಂಕವೂ ನನ್ನ ಮೇಲಿಲ್ಲ. ಆದರೆ ಸುಳ್ಳು ಕೇಸು ಹಾಕಿಸಿದ್ದಾರೆ. ಈ ಬಿಜೆಪಿಗೆ ಸರಿಯಾದ ಪಾಠ ಕಲಿಸಬೇಕು ಅಂದರೆ ಇಲ್ಲಿ ಅನ್ನಪೂರ್ಣಮ್ಮ ಅವರನ್ನು ಗೆಲ್ಲಿಸಿ.