ನವದೆಹಲಿ/ಬೆಂಗಳೂರು: ಉಪಮುಖ್ಯಮಂತ್ರಿ ಹಾಗೂ ಪ್ರಮುಖ ಮತ್ತು ಮಧ್ಯಮ ನೀರಾವರಿ ಸಚಿವ ಡಿ.ಕೆ. ಶಿವಕುಮಾರ್ ಅವರು ನವದೆಹಲಿಯ ಅಕ್ಬರ್ ರೋಡ್, ಜನಪಥ್ ನಿವಾಸದಲ್ಲಿ ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿಗಳ ಸಚಿವರಾದ ನಿತಿನ್ ಗಡ್ಕರಿ ಅವರನ್ನು ಭೇಟಿ ಮಾಡಿ ಸಮಾಲೋಚನೆ ನಡೆಸಿದರು.
ಕೇಂದ್ರ ಸಚಿವರ ಭೇಟಿ ವೇಳೆ ಹೆದ್ದಾರಿಗಳು, ರಾಜ್ಯದ ಸರಿಗೆಗಳ ಬಗ್ಗೆ ಅವರು ಸಾಕಷ್ಟು ವಿಚಾರಗಳನ್ನು ಚರ್ಚೆ ಮಾಡಿದರು, ಹೆದ್ದಾರಿಗಳಿಗೆ ಸಂಬಂಧಿಸಿದಂತೆ ಹಾಗೂ ರಾಜ್ಯದ ಹೆದ್ದಾರಿಗಳಿಗೆ ಅನುದಾನದ ವಿಚಾರಗಳನ್ನು ಸಹ ಪ್ರಸ್ತಾಪವನ್ನು ಮಾಡಿದರು.
ಈ ಸಂದರ್ಭದಲ್ಲಿ ಬಿಬಿಎಂಪಿ ಆಡಳಿತಾಧಿಕಾರಿ ತುಷಾರ್ ಗಿರಿನಾಥ್, ಮುಖ್ಯ ಆಯುಕ್ತ ಮಹೇಶ್ವರರಾವ್, ಉಪಮುಖ್ಯಮಂತ್ರಿ ಕಾರ್ಯದರ್ಶಿ ರಾಜೇಂದ್ರ ಚೋಳನ್ ಮತ್ತಿತರರು ಉಪಸ್ಥಿತರಿದ್ದರು.