ಬೆಂಗಳೂರು: ನಿಗಮದ ವಾಹನದಲ್ಲಿ ಪ್ರಯಾಣಿಸುವಾಗ ಪ್ರಯಾಣಿಕರು ಅಪಘಾತದಲ್ಲಿ ಮರಣ ಹೊಂದಿದ ಅವಲಂಭಿತರುವೆ ಪರಿಹಾರದ ಚೆಕ್ ವಿತರಣೆ ಮಾಡಲಾಯಿತು.
ಬೆಂಗಳೂರಿನ ಶಾಂತಿನಗರದ ksrtc ನಿಗಮದಲ್ಲಿ ಅವಲಂಭಿತರಿಗೆ ಪರಿಹಾರದ ಚೆಕ್ ವಿತರಣೆ ಮಾಡಲಾಯಿತು.ಸಾರಿಗೆ ಮತ್ತು ಮುಜರಾಯಿ ಸಚಿವರಾದ ರಾಮಲಿಂಗಾ ರೆಡ್ಡಿ ರವರು ಹಾಗೂ ಅಧ್ಯಕ್ಷರು ಕ ರಾ ರ ಸಾ ನಿಗಮ ಎಸ್ ಆರ್ ಶ್ರೀನಿವಾಸ್(ವಾಸು) ರವರು , ನಿಗಮದ ವಾಹನದಲ್ಲಿ ಪ್ರಯಾಣಿಸುತ್ತಿದ್ದ ಓರ್ವ ಪ್ರಯಾಣಿಕರು ಅಪಘಾತದಲ್ಲಿ ಮೃತಪಟ್ಟ ಹಿನ್ನಲೆಯಲ್ಲಿ ಮೃತರ ಅವಲಂಬಿತರಿಗೆ ರೂ 10 ಲಕ್ಷ ಅಪಘಾತ ಪರಿಹಾರದ ಚೆಕ್ ಅನ್ನು ವಿತರಿಸಿದರು.
ನಿಗಮದ ಬಸ್ಸುಗಳಲ್ಲಿ ಪ್ರಯಾಣಿಸುವ ಪ್ರಯಾಣಿಕರು ಬಸ್ಸಿನ ಅಪಘಾತದಲ್ಲಿ ಮೃತಪಟ್ಟಲ್ಲಿ ಪ್ರಯಾಣಿಕರ ಅವಲಂಬಿತರಿಗೆ ಈ ಹಿಂದೆ ರೂ. 3 ಲಕ್ಷ ಪರಿಹಾರ ಚೆಕ್ ಅನ್ನು ನೀಡಲಾಗುತ್ತಿತ್ತು. ಅವಲಂಭಿತರಿಗೆ ಹೆಚ್ಚಿನ ಆರ್ಥಿಕ ಸೌಲಭ್ಯವನ್ನು ಒದಗಿಸುವ ದೃಷ್ಟಿಯಿಂದ ದಿನಾಂಕ 01/01/2024 ರಿಂದ ಜಾರಿಗೆ ಬರುವಂತೆ ಈ ಪರಿಹಾರ ಮೊತ್ತವನ್ನು ರೂ. 10 ಲಕ್ಷಗಳಿಗೆ ಹೆಚ್ಚಿಸಲಾಗಿರುತ್ತದೆ.
04/02/2024 ರಂದು ಹಾಸನ ವಿಭಾಗದ, ಚನ್ನರಾಯಪಟ್ಟಣ ಘಟಕದ ವಾಹನ ಸಂಖ್ಯೆ ಕೆಎ-13-ಎಫ್-2261 ಬೆಂಗಳೂರು ಧರ್ಮಸ್ಥಳ ಮಾರ್ಗದಲ್ಲಿ ಕಾರ್ಯಾಚರಣೆಯಲ್ಲಿರುವಾಗ ಸಕಲೇಶಪುರದ ಸಮೀಪ ಬಾಗೆ ಎಂಬ ಸ್ಥಳದ ತಿರುವಿನಲ್ಲಿ ಅಪಘಾತಕ್ಕೆ ಒಳಪಟ್ಟು ವಾಹನದಲ್ಲಿ ಪ್ರಯಾಣಿಸುತ್ತಿದ್ದ ಜಿ.ಎನ್ ಅಮೃತ್, 34 ವರ್ಷರವರು ಸ್ಥಳದಲ್ಲಿಯೇ ಮೃತಪಟ್ಟಿರುತ್ತಾರೆ. ಮೃತರ ತಂದೆಯಾದ ಜಿ.ಡಿ ನಾಗರಾಜುರವರಿಗೆ ರೂ 10 ಲಕ್ಷಗಳ ಅಪಘಾತ ಪರಿಹಾರದ ಚೆಕ್ ಅನ್ನು ವಿತರಿಸಿ ಸಾಂತ್ವನ ಹೇಳಲಾಯಿತು.
ಸಚಿವರಾದ ರಾಮಲಿಂಗಾರೆಡ್ಡಿ ಮಾತನಾಡಿ, ಅಪಘಾತಗಳು ಆಕಸ್ಮಿಕವೇ ಆದರೂ ಅದರಿಂದಾಗುವ ಪ್ರಾಣ ಹಾನಿ ಮತ್ತು ಕುಟುಂಬಕ್ಕೆ ಉಂಟಾಗುವ ನಷ್ಟವನ್ನು ಭರಿಸಲು ಅಸಾಧ್ಯ. ಆದರೂ ನಿಗಮವು ಪ್ರಯಾಣಿಕರೆಡೆಗಿನ ತನ್ನ ಜವಾಬ್ದಾರಿಯನ್ನು ನಿರ್ವಹಿಸುವ ನಿಟ್ಟಿನಲ್ಲಿ ಈ ಕ್ರಮವನ್ನು ಜಾರಿಗೊಳಿಸಲಾಗಿದೆ, ಹಾಗೂ ಇತ್ತೀಚೆಗಷ್ಟೇ ಅಪಘಾತಗಳನ್ನು ಕಡಿಮೆಗೊಳಿಸುವ ನಿಟ್ಟಿನಲ್ಲಿ ರಾತ್ರಿ ಪಾಳಿಯ ಬಸ್ಸುಗಳಲ್ಲಿ ಕರ್ತವ್ಯ ನಿರ್ವಹಿಸುವ ಚಾಲಕರಿಗೆ ಫ್ಲಾಸ್ಕ್ ( ಕಾಪಿ/ಟೀ/ಬಿಸಿನೀರು ಕುಡಿಯಲು ಅನುವಾಗುವಂತೆ) ನೀಡಲಾಗಿದೆ ಎಂದು ತಿಳಿಸಿ ಆ ದೇವರು ತಮ್ಮ ಕುಟುಂಬಕ್ಕೆ ಈ ದುಃಖವನ್ನು ಭರಿಸುವ ಶಕ್ತಿ ನೀಡಲಿ ಎಂದು ತಿಳಿಸಿದರು.
ಅಧ್ಯಕ್ಷರಾದ ಶ್ರೀನಿವಾಸ್ ಮಾತನಾಡಿ, ಸಾರಿಗೆಯಲ್ಲಿ ಅಪಘಾತಗಳನ್ನು ತಡೆಗಟ್ಟಲು ಸಂಸ್ಥೆಯು ಹಲವಾರು ಕ್ರಮಗಳನ್ನು ತೆಗೆದುಕೊಂಡಿದೆ, ಆದರೂ ಮತ್ತೊಬ್ಬರ ತಪ್ಪಿಗೆ ಸಾವುಗಳು ಸ್ಬವಿಸುತ್ತವೆ ಎಂದು ತಿಳಿಸಿ, ಕುಟುಂಬದವರಿಗೆ ಸಾಂತ್ವನ ಹೇಳಿದರು..
ಈ ಸಂದರ್ಭದಲ್ಲಿ ವಿ.ಅನ್ಬುಕುಮಾರ್, ಭಾ.ಆ.ಸೇ., ವ್ಯವಸ್ಥಾಪಕ ನಿರ್ದೇಶಕರು, ಕ ರಾ ರ ಸಾ ನಿಗಮ, ಡಾ. ನಂದಿನಿ ದೇವಿ. ಕೆ, ಭಾ.ಆ.ಸೇ, ನಿರ್ದೇಶಕರು (ಸಿಬ್ಬಂದಿ ಮತ್ತು ಜಾಗೃತೆ), ನಿಗಮದ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಭಾಗವಹಿಸಿದ್ದರು.