ಬೆಂಗಳೂರು:ಜಗತ್ತಿನಲ್ಲಿಯೇ ಮೊಟ್ಟ ಮೊದಲ ಬಾರಿಗೆ “ಅನುಭವಮಂಟಪ”ದ ಮೂಲಕ ಪ್ರಜಾಪ್ರಭುತ್ವದ ಪರಿಕಲ್ಪನೆಗೆ ನಾಂದಿ ಹಾಡಿ, ಸಾಂಸ್ಕøತಿಕ, ಸಾಮಾಜಿಕ ಹಾಗೂ ರಾಜಕೀಯ ಚಿಂತನೆಗಳಿಗೆ ಹೊಸ ದಿಕ್ಕನ್ನು ತೋರಿಸಿ ವಚನ ಚಳುವಳಿಯ ಹರಿಕಾರರಾಗಿರುವ ವಿಶ್ವಗುರು ಬಸವಣ್ಣನವರನ್ನು “ರಾಜ್ಯದ ಸಾಂಸ್ಕøತಿಕ ನಾಯಕ ” ರೆಂದು ಘೋಷಣೆ ಮಾಡುವ ಐತಿಹಾಸಿಕ ನಿರ್ಣಯ ಕೈಗೊಂಡಿದಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಅವರ ಸಚಿವ ಸಂಪುಟದ ಎಲ್ಲಾ ಸಚಿವರನ್ನು ನಾಡಿನ ಜನತೆಯ ಪರವಾಗಿ ಹೃದಯಪೂರ್ವಕವಾಗಿ ಅಭಿನಂದಿಸುವುದಾಗಿ ಕರ್ನಾಟಕ ವಿಧಾನ ಪರಿಷತ್ತಿನ ಸಭಾಪತಿ ಬಸವರಾಜ ಹೊರಟ್ಟಿ ಹೇಳಿದ್ದಾರೆ.
ಈ ಕುರಿತು ಮುಖ್ಯಮಂತ್ರಿಗಳಿಗೆ ಪತ್ರ ಬರೆದಿರುವ ಅವರು, ರಾಜ್ಯ ಸಚಿವಸಂಪುಟ ಸಭೆಯಲ್ಲಿ ಈ ತೀರ್ಮಾನ ಕೈಗೊಂಡಿರುವುದು ನಾಡಿನ ಜನತೆಯಲ್ಲಿ ತೀವ್ರ ಸಂತಸ ಉಂಟು ಮಾಡಿದೆ ಎಂದು ಹೇಳಿದ್ದಾರೆ. 12ನೇ ಶತಮಾನದಲ್ಲಿ ಅಲ್ಲಮಪ್ರಭು ಮತ್ತು ಬಸವಾದಿ ಶರಣರು ನಿರ್ಮಿಸಿದ “ಅನುಭವ ಮಂಟಪ” ಇಡೀ “ವಿಶ್ವದ ಪ್ರಪ್ರಥಮ ಶಾಸನ ಸಭೆ” ಎಂಬ ಹೆಗ್ಗಳಿಕೆ ಪಾತ್ರವಾಗಿದ್ದು, ಪ್ರಜಾಪ್ರಭುತ್ವದ ಪರಿಕಲ್ಪನೆಗೆ ಮೂಲ ಆಡಿಪಾಯವಾಗಿದೆ ಎಂದು ಬಸವರಾಜ ಹೊರಟ್ಟಿ ತಿಳಿಸಿದ್ದಾರೆ. ಸಮಾಜದಲ್ಲಿ ಅಸಮಾನತೆಯನ್ನು ತೊಡೆದುಹಾಕಿ “ಸರ್ವರಿಗೂ ಸಮಪಾಲು” “ಸರ್ವರಿಗೂ ಸಮಬಾಳು”ಎಂಬ ಸಂದೇಶ ಸಾರುವ ಸಾರ್ವಕಾಲಿಕ ವಿಚಾರಧಾರೆಯಡಿ ನಿರ್ಮಾಣ ಗೊಂಡಿದ್ದ, ಅನುಭವಮಂಟಪ ಪ್ರಜಾಸತ್ತಾತ್ಮಕ ಮೌಲ್ಯಗಳ ವರ್ಧನೆಗೆ ಬೀಜಾಂಕುರ ಮಾಡಿದಂತಾಗಿದ್ದು, ಪ್ರಜಾಪ್ರಭುತ್ವದ ಬೇರುಗಳು ಗಟ್ಟಿಗೊಳ್ಳುವಲ್ಲಿ ಪ್ರೇರಣಾ ಶಕ್ತಿಯಾಗಿದೆ. ಬಸವಾದಿ ಶರಣರಿಂದ ರಚಿತಗೊಂಡ ಅಸಂಖ್ಯಾತ ವಚನಗಳೇ ಭಾರತ ಸಂವಿಧಾನದ ಅನುಚ್ಛೇದಗಳಾಗಿ ರೂಪುಗೊಂಡಿರುವುದು ಹೆಮ್ಮೆಯ ವಿಷಯ ಎಂದು ಬಸವರಾಜ ಹೊರಟ್ಟಿ ಬಣ್ಣಿಸಿದ್ದಾರೆ.
ಅಸ್ಪøಶ್ಯತೆ ವಿರುದ್ದ ನಿರಂತರ ಚಳವಳಿ, ದೀನ ದಲಿತ ಶೋಷಿತ ಸಮಾಜದ ಪ್ರಗತಿಗೆ ಕ್ರಾಂತಿಕಾರಕ ಹೆಜ್ಜೆಗಳನ್ನಿಟ್ಟ ಸಾಮಾಜಿಕ ನ್ಯಾಯದ ಮೊದಲ ಹರಿಕಾರ ವಿಶ್ವಗುರು ಬಸವರಣ್ಣನವರಾಗಿದ್ದು, ಜಾತಿ ರಹಿತ ಸಮಾಜ ನಿರ್ಮಿಸುವ ಉದಾತ್ತ ಧ್ಯೇಯ ಹೊಂದಿದ್ದ ಇಂತಹ ಮಹನೀಯರನ್ನು “ರಾಜ್ಯದ ಮೊದಲ ಸಾಂಸ್ಕøತಿಕ ನಾಯಕ” ಎಂದು ಘೋಷಣೆ ಮಾಡಿದ್ದು, ಹೆಮ್ಮೆಯ ವಿಷಯವಾಗಿದೆ ಎಂದು ಮಾನ್ಯ ಶ್ರೀ ಬಸವರಾಜ ಹೊರಟ್ಟಿ ತಿಳಿಸಿದ್ದಾರೆ.
ರಾಜ್ಯ ಸರ್ಕಾರದ ಎಲ್ಲಾ ಕಚೇರಿಗಳಲ್ಲಿ ವಿಶ್ವಗುರು ಬಸವಣ್ಣನವರ ಭಾವಚಿತ್ರವನ್ನು ಅಳವಡಿಸುವ ಕುರಿತು ಈ ಹಿಂದೆ ಸಿದ್ದರಾಮಯ್ಯನವರೇ ಮುಖ್ಯಮಂತ್ರಿಯಾಗಿದ್ದಾಗ ಆದೇಶ ಹೊರಡಿಸಿದ್ದನ್ನು ಈ ಸಂದರ್ಭದಲ್ಲಿ ಅಭಿಮಾನ ಪೂರ್ವಕವಾಗಿ ಸ್ಮರಿಸಲಾಗುವುದು ಎಂದು ತಿಳಿಸಿರುವ ಬಸವರಾಜ ಹೊರಟ್ಟಿ ನಿನ್ನೆ ನಡೆದ ಸಚಿವಸಂಪುಟದ ಸಭೆಯಲ್ಲಿ “ಕರ್ನಾಟಕದ ಸಾಂಸ್ಕøತಿಕ ನಾಯಕರನ್ನಾಗಿ” ವಿಶ್ವಗುರು ಬಸವಣ್ಣನವರ ಹೆಸರನ್ನು ಘೋಷಿಸಿದ್ದು, ಇದಕ್ಕಾಗಿ ನಾಡಿನ ಜನತೆಯ ಪರವಾಗಿ ಇದಕ್ಕಾಗಿ ಮತ್ತೊಮ್ಮೆ ರಾಜ್ಯದ ಮುಖ್ಯಮಂತ್ರಿಗಳಿಗೆ ಹಾಗೂ ರಾಜ್ಯದ ಎಲ್ಲಾ ಸಚಿವರಿಗೆ ಅಭಿನಂದನೆ ಸಲ್ಲಿಸುವುದಾಗಿ ತಿಳಿಸಿದ್ದಾರೆ.